ಉಡುಪಿ ಜಿಲ್ಲೆಯಲ್ಲಿ 123 ಮಂದಿಗೆ ಸೋಂಕು ದೃಢಪಟ್ಟಿದೆ. ಉಡುಪಿ ತಾಲೂಕು- 66, ಕುಂದಾಪುರ-43, ಕಾರ್ಕಳ- 11 ಮತ್ತು ಹೊರ ಜಿಲ್ಲೆಯ 3 ಮಂದಿ ಸೋಂಕಿಗೆ ಒಳಗಾಗಿದ್ದಾರೆ. 460 ಮಂದಿ ಗುಣಮುಖರಾಗಿದ್ದು ಇಲ್ಲಿಯವರೆಗೆ 61155 ಮಂದಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಜಿಲ್ಲೆಯಲ್ಲಿ 2883 ಸಕ್ರಿಯ ಪ್ರಕರಣಗಳಿವೆ. ಜಿಲ್ಲೆಯಲ್ಲಿ ಇಬ್ಬರು ಸೋಂಕಿಗೆ ಬಲಿಯಾಗಿದ್ದಾರೆ. ಇಲ್ಲಿಯವರೆಗೆ 362 ಮಂದಿ ಕೊರೊನಾ ಸೋಂಕಿನಿಂದ ಮೃತಪಟ್ಟಿದ್ದಾರೆ.
ಜೂನ್ 13 ರಂದು 1454 ಮಂದಿಯನ್ನು ಕೋವಿಡ್ ಪರೀಕ್ಷೆಗೆ ಒಳಪಡಿಸಲಾಗಿದೆ. ಇಲ್ಲಿಯವರೆಗೆ ಒಟ್ಟು 637582 ಮಂದಿಯನ್ನು ಪರೀಕ್ಷಿಸಲಾಗಿದೆ.