ಉಡುಪಿಯಲ್ಲಿ ಹಮ್ಮಿಕೊಂಡ ಹಡಿಲು ಭೂಮಿ ಕೃಷಿ ಆಂದೋಲನದಡಿ ಸುಮಾರು 2000 ಎಕರೆ ಹಡಿಲು ಭೂಮಿಯನ್ನು ಆಧುನಿಕ ತಂತ್ರಜ್ಞಾನ ಬಳಸಿ ಸಾವಯುವ ಪದ್ಧತಿಯಲ್ಲಿ ಕೃಷಿ ಮಾಡಲಾಗುತ್ತಿದೆ. ಈ ಕೃಷಿ ಚಟುವಟಿಕೆಗಳನ್ನು ನಡೆಸಲು ತಗಲುವ ವೆಚ್ಚಗಳನ್ನು ಕೇದಾರೋತ್ಥಾನ ಟ್ರಸ್ಟ್ ಮೂಲಕ ಭರಿಸಲಾಗುತ್ತಿರುವುದರಿಂದ ಕೇದಾರೋತ್ಥಾನ ಟ್ರಸ್ಟ್ ಗೆ ಪೇಜಾವರ ಮಠದ ಶ್ರೀ ಶ್ರೀ ಶ್ರೀ ವಿಶ್ವಪ್ರಸನ್ನತೀರ್ಥ ಶ್ರೀಪಾದರು ರೂ. 1.10 ಲಕ್ಷ ರೂಪಾಯಿ ದೇಣಿಗೆಯಾಗಿ ನೀಡಿದ್ದು, ಶುಕ್ರವಾರ ಮಠದಲ್ಲಿ ಟ್ರಸ್ಟ್ ಅಧ್ಯಕ್ಷ, ಶಾಸಕ ಕೆ. ರಘುಪತಿ ಭಟ್ ಅವರಿಗೆ ಶ್ರೀಗಳು ಚೆಕ್ ಹಸ್ತಾಂತರಿಸಿದರು.
ಈ ಸಂದರ್ಭದಲ್ಲಿ ಕೇದಾರೋತ್ಥಾನ ಟ್ರಸ್ಟ್ ನ ಪ್ರಧಾನ ಕಾರ್ಯದರ್ಶಿಗಳಾದ ಮುರಳಿ ಕಡೆಕಾರ್, ಕೋಶಾಧಿಕಾರಿಗಳಾದ ಕೆ. ರಾಘವೇಂದ್ರ ಕಿಣಿ, ಪೇಜಾವರ ಮಠದ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳಾದ ಸುಬ್ರಹ್ಮಣ್ಯ ಭಟ್, ವಾಸುದೇವ್ ಭಟ್, ದಿನೇಶ್ ಉಪಸ್ಥಿತರಿದ್ದರು.