Friday, November 22, 2024
Friday, November 22, 2024

ಪಾಸಿಟಿವಿಟಿ ಆಧಾರದಲ್ಲಿ ಅನ್ ಲಾಕ್

ಪಾಸಿಟಿವಿಟಿ ಆಧಾರದಲ್ಲಿ ಅನ್ ಲಾಕ್

Date:

ಶನಿವಾರ ನಡೆದ ತಾಂತ್ರಿಕ ಸಲಹಾ ಸಮಿತಿಯ ಸಭೆಯಲ್ಲಿ ಕೋವಿಡ್ ನಿರ್ಬಂಧ ಸಡಿಲಿಕೆ ಮತ್ತು ಬಿಗಿಗೊಳಿಸುವಿಕೆಗೆ ಸಂಬಂಧಿಸಿದಂತೆ ನಡೆದ ಸಭೆಯಲ್ಲಿ ಸುದೀರ್ಘ ಚರ್ಚೆಯ ನಂತರ ಮಹತ್ವದ ನಿರ್ಧಾರಗಳನ್ನು ಕೈಗೊಳ್ಳಲಾಗಿದೆ. ಈ ಕುರಿತು ಮಾಹಿತಿ ನೀಡಿದ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ, ಪಾಸಿಟಿವಿಟಿ ಪ್ರಮಾಣದ ಆಧಾರದಲ್ಲಿ ಜಿಲ್ಲೆಗಳಲ್ಲಿ ನಿರ್ಬಂಧ ಸಡಿಲಿಕೆ ಮತ್ತು ಬಿಗಿಗೊಳಿಸಲಾಗಿದೆ. ಶೇ. 10 ರಷ್ಟು ಪಾಸಿಟಿವಿಟಿ ಇರುವ ಮೈಸೂರಿನಲ್ಲಿ ಈಗ ಜಾರಿಯಲ್ಲಿರುವ ನಿರ್ಬಂಧಗಳು ಮುಂದುವರಿಯಲಿದೆ ಎಂದು ಮುಖ್ಯಮಂತ್ರಿ ಹೇಳಿದರು. 

ಶೇ. 5ಕ್ಕಿಂತ ಕಡಿಮೆ ಪಾಸಿಟಿವಿಟಿ ಪ್ರಮಾಣವಿರುವ 16 ಜಿಲ್ಲೆಗಳಾದ ಉತ್ತರ ಕನ್ನಡ, ಬೆಳಗಾವಿ, ಕೊಪ್ಪಳ, ಕೋಲಾರ, ಬೆಂಗಳೂರು ನಗರ, ಮಂಡ್ಯ, ಚಿಕ್ಕಬಳ್ಳಾಪುರ, ಗದಗ, ತುಮಕೂರು, ರಾಯಚೂರು, ಬಾಗಲಕೋಟೆ, ಕಲಬುರಗಿ, ಹಾವೇರಿ, ರಾಮನಗರ, ಯಾದಗಿರಿ ಮತ್ತು ಬೀದರ್ ಇಲ್ಲಿ ಈ ಕೆಳಗಿನಂತೆ ನಿರ್ಬಂಧಗಳನ್ನು ಸಡಿಲಿಕೆಗೊಳಿಸಲಾಗಿದೆ.

1. ಎಲ್ಲಾ ಅಂಗಡಿಗಳು ಬೆಳಗ್ಗೆಯಿಂದ ಸಂಜೆ 5ರವರೆಗೆ ತೆರೆಯಲು ಅನುಮತಿ ನೀಡಲಾಗಿದೆ.

2. ಎ.ಸಿ ಬಳಸದೆ ಹೊಟೇಲು, ಕ್ಲಬ್, ರೆಸ್ಟೋರೆಂಟ್ ಗಳಲ್ಲಿ ಶೇ. 50 ರಷ್ಟು ಸಾಮರ್ಥ್ಯದೊಂದಿಗೆ ಕುಳಿತು ತಿನ್ನಲು ಅನುಮತಿ ನೀಡಲಾಗಿದೆ.

3. ಹೊರಾಂಗಣ ಚಿತ್ರೀಕರಣಕ್ಕೆ ಅವಕಾಶ ನೀಡಲಾಗಿದೆ.

4. ಬಸ್, ಮೆಟ್ರ‍ೋ ಶೇ. 50 ರಷ್ಟು ಪ್ರಯಾಣಿಕರೊಂದಿಗೆ ಸಂಚರಿಸಬಹುದು.

5. ವೀಕ್ಷಕರಿಲ್ಲದೆ ಕ್ರೀಡೆಗೆ ಅನುಮತಿ.

6. ಸರಕಾರಿ, ಖಾಸಗಿ ಕಛೇರಿಗಳಲ್ಲಿ ಶೇ. 50 ರಷ್ಟು ಸಿಬ್ಬಂದಿಯೊಂದಿಗೆ ಕಾರ್ಯನಿರ್ವಹಣೆಗೆ ಅವಕಾಶ.

7. ಲಾಡ್ಜ್, ರೆಸಾರ್ಟ್ ಶೇ. 50 ರಷ್ಟು ಸಾಮರ್ಥ್ಯದೊಂದಿಗೆ ಕಾರ್ಯನಿರ್ವಹಣೆ ಮಾಡಬಹುದು.

8. ಜಿಮ್ ಗಳಲ್ಲಿ ಶೇ. 50 ಸಾಮರ್ಥ್ಯದೊಂದಿಗೆ ಅವಕಾಶ.

ಶೇ. 5 ಕ್ಕಿಂತ ಹೆಚ್ಚು ಪಾಸಿಟಿವಿಟಿ ಪ್ರಮಾಣವಿರುವ 13 ಜಿಲ್ಲೆಗಳಾದ ಉಡುಪಿ, ದಕ್ಷಿಣ ಕನ್ನಡ, ಹಾಸನ, ಶಿವಮೊಗ್ಗ, ಚಾಮರಾಜನಗರ, ಚಿಕ್ಕಮಗಳೂರು, ಬೆಂಗಳೂರು ಗ್ರಾಮಾಂತರ, ದಾವಣಗೆರೆ, ಕೊಡಗು, ಧಾರವಾಡ, ಬಳ್ಳಾರಿ, ಚಿತ್ರದುರ್ಗ ಹಾಗೂ ವಿಜಯಪುರ ಜಿಲ್ಲೆಗಳಲ್ಲಿ ಈ ಹಿಂದೆ ಜೂನ್ 11 ರಂದು ಜಾರಿಗೊಳಿಸಿದ ನಿರ್ಬಂಧಗಳು ಮುಂದುವರಿಯಲಿದೆ.

ರಾಜ್ಯವ್ಯಾಪಿ ಅನ್ವಯವಾಗುವ ಮಾರ್ಗಸೂಚಿ:
1. ಶೇ. 50 ರಷ್ಟು ಪ್ರಯಾಣಿಕರೊಂದಿಗೆ ಬಸ್ ಸಂಚರಿಸಬಹುದು.

2. ಪ್ರತಿದಿನ ರಾತ್ರಿ 7ರಿಂದ ಬೆಳಗ್ಗೆ 5ರವರೆಗೆ ನೈಟ್ ಕರ್ಫ್ಯೂ.

3. ಶುಕ್ರವಾರ ರಾತ್ರಿ 7ರಿಂದ ಸೋಮವಾರ ಬೆಳಗ್ಗೆ 5ರವರೆಗೆ ವೀಕೆಂಡ್ ಕರ್ಫ್ಯೂ.

ಇವುಗಳಿಗೆ ನಿರ್ಬಂಧ:
ಈಜುಕೊಳ, ಸಭೆ, ಸಮಾರಂಭಗಳು, ರಾಜಕೀಯ ಸಮಾವೇಶ, ಪೂಜಾಸ್ಥಳಗಳು, ಸಿನೆಮಾ, ಶಾಪಿಂಗ್ ಮಾಲ್, ಹವಾನಿಯಂತ್ರಿತ ಶಾಪಿಂಗ್ ಕಾಂಪ್ಲೆಕ್ಸ್, ಪಬ್, ಶಿಕ್ಷಣ ಸಂಸ್ಥೆಗಳು.

ಮೇಲಿನ ಸುರಕ್ಷತಾ ನಿರ್ಬಂಧಗಳು ಜೂನ್ 21ರಿಂದ ರಾಜ್ಯಾದ್ಯಂತ ಜಾರಿಗೆ ಬರಲಿವೆ.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಅಂತರ ಇಲಾಖಾ ಸಮನ್ವಯ ಸಮಿತಿ ಸಭೆ

ಉಡುಪಿ, ನ.21: ರಾಷ್ಟ್ರೀಯ ಆರೋಗ್ಯ ಕಾರ್ಯಕ್ರಮಗಳ ಅನುಷ್ಠಾನದ ಕುರಿತು ತಾಲೂಕು ಮಟ್ಟದ...

ಜಿಲ್ಲಾಮಟ್ಟದ ಸಿರಿಧಾನ್ಯ ಮತ್ತು ಮರೆತು ಹೋದ ಖಾದ್ಯಗಳ ಪಾಕ ಸ್ಪರ್ಧೆ

ಉಡುಪಿ, ನ.21: ಸಿರಿಧಾನ್ಯ ಮತ್ತು ಸಾವಯವ ಅಂತರಾಷ್ಟ್ರೀಯ ವಾಣಿಜ್ಯ ಮೇಳ-2025 ರ...

ನ.22: ಉಡುಪಿಯಲ್ಲಿ ನೇರ ಸಂದರ್ಶನ

ಉಡುಪಿ, ನ.21: ಕೈಗಾರಿಕಾ ತರಬೇತಿ ಮತ್ತು ಉದ್ಯೋಗ ಇಲಾಖೆಯ ವತಿಯಿಂದ ನವೆಂಬರ್...

ಅಂಚೆ ಮೂಲಕ ಕನ್ನಡ ಶಿಕ್ಷಣ ಯೋಜನೆ

ಉಡುಪಿ, ನ.21: ಕನ್ನಡ ಮತ್ತು ಸಂಸ್ಕೃತಿ ನಿರ್ದೇಶನಾಲಯ ಹಾಗೂ ಮೈಸೂರಿನ ಭಾರತೀಯ...
error: Content is protected !!