ಭಾರತೀಯ ರೆಡ್‌ಕ್ರಾಸ್ ಸಂಸ್ಥೆ ಜಿಲ್ಲಾ ಘಟಕದ ವತಿಯಿಂದ ಸೋಮವಾರ ಬಿಪಾಪ್ ಸಿಸ್ಟಮ್ ಯಂತ್ರವನ್ನು ಜಿಲ್ಲಾಸ್ಪತ್ರೆಯ ಜಿಲ್ಲಾ ಸರ್ಜನ್ ಡಾ. ಮಧುಸೂದನ ನಾಯಕ್ ಅವರಿಗೆ ಹಸ್ತಾಂತರಿಸಲಾಯಿತು. ಜಿಲ್ಲಾ ಶಾಖೆಯಿಂದ ಸುಮಾರು ಒಂದು ಲಕ್ಷ ರೂಪಾಯಿ ಮೌಲ್ಯದ ಈ ಯಂತ್ರದೊಂದಿಗೆ 50 ಪಿಪಿ ಕಿಟ್, ಒಕ್ಸಿಮೀಟರ್, ಟಾರ್ಪಲ್‌ಗಳನ್ನು ನೀಡಿರುವುದಲ್ಲದೆ, ಮುಂದಿನ ದಿನಗಳಲ್ಲಿ ಎರಡು ವೆಂಟಿಲೇಟರ್‌ಗಳನ್ನು, ಚಂಡಮಾರುತದಲ್ಲಿ ಸಿಲುಕಿದವರಿಗೆ ಅಗತ್ಯವಿರುವ ಕಿಚನ್ ಕಿಟ್ ನೀಡಲಿರುವುದಾಗಿ ಭಾರತೀಯ ರೆಡ್ ಕ್ರಾಸ್ ಸಂಸ್ಥೆ ಜಿಲ್ಲಾ ಘಟಕದ ಸಭಾಪತಿ ಡಾ. ತಲ್ಲೂರು ಶಿವರಾಮ ಶೆಟ್ಟಿ ತಿಳಿಸಿದರು.
ಕಾರ್ಯಕ್ರಮದಲ್ಲಿ ಗೌರವ ಖಜಾಂಚಿ ಡಾ. ಅರವಿಂದ ನಾಯಕ್ ಅಮ್ಮುಂಜೆ, ಡಿಡಿಆರ್‌ಸಿ ಕಾರ್ಯದರ್ಶಿ ಕೆ ಸನ್ಮತ್ ಹೆಗ್ಡೆ, ಆಡಳಿತ ಮಂಡಳಿ ಸದಸ್ಯೆ ರಮಾದೇವಿ, ಸದಸ್ಯ ಕಿಶನ್ ಹೆಗ್ಡೆ ಕೊಳ್ಕೆಬೈಲ್, ರೆಡ್‌ಕ್ರಾಸ್ ಸಂಸ್ಥೆಯ ಬ್ರಹ್ಮಾವರ ತಾಲೂಕು ಸಭಾಪತಿ ರಾಜಾರಾಮ ಶೆಟ್ಟಿ, ರೆಡ್ ಕ್ರಾಸ್ ಸಂಸ್ಥೆಯ ಸಿಬ್ಬಂದಿ ಹಾಗೂ ಡಿಡಿಆರ್ ಸಿಬ್ಬಂದಿಗಳು ಉಪಸ್ಥಿತರಿದ್ದರು. ಉಪಸಭಾಪತಿ ಡಾ. ಅಶೋಕ್ ಕುಮಾರ್ ವೈ.ಜಿ. ಸ್ವಾಗತಿಸಿದರು. ಗೌರವ ಕಾರ್ಯದರ್ಶಿ ಕೆ ಜಯರಾಂ ಆಚಾರ್ಯ ಸಾಲಿಗ್ರಾಮ ಕಾರ್ಯಕ್ರಮ ನಿರೂಪಿಸಿದರು.