ಉಡುಪಿ ಜಿಲ್ಲೆಯಾದ್ಯಂತ ಶುಕ್ರವಾರ (ಜೂನ್ 18) ರಾತ್ರಿ 7 ಗಂಟೆಯಿಂದ ಸೋಮವಾರ (ಜೂನ್ 21) ಬೆಳಗ್ಗೆ 5 ಗಂಟೆಯವರೆಗೆ ವೀಕೆಂಡ್ ಕರ್ಫ್ಯೂ ಜಾರಿಯಾಗಲಿದೆ ಎಂದು ಜಿಲ್ಲಾಧಿಕಾರಿ ಜಿ. ಜಗದೀಶ್ ಹೇಳಿದರು.
ಈ ಅವಧಿಯಲ್ಲಿ ಕೇಂದ್ರ ಮತ್ತು ರಾಜ್ಯ ಸರ್ಕಾರದ ಸಂಬಂಧಪಟ್ಟ ಇಲಾಖೆಗಳು, ತುರ್ತು ಮತ್ತು ಅಗತ್ಯ ಸೇವೆ, ಟೆಲಿಕಾಂ ಮತ್ತು ಇಂಟರ್ನೆಟ್ ಸೇವೆ ಒದಗಿಸುವ ಇಲಾಖೆಗಳು ಮತ್ತು ಕೈಗಾರಿಕೆ ಕಾರ್ಯನಿರ್ವಹಿಸಲು ಅನುಮತಿಯಿದ್ದು, ಈ ಕಚೇರಿಗಳ ಮತ್ತು ಸಂಸ್ಥೆಗಳ ನೌಕರರು ಸೂಕ್ತ ಗುರುತಿನ ಚೀಟಿಯೊಂದಿಗೆ ಸಂಚರಿಸಬಹುದು.
ಬೆಳಗ್ಗೆ 6 ರಿಂದ ಮಧ್ಯಾಹ್ನ 2 ಗಂಟೆಯವರೆಗೆ ಆಹಾರ ಪದಾರ್ಥಗಳು, ದಿನಸಿ ವಸ್ತುಗಳು, ಹೊಟೇಲುಗಳಲ್ಲಿ ಪಾರ್ಸೆಲ್ ಮಾತ್ರ, ಹಣ್ಣು ಮತ್ತು ತರಕಾರಿ, ಮೀನು ಮತ್ತು ಮಾಂಸ ಡೈರಿ ಮತ್ತು ಹಾಲಿನ ಬೂತ್ ಗಳು ತೆರೆಯಲು ಮತ್ತು ಪಶು ಆಹಾರ ಮಾರಾಟಕ್ಕೆ ಅನುಮತಿ ನೀಡಲಾಗಿದೆ. ಬೀದಿ ಬದಿ ವ್ಯಾಪಾರಿಗಳು ಹಾಗೂ ಪಡಿತರ ಅಂಗಡಿಗಳು ಸಹ ಈ ಸಮಯದಲ್ಲಿ (ಬೆಳಗ್ಗೆ 6 ರಿಂದ ಮಧ್ಯಾಹ್ನ 2 ಗಂಟೆಯವರೆಗೆ) ಕಾರ್ಯನಿರ್ವಹಿಸಬಹುದು. ಆದರೆ ಬೀದಿ ಬದಿ ವ್ಯಾಪಾರಿಗಳು ಯಾವುದೇ ಆಹಾರ ಪದಾರ್ಥಗಳನ್ನು ಮಾರುವಂತಿಲ್ಲ. ಬಾರ್ ಮತ್ತು ರೆಸ್ಟೋರೆಂಟ್ ಗಳಲ್ಲಿ (ಬೆಳಗ್ಗೆ 6 ರಿಂದ ಮಧ್ಯಾಹ್ನ 2 ಗಂಟೆಯವರೆಗೆ) ಮದ್ಯ ಪಾರ್ಸೆಲ್ ಗೆ ಅವಕಾಶವಿದೆ. ಹೋಂ ಡೆಲಿವರಿ ಸೇವೆ ಒದಗಿಸುವವರಿಗೆ ಈ ಹಿಂದಿನಂತೆ ಯಾವುದೇ ನಿರ್ಭಂಧಗಳಿಲ್ಲ. ತುರ್ತು ಆರೋಗ್ಯ ವಿಚಾರಕ್ಕೆ ಸಂಚರಿಸುವವರು, ರೈಲು ಮತ್ತು ವಿಮಾನ ಪ್ರಯಾಣಕ್ಕೆ ತೆರಳುವವರು ಪ್ರಯಾಣದ ಟಿಕೆಟ್ ನೊಂದಿಗೆ ಪ್ರಯಾಣಿಸಲು ಅನುಮತಿ ನೀಡಲಾಗಿದೆ ಎಂದು ಜಿಲ್ಲಾಧಿಕಾರಿ ಜಿ. ಜಗದೀಶ್ ಹೇಳಿದರು.
ಸದರಿ ಅವಧಿಯಲ್ಲಿ ಈ ಕೆಳಕಂಡ ಅಗತ್ಯ ಮತ್ತು ತುರ್ತು ಚಟುವಟಿಕೆಗಳಿಗೆ ಹೊರತುಪಡಿಸಿ ಜನರ ಓಡಾಟಗಳನ್ನು ಕಡ್ಡಾಯವಾಗಿ ನಿಷೇಧಿಸಲಾಗಿದೆ.
ಸರ್ಕಾರಿ ಕಚೇರಿಗಳು ಕಾರ್ಯನಿರ್ವಹಿಸುತ್ತವೆ, ಎಲ್ಲಾ ವೈದ್ಯಕೀಯ ಸೇವೆಗಳು ( ಆಸ್ಪತ್ರೆಗಳು, ನರ್ಸಿಂಗ್ ಹೋಂಗಳು, ಕ್ಲಿನಿಕ್ಸ್ , ಕ್ಲಿನಿಕಲ್ ಲ್ಯಾಬ್ಸ್ ಔಷಧಾಲಯಗಳು, ಜನ ಔಷಧಿ ಕೇಂದ್ರಗಳು, ರಕ್ತ ಸಂಗ್ರಹ ಕೇಂದ್ರಗಳು, ರೋಗಿಗಳು ಮತ್ತು ಅವರ ಪರಿಚಾರಕರು ಮತ್ತು ವ್ಯಾಕ್ಸಿನೇಷನ್ ತೆಗೆದುಕೊಳ್ಳುವವರು), ಅವಶ್ಯಕ ಸೇವೆಗಳನ್ನು ಪೂರೈಸುವ (emergency and essential services) ಮತ್ತು 24/7 ಸಮಯಾವಧಿಯಲ್ಲಿ ಕಾರ್ಯಚರಿಸ ಬೇಕಾಗಿರುವ ಕೈಗಾರಿಕೆಗಳು / ಕಂಪನಿಗಳು / ಕೈಗಾರಿಕಾ ಸಂಸ್ಥೆಗಳು ಕಾರ್ಯಾನಿರ್ವಹಿಸಲು ಅನುಮತಿ ನೀಡಲಾಗಿದೆ, ದೂರವಾಣಿ ಹಾಗೂ ಅಂತರ್ಜಾಲ ಸೇವೆಯನ್ನು ಪೂರೈಸುವ ನೌಕರರು ಹಾಗೂ ವಾಹನಗಳು ಕಾರ್ಯಚರಿಸಲು ಅನುಮತಿಸಲಾಗಿದೆ, ರೆಸ್ಟೋರೆಂಟ್ ಗಳಲ್ಲಿ ಆಹಾರಗಳನ್ನು ತೆಗೆದುಕೊಂಡು ಹೋಗಲು ಮತ್ತು ಹೋಮ್ ಡೆಲಿವರಿ ಅವಕಾಶವಿದೆ, ಆಹಾರ, ದಿನಸಿ, ಹಣ್ಣುಗಳು ಮತ್ತು ತರಕಾರಿಗಳು, ಮಾಂಸ ಮತ್ತು ಮೀನು, ಡೈರಿ ಮತ್ತು ಹಾಲಿನ ಕೇಂದ್ರಗಳು, ಮತ್ತು ಪ್ರಾಣಿಗಳ ಮೇವನ್ನು ವ್ಯಾಪಾರ ಮಾಡುವ ಅಂಗಡಿಗಳಿಗೆ ಬೆಳಿಗ್ಗೆ 6 ರಿಂದ ಅಪರಾಹ್ನ 2 ಗಂಟೆಯವರೆಗೆ, ಬೀದಿಬದಿ ವ್ಯಾಪಾರಸ್ಥರು ಬೆಳಿಗ್ಗೆ 6 ರಿಂದ ಅಪರಾಹ್ನ 2 ಗಂಟೆಯವರೆಗೆ, ಸಾರ್ವಜನಿಕ ವಿತರಣಾ ವ್ಯವಸ್ಥೆಯ ಅಂಗಡಿಗಳಿಗೆ ಅವಕಾಶವಿದೆ, ಬೆಳಿಗ್ಗೆ 6 ರಿಂದ ಅಪರಾಹ್ನ 2 ಗಂಟೆಯವರೆಗೆ ಸ್ವತಂತ್ರ ಮದ್ಯದಂಗಡಿಗಳು ಮತ್ತು ಮಳಿಗೆಗಳಲ್ಲಿ ಬೆಳಿಗ್ಗೆ 6 ರಿಂದ ಅಪರಾಹ್ನ 2 ರವರೆಗೆ ಪಾರ್ಸೆಲ್ ಕೊಂಡು ಹೋಗಲು ಮಾತ್ರ ಅನುಮತಿಸಲಾಗಿದೆ, ಶವಸಂಸ್ಕಾರ /ಅಂತ್ಯಕ್ರಿಯೆಗಳನ್ನು ಗರಿಷ್ಠ 5 ಜನರೊಂದಿಗೆ ಕೋವಿಡ್ ಸಮುಚಿತ ವರ್ತನೆಯನ್ನು ಕಟ್ಟುನಿಟ್ಟಾಗಿ ಪಾಲಿಸುವುದು, ತಹಶೀಲ್ದಾರ್ ರಿಂದ ಅನುಮತಿಯನ್ನು ಪಡೆಯಲಾಗಿರುವ ಮದುವೆಯನ್ನು ಸರಳವಾಗಿ ಆಯಾ ಮನೆಗಳಲ್ಲಿ ಕುಟುಂಬದ ಸದಸ್ಯರು /ಸಂಬಂಧಿಕರು ಸೇರಿದಂತೆ 40 ಜನರನ್ನು ಒಳಗೊಂಡು ಮಾಡುವುದು, ದೂರದ ಪ್ರಯಾಣದ ರೈಲುಗಳು ಮತ್ತು ವಿಮಾನ ಪ್ರಯಾಣವನ್ನು ಅನುಮತಿಸಲಾಗಿದೆ. ಪ್ರಯಾಣ ಮಾಡುವ ಸಂಧರ್ಭದಲ್ಲಿ ಪ್ರಯಾಣಿಕರು ಸೂಕ್ತ ಪ್ರಯಾಣದ ದಾಖಲೆಗಳು / ಟಿಕೆಟುಗಳನ್ನು ತೋರಿಸಬೇಕು ಎಂದು ಜಿಲ್ಲಾಧಿಕಾರಿ ಜಿ ಜಗದೀಶ್ ತಿಳಿಸಿದ್ದಾರೆ.
ವಾರಾಂತ್ಯ ಕರ್ಫ್ಯೂ ಅವಧಿಯಲ್ಲಿ ಯಾವುದೇ ನಿಯಮಗಳ ಉಲ್ಲಂಘನೆಯಾಗದಂತೆ ಪೊಲೀಸ್ ಇಲಾಖೆ ಸಹಿತ ಎಲ್ಲಾ ಅಧಿಕಾರಿಗಳು ಕಾರ್ಯನಿರ್ವಹಿಸುವಂತೆ ತಿಳಿಸಿದ ಜಿಲ್ಲಾಧಿಕಾರಿ ಜಿ.ಜಗದೀಶ್, ಅನುಮತಿ ನೀಡಲಾದ ಚಟುವಟಿಕೆ ಹೊರತುಪಡಿಸಿ ಇತರೆ ಚಟುವಟಿಕೆ ನಡೆಸುವವರ ವಿರುದ್ದ ಹಾಗೂ ಕೋವಿಡ್ ನಿಯಮಗಳನ್ನು ಉಲ್ಲಂಘಿಸುವವರ ವಿರುದ್ದ ಕಠಿಣ ಕ್ರಮಗಳನ್ನು ಕೈಗೊಳ್ಳುವಂತೆ ಸೂಚನೆ ನೀಡಿದರು. ಸಾರ್ವಜನಿಕರು ವಾರಾಂತ್ಯ ಕರ್ಫ್ಯೂ ಸಂದರ್ಭದಲ್ಲಿ ಅನಗತ್ಯವಾಗಿ ಹೊರಗಡೆ ಬರಬಾರದು ಎಂದು ಜಿಲ್ಲಾಧಿಕಾರಿಯವರು ವಿನಂತಿಸಿದರು.