ಜೂನ್ 21 ರಿಂದ 18 ವರ್ಷ ಮೇಲ್ಪಟ್ಟ ಎಲ್ಲರಿಗೂ ಉಚಿತ ಲಸಿಕೆ ನೀಡಲಾಗುವುದು ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದರು. ಸೋಮವಾರ ದೇಶವನ್ನು ಉದ್ದೇಶಿಸಿ ಮಾತನಾಡಿದ ಅವರು, ಉತ್ಪಾದನೆಯಾಗಿರುವ ಲಸಿಕೆಯ ಶೇ. 75 ರಷ್ಟು ಡೋಸ್ ಗಳನ್ನು ಕೇಂದ್ರ ಸರ್ಕಾರವು ರಾಜ್ಯ ಸರ್ಕಾರಗಳಿಗೆ ಉಚಿತವಾಗಿ ನೀಡಲಿದೆ.
ಇನ್ನು ಮುಂದೆ ರಾಜ್ಯ ಸರ್ಕಾರಗಳು ಲಸಿಕೆಗಾಗಿ ಖರ್ಚು ಮಾಡುವಂತಿಲ್ಲ. ಲಸಿಕೆ ಉತ್ಪಾದಕರಿಂದ ನೇರವಾಗಿ ಕೇಂದ್ರ ಸರ್ಕಾರ ಲಸಿಕೆ ಖರೀದಿಸಿ ರಾಜ್ಯಗಳಿಗೆ ಬೇಡಿಕೆಗೆ ತಕ್ಕಂತೆ ಒದಗಿಸಲಿದೆ.
ಪ್ರಧಾನ ಮಂತ್ರಿ ಗರೀಬ್ ಕಲ್ಯಾಣ್ ಅನ್ನ್ ಯೋಜನೆಯ ಮೂಲಕ ದೀಪಾವಳಿಯವರೆಗೆ 80 ಕೋಟಿ ಅರ್ಹರಿಗೆ ಆಹಾರ ಧಾನ್ಯಗಳನ್ನು ಕೇಂದ್ರ ಸರ್ಕಾರದ ವತಿಯಿಂದ ಒದಗಿಸಲಾಗುವುದು ಎಂದು ಪ್ರಧಾನಿ ನರೇಂದ್ರ ಮೋದಿ ತಮ್ಮ ಮಾತಿನಲ್ಲಿ ಉಲ್ಲೇಖಿಸಿದರು.
ಪ್ರಧಾನಿಯವರ ನಿರ್ಧಾರವನ್ನು ಬಹುತೇಕ ಎಲ್ಲಾ ರಾಜ್ಯ ಸರ್ಕಾರಗಳ ಮುಖ್ಯಮಂತ್ರಿಗಳು ಶ್ಲಾಘಿಸಿದ್ದಾರೆ.
ಕೋವಿಡ್ ವಿರುದ್ಧ ಹೋರಾಟದಲ್ಲಿ ಇದೊಂದು ಐತಿಹಾಸಿಕ ನಿರ್ಧಾರ ಎಂದು ಆಂಧ್ರಪ್ರದೇಶ ಮುಖ್ಯಮಂತ್ರಿ ವೈ.ಎಸ್. ಜಗನ್ ಮೋಹನ್ ರೆಡ್ಡಿ ಪ್ರತಿಕ್ರಯಿಸಿದ್ದಾರೆ.