ಉಡುಪಿಯಲ್ಲಿ ಹಮ್ಮಿಕೊಂಡಿರುವ “ಹಡಿಲು ಭೂಮಿ ಕೃಷಿ ಅಂದೋಲನ”ದಡಿ ಕೆಮ್ಮಣ್ಣು ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಹಡಿಲು ಕೃಷಿ ಭೂಮಿ ಕೃಷಿ ಚಟುವಟಿಕೆಗಳು ಭರದಿಂದ ಸಾಗುತ್ತಿದ್ದು ಶಾಸಕ ಕೆ. ರಘುಪತಿ ಭಟ್ ಅವರು ಗುರುವಾರ ಸ್ಥಳಕ್ಕೆ ಭೇಟಿ ನೀಡಿ ವೀಕ್ಷಿಸಿದರು.
ಈ ಭಾಗದಲ್ಲಿ ಕೇದಾರೋತ್ಥಾನ ಟ್ರಸ್ಟ್ ಮೂಲಕ 15 ಎಕರೆ ಹಡಿಲು ಭೂಮಿಯನ್ನು ಸಾವಯುವ ಕೃಷಿ ಮಾಡಲಾಗುತ್ತಿದ್ದು, ಕೃಷಿ ಭೂಮಿ ಸುತ್ತಮುತ್ತಲಿನ ತೋಡುಗಳನ್ನು ಅಭಿವೃದ್ಧಿ ಗೊಳಿಸಲಾಗಿದೆ. ಕೃಷಿ ಚಟುವಟಿಕೆಗಳು ನಡೆಯುತ್ತಿದ್ದು ಪ್ರಥಮ ಹಂತದ ಉಳುಮೆ ಕಾರ್ಯ ಪೂರ್ಣಗೊಂಡಿದೆ. ಊರಿನ ಹಿರಿಯರು, ಭೂ ಮಾಲಕರು ಉತ್ಸಾಹದಿಂದ ಕೃಷಿ ಚಟುವಟಿಕೆಯಲ್ಲಿ ತೊಡಗಿಸಿಕೊಂಡಿದ್ದಾರೆ.
ಈ ಸಂದರ್ಭದಲ್ಲಿ ಕೇದಾರೋತ್ಥಾನ ಟ್ರಸ್ಟ್ ನ ಪ್ರಧಾನ ಕಾರ್ಯದರ್ಶಿಗಳಾದ ಮುರಳಿ ಕಡೆಕಾರ್, ಕೋಶಾಧಿಕಾರಿಗಳಾದ ರಾಘವೇಂದ್ರ ಕಿಣಿ, ಗಣಪತಿ ವ್ಯವಸಾಯ ಸಹಕಾರಿ ಸಂಘ ಅಧ್ಯಕ್ಷರಾದ ಸತೀಶ್ ಶೆಟ್ಟಿ, ಕೆಮ್ಮಣ್ಣು ಗ್ರಾಮ ಪಂಚಾಯತ್ ಸದಸ್ಯರಾದ ಪ್ರಶಾಂತ್, ಪುರಂದರ, ಸಂಧ್ಯಾ, ಲೋಕೇಶ್ ಮೆಂಡನ್, ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷರಾದ ನಂದಕಿಶೋರ್, ಮಾಜಿ ಅಧ್ಯಕ್ಷರಾದ ವೆಂಕಟೇಶ್ ಕುಂದರ್, ಮಾಜಿ ಸದಸ್ಯರಾದ ಶ್ರೀಧರ್ ಕೆಮ್ಮಣ್ಣು, ರವೀಂದ್ರ ಶ್ರೀಯಾನ್, ಸ್ಥಳೀಯರಾದ ಸರ್ವೋತ್ತಮ ಶೆಟ್ಟಿ ಯಾಲಕೆರೆ ಮನೆ, ಪ್ರಶಾಂತ್ ಬೆಂಗ್ರೆ ಮತ್ತು ಕೃಷಿ ತೋಟಗಾರಿಕೆ ವಿಶ್ವವಿದ್ಯಾಲಯ ಶಿವಮೊಗ್ಗ ಮತ್ತು ವಲಯ ಕೃಷಿ ಮತ್ತು ತೋಟಗಾರಿಕೆ ಸಂಶೋಧನಾ ಕೇಂದ್ರ ಬ್ರಹ್ಮಾವರದ ಹಿರಿಯ ಕ್ಷೇತ್ರ ಅಧಿಕಾರಿಗಳಾದ ಶಂಕರ್ ಮುಂತಾದವರು ಉಪಸ್ಥಿತರಿದ್ದರು.