ಕೋವಿಡ್ ನಿಂದ ಜನಸಾಮಾನ್ಯರು ಬಹಳಷ್ಟು ಪಾಠಗಳನ್ನು ಕಲಿತಿದ್ದಾರೆ. ಜನರು ಪರಸ್ಪರ ಸಹಾಯ ಮಾಡಿಕೊಂಡು ಬದುಕುವ ರೀತಿಯನ್ನು ಮೈಗೂಡಿಸಿಕೊಂಡಿದ್ದಾರೆ ಎಂದು ಅಪರ ಜಿಲ್ಲಾಧಿಕಾರಿ ಸದಾಶಿವ ಪ್ರಭು ಹೇಳಿದರು. ಇಂದ್ರಾಳಿ ಲಯನ್ಸ್ ಕ್ಲಬ್ ವತಿಯಿಂದ ಉಡುಪಿ ಟೌನ್ ಹಾಲಿನಲ್ಲಿ ಮೂರುವರೆ ಲಕ್ಷದ ಆಹಾರ ಕಿಟ್, ಮಾಸ್ಕ್, ಸ್ಯಾನಿಟೈಸರ್ ಮುಂತಾದ ವಸ್ತುಗಳನ್ನು ವಿತರಣೆ ಮಾಡುವ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
ಉಡುಪಿ ನಗರಸಭೆ ಪೌರಾಯುಕ್ತ ಉದಯ ಕುಮಾರ್ ಶೆಟ್ಟಿ, ದಕ್ಷಿಣ ಕನ್ನಡ ಉಡುಪಿ ಮೀನು ಮಾರಾಟ ಫೆಡರೇಶನ್ ಅಧ್ಯಕ್ಷ ಯಶ್ಪಾಲ್ ಸುವರ್ಣ, ಲಯನ್ಸ್ ಜಿಲ್ಲಾ ಗವರ್ನರ್ ವಿಶ್ವನಾಥ್ ಶೆಟ್ಟಿ, ಬಡಗಬೆಟ್ಟು ಕೋ ಆಪರೇಟಿವ್ ಸೊಸೈಟಿ ಪ್ರಧಾನ ವ್ಯವಸ್ಥಾಪಕ ಜಯಕರ್ ಶೆಟ್ಟಿ ಇಂದ್ರಾಳಿ, ಲಯನ್ಸ್ ಕ್ಲಬ್ ಇಂದ್ರಾಳಿ ಅಧ್ಯಕ್ಷ ಮನೋಹರ್ ಶೆಟ್ಟಿ ತೋನ್ಸೆ, ಕಾರ್ಯದರ್ಶಿ ಚಂದ್ರಶೇಖರ್ ರಾವ್ ಉಪಸ್ಥಿತರಿದ್ದರು. ರತ್ನಾಕರ ಇಂದ್ರಾಳಿ ಕಾರ್ಯಕ್ರಮ ನಿರೂಪಿಸಿದರು.