Saturday, November 23, 2024
Saturday, November 23, 2024

ಉಡುಪಿ: ಜೂನ್ 19ರಂದು ಲಸಿಕೆ ಲಭ್ಯತೆ ಬಗ್ಗೆ ಮಾಹಿತಿ

ಉಡುಪಿ: ಜೂನ್ 19ರಂದು ಲಸಿಕೆ ಲಭ್ಯತೆ ಬಗ್ಗೆ ಮಾಹಿತಿ

Date:

ಜಿಲ್ಲೆಯಲ್ಲಿ ಕೋವ್ಯಾಕ್ಸಿನ್ ಪ್ರಥಮ ಡೋಸ್ ಲಭ್ಯವಿರುವುದಿಲ್ಲ.

ಸರಕಾರಿ ತಾಯಿ ಮತ್ತು ಮಕ್ಕಳ (ಬಿ.ಆರ್.ಎಸ್) ಆಸ್ಪತ್ರೆ, ಉಡುಪಿ (ಸಮಯ: ಅಪರಾಹ್ನ 9.30 ರಿಂದ 4.30 ರ ವರೆಗೆ)- ದಿನಾಂಕ 25/06/2021 ರ ಒಳಗೆ ವಿದೇಶ ಪ್ರಯಾಣ ಮಾಡುವವರಲ್ಲಿ ಕೋವಿಶೀಲ್ಡ್ ಮೊದಲ ಡೋಸ್ ಲಸಿಕೆ ಪಡೆದು 28 ದಿನಗಳು ಮೀರಿದವರಿಗೆ ಮಾತ್ರ 2ನೇ ಡೋಸ್ ಕೋವಿಶೀಲ್ಡ್ ಲಸಿಕೆ (100 ಡೋಸ್ ಲಭ್ಯ)

ಜಿಲ್ಲಾ ಆಸ್ಪತ್ರೆ ಅಜ್ಜರಕಾಡು ಉಡುಪಿ (ಸೇಂಟ್ ಸಿಸಿಲಿ ಶಾಲೆ) (ಸಮಯ: ಅಪರಾಹ್ನ 1.30 ರಿಂದ 4.30 ರ ವರೆಗೆ)- 45 ವರ್ಷ ಮೇಲ್ಪಟ್ಟ ಸಾರ್ವಜನಿಕರು/ HCW/FLW(ಕೇಂದ್ರ ಸರಕಾರ ಗುರುತಿಸಿರುವ ಮುಂಚೂಣಿ ಕಾರ್ಯಕರ್ತರು)ಗಳಿಗೆ ಕೋವಿಶೀಲ್ಡ್ ಪ್ರಥಮ ಡೋಸ್ ಲಸಿಕೆ ಮತ್ತು 2ನೇ ಡೋಸ್ ಲಸಿಕೆ – (100 ಡೋಸ್ ಲಭ್ಯ)

ನಗರ ಪ್ರಾಥಮಿಕ ಆರೋಗ್ಯ ಕೇಂದ್ರ ಮಣಿಪಾಲ (ಮಾಧವ ಕೃಪಾ ಶಾಲೆ, ಮಣಿಪಾಲ) (ಸಮಯ: ಅಪರಾಹ್ನ 1.30 ರಿಂದ 4.30 ರ ವರೆಗೆ)-

1) ರಾಜ್ಯ ಸರಕಾರ ಗುರುತಿಸಿರುವ ಅನುಬಂಧ-1 ರಲ್ಲಿರುವ ಕೊರೋನ ಮುಂಚೂಣಿ ಕಾರ್ಯಕರ್ತರು/ದುರ್ಬಲ ಗುಂಪಿನ ಫಲಾನುಭವಿಗಳಿಗೆ ಕೋವಿಶೀಲ್ಡ್ ಲಸಿಕೆ-(130 ಡೋಸ್ ಲಭ್ಯ)

2) 45 ವರ್ಷ ಮೇಲ್ಪಟ್ಟ ಸಾರ್ವಜನಿಕರು/ HCW/FLW(ಕೇಂದ್ರ ಸರಕಾರ ಗುರುತಿಸಿರುವ ಮುಂಚೂಣಿ ಕಾರ್ಯಕರ್ತರು)ಗಳಿಗೆ ಕೋವಿಶೀಲ್ಡ್ ಪ್ರಥಮ ಡೋಸ್ ಲಸಿಕೆ ಮತ್ತು ೨ನೇ ಡೋಸ್ ಲಸಿಕೆ – (100 ಡೋಸ್ ಲಭ್ಯ)

3) ಕೋವ್ಯಾಕ್ಸಿನ್ ಪ್ರಥಮ ಡೋಸ್ ಲಸಿಕೆ ಪಡೆದು 4 ವಾರ (28 ದಿನ) ಮೀರಿದವರಿಗೆ ಕೋವ್ಯಾಕ್ಸಿನ್ 2ನೇ ಡೋಸ್ ಲಸಿಕೆ-(100 ಡೋಸ್ ಲಭ್ಯ)

ನಗರ ಪ್ರಾಥಮಿಕ ಆರೋಗ್ಯ ಕೇಂದ್ರ ಉಡುಪಿಯ ಹಳೆ ಕಟ್ಟಡ (ಅಲಂಕಾರ್ ಥಿಯೇಟರ್ ಹತ್ತಿರ) (ಸಮಯ: ಅಪರಾಹ್ನ 2.00 ರಿಂದ 4.30 ರ ವರೆಗೆ)- 45 ವರ್ಷ ಮೇಲ್ಪಟ್ಟ ಸಾರ್ವಜನಿಕರು/ HCW/FLW(ಕೇಂದ್ರ ಸರಕಾರ ಗುರುತಿಸಿರುವ ಮುಂಚೂಣಿ ಕಾರ್ಯಕರ್ತರು) ಗಳಿಗೆ ಕೋವಿಶೀಲ್ಡ್ ಪ್ರಥಮ ಡೋಸ್ ಲಸಿಕೆ ಮತ್ತು 2ನೇ ಡೋಸ್ ಲಸಿಕೆ – (100 ಡೋಸ್ ಲಭ್ಯ)

ಎಫ್.ಪಿ.ಎ.ಐ ಕುಕ್ಕಿಕಟ್ಟೆಯಲ್ಲಿ (ಇಂದಿರಾನಗರ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆ, ಇಂದಿರಾನಗರ) (ಸಮಯ: ಅಪರಾಹ್ನ 1.30 ರಿಂದ 4.30 ರ ವರೆಗೆ)- 45 ವರ್ಷ ಮೇಲ್ಪಟ್ಟ ಸಾರ್ವಜನಿಕರು/ HCW/FLW(ಕೇಂದ್ರ ಸರಕಾರ ಗುರುತಿಸಿರುವ ಮುಂಚೂಣಿ ಕಾರ್ಯಕರ್ತರು)ಗಳಿಗೆ ಕೋವಿಶೀಲ್ಡ್ ಪ್ರಥಮ ಡೋಸ್ ಲಸಿಕೆ ಮತ್ತು 2ನೇ ಡೋಸ್ ಲಸಿಕೆ – (50 ಡೋಸ್ ಲಭ್ಯ)

ಗ್ರಾಮೀಣ ಪ್ರದೇಶದಲ್ಲಿ ರಾಜ್ಯ ಸರಕಾರ ಗುರುತಿಸಿರುವ ಅನುಬಂಧ- 1ರಲ್ಲಿರುವ ಕೊರೋನ ಮುಂಚೂಣಿ ಕಾರ್ಯಕರ್ತರು/ದುರ್ಬಲ ಗುಂಪಿನ ಫಲಾನುಭವಿಗಳು ಪ್ರಥಮ ಡೋಸ್ ಕೋವಿಶೀಲ್ಡ್ ಲಸಿಕೆ ಮತ್ತು 45 ವರ್ಷ ಮೇಲ್ಪಟ್ಟ ಸಾರ್ವಜನಿಕರು/ HCW/FLW (ಕೇಂದ್ರ ಸರಕಾರ ಗುರುತಿಸಿರುವ ಮುಂಚೂಣಿ ಕಾರ್ಯಕರ್ತರು) ಪ್ರಥಮ ಡೋಸ್ ಕೋವಿಶೀಲ್ಡ್ ಲಸಿಕೆ ಮತ್ತು ಮೊದಲ ಡೋಸ್ ಲಸಿಕೆ ಪಡೆದು 84 ದಿನಗಳು ಮೀರಿದವರು 2ನೇ ಡೋಸ್ ಕೋವಿಶೀಲ್ಡ್ ಲಸಿಕೆ ಹಾಗೂ ಪ್ರಥಮ ಡೋಸ್ ಕೋವ್ಯಾಕ್ಸಿನ್ ಲಸಿಕೆ ಪಡೆದು 4 ವಾರ (28 ದಿನ) ಮೀರಿದವರು ಕೋವ್ಯಾಕ್ಸಿನ್ 2ನೇ ಡೋಸ್ ಲಸಿಕೆ ಪಡೆಯಲು ಹತ್ತಿರದ ಸರಕಾರಿ ಆಸ್ಪತ್ರೆ/ಆಶಾ ಕಾರ್ಯಕರ್ತೆಯರನ್ನು ಸಂಪರ್ಕಿಸಿ ಲಸಿಕೆ ಲಭ್ಯತೆಯನ್ನು ಖಚಿತಪಡಿಸಿಕೊಂಡು ದಿನಾಂಕ 19.06.2021 ರಂದು ಲಸಿಕಾ ಕೇಂದ್ರಕ್ಕೆ ಬಂದು ಲಸಿಕೆ ಪಡೆಯುವುದು ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ. ನಾಗಭೂಷಣ ಉಡುಪ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ನೋಡಲ್ ಅಧಿಕಾರಿ ಬದಲಾವಣೆ:
ಉಡುಪಿ ತಾಲೂಕು ವ್ಯಾಪ್ತಿಗೆ ಒಳಪಡುವ ಮಾಧವ ಕೃಪಾ ಶಾಲೆ, ಮಣಿಪಾಲ ಇಲ್ಲಿ ಕೋವಿಡ್ ಲಸಿಕಾ ಕೇಂದ್ರದ ನೋಡಲ್ ಅಧಿಕಾರಿಯಾಗಿ ನಾಗರಾಜ ವಿಷಯ ಪರಿವೀಕ್ಷಕರು, ಉಪನಿರ್ದೇಶಕರ ಕಚೇರಿ, ಸಾರ್ವಜನಿಕ ಶಿಕ್ಷಣ ಇಲಾಖೆ ಉಡುಪಿ ಮೊ.ನಂ- 9449964968 ಇವರನ್ನು ನೇಮಕ ಮಾಡಲಾಗಿರುತ್ತದೆ ಎಂದು ಜಿಲ್ಲಾಧಿಕಾರಿ ಜಿ. ಜಗದೀಶ್ ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಇತಿಹಾಸದ ಅವಲೋಕನ ಬದುಕಿನ ಪುನರ್ ವಿಮರ್ಶೆಗೆ ಸಹಾಯಕ: ಶಬಾನ್ ಅಂಜುಮ್

ಕೋಟ, ನ.22: ಇತಿಹಾಸದ ಪಿತಾಮಹ ಹೆರೋಡಟಸ್ ಸಂಸ್ಕೃತಿಗಳ ತಿಳಿಯಲು ಒಂದು ಉತ್ತಮ...

ಆನಂದತೀರ್ಥ: ವಾರ್ಷಿಕ ಕ್ರೀಡಾಕೂಟ

ಕಟಪಾಡಿ, ನ.22: ಪೇಜಾವರ ಮಠದ ಆಡಳಿತಕ್ಕೊಳಪಟ್ಟ ಪಾಜಕ ಆನಂದತೀರ್ಥ ಪ.ಪೂ ಕಾಲೇಜು...

ಸಾಂಸ್ಕೃತಿಕ ಸ್ಪರ್ಧೆ: ಮಣಿಪಾಲ ಜ್ಞಾನಸುಧಾದ ವಿದ್ಯಾರ್ಥಿಗಳ ಅಮೋಘ ಸಾಧನೆ

ಉಡುಪಿ, ನ.22: ಕರ್ನಾಟಕ ರಾಜ್ಯ ವಿದ್ಯಾರ್ಥಿ ಕ್ಷೇಮಾಭಿವೃದ್ಧಿ ಮತ್ತು ಶಾಲಾ ಶಿಕ್ಷಣ...

ಅರುಣ್ಯಾ 2024: ಭಂಡಾರಕಾರ್ಸ್ ಪಿಯು ಕಾಲೇಜು ತಂಡ ಚಾಂಪಿಯನ್

ಬಸ್ರೂರು, ನ.22: ಶ್ರೀ ಶಾರದಾ ಕಾಲೇಜು ಬಸ್ರೂರು ಇಲ್ಲಿ ಉಡುಪಿ ಜಿಲ್ಲಾಮಟ್ಟದ...
error: Content is protected !!