Friday, November 22, 2024
Friday, November 22, 2024

ಕೋವಿಡ್‌ಗೆ ಬಲಿಯಾದ ರಾಜ್ಯದ 31 ಪತ್ರಕರ್ತರಿಗೆ ಸರಕಾರದಿಂದ ಪರಿಹಾರ: ಶಿವಾನಂದ ತಗಡೂರು

ಕೋವಿಡ್‌ಗೆ ಬಲಿಯಾದ ರಾಜ್ಯದ 31 ಪತ್ರಕರ್ತರಿಗೆ ಸರಕಾರದಿಂದ ಪರಿಹಾರ: ಶಿವಾನಂದ ತಗಡೂರು

Date:

ರಾಜ್ಯದಲ್ಲಿ ಕೋವಿಡ್-19 ಸೋಂಕಿಗೆ ಸುಮಾರು 70 ಮಂದಿ ಮೃತಪಟ್ಟಿದ್ದು, ಇದರಲ್ಲಿ ಮೊದಲ ಅಲೆಯಲ್ಲಿ ಮೃತಪಟ್ಟ ಒಟ್ಟು 31 ಮಂದಿ ಪತ್ರಕರ್ತರ ಕುಟುಂಬಗಳಿಗೆ ಸರಕಾರದಿಂದ ತಲಾ 5ಲಕ್ಷ ರೂ. ಪರಿಹಾರ ಹಾಗೂ ಎರಡು ಕುಟುಂಬಗಳಿಗೆ ಮನೆ ಒದಗಿಸುವಲ್ಲಿ ಕರ್ನಾಟಕ ರಾಜ್ಯ ಕಾರ್ಯನಿರತ ಪತ್ರಕರ್ತರ ಸಂಘ ಶ್ರಮಿಸಿದೆ ಎಂದು ಸಂಘದ ರಾಜ್ಯಾಧ್ಯಕ್ಷ ಶಿವಾನಂದ ತಗಡೂರು ತಿಳಿಸಿದ್ದಾರೆ. ಉಡುಪಿ ಜಿಲ್ಲೆಗೆ ಅಧಿಕೃತವಾಗಿ ಭೇಟಿ ನೀಡಿದ ಹಿನ್ನೆಲೆಯಲ್ಲಿ ಶನಿವಾರ ಉಡುಪಿ ಪ್ರೆಸ್‌ ಕ್ಲಬ್‌ನಲ್ಲಿ ಆಯೋಜಿಸಲಾದ ಕಾರ್ಯಕ್ರಮದಲ್ಲಿ ಅವರು ಪತ್ರಕರ್ತರನ್ನು ಉದ್ದೇಶಿಸಿ ಮಾತನಾಡಿದರು.

ರಾಜ್ಯದಲ್ಲಿ ಸುಮಾರು 8000 ಮಂದಿ ಸಂಘದ ಸದಸ್ಯತ್ವ ಪಡೆದುಕೊಂಡಿದ್ದಾರೆ. ಕೋವಿಡ್-19 ಸಂದಿಗ್ನ ಸ್ಥಿತಿಯಲ್ಲೂ ವೃತ್ತಿ ಬದ್ಧತೆಯಿಂದ ಕರ್ತವ್ಯ ನಿರ್ವಹಿಸಿದ ಪತ್ರಕರ್ತರು ಕೋವಿಡ್‌ಗೆ ಬಲಿಯಾಗಿದ್ದಾರೆ. ಮೊದಲ ಅಲೆಯಲ್ಲಿ ರಾಜ್ಯ 31 ಹಾಗೂ ಎರಡನೇ ಅಲೆಯಲ್ಲಿ 30ಕ್ಕೂ ಅಧಿಕ ಮಂದಿ ಪತ್ರಕರ್ತರು ಮೃತಪಟ್ಟಿದ್ದಾರೆ. ಅದೇ ರೀತಿ 30ಕ್ಕೂ ಅಧಿಕ ಮಂದಿ ಪತ್ರಿಕಾ ವಿತರಕರು ಕೂಡ ಕೋವಿಡ್‌ನಿಂದ ಮೃತಪಟ್ಟಿದ್ದಾರೆ ಎಂದರು.

ಕೋವಿಡ್-19 ಕಾರಣಕ್ಕೆ ಕಳೆದ ಒಂದೂವರೆ ವರ್ಷದಿಂದ ರಾಜ್ಯಮಟ್ಟದ ಪತ್ರಿಕೆ, ದೃಶ್ಯ ಮಾಧ್ಯಮ ಸೇರಿದಂತೆ ಸ್ಥಳೀಯ ಪತ್ರಿಕೆಗಳಿಗೆ ಬಾಕಿ ಇಟ್ಟಿರುವ 56 ಕೋಟಿ ರೂ. ಸರಕಾರಿ ಜಾಹೀರಾತು ಬಿಲ್‌ಯನ್ನು ಒಂದೇ ಕಂತಿನಲ್ಲಿ ಬಿಡುಗಡೆ ಮಾಡಲು ಸಾಧ್ಯವಾಗಿದೆ ಎಂದು ಹೇಳಿದರು. ಏಷ್ಯನ್ ಕಾರ್ಯನಿರತ ಪತ್ರಕರ್ತರ ಸಂಘದ ಸಂಚಾಲಕ ಮಾದನ್ ಗೌಡ ಮಾತನಾಡಿ, ಬೆಂಗಳೂರಿನ ಮೈಸೂರು ರಸ್ತೆಯಲ್ಲಿ ರಾಜ್ಯ ಸರಕಾರ ನೀಡಿರುವ 2 ಕೋಟಿ ರೂ. ವೌಲ್ಯದ ನಿವೇಶನದಲ್ಲಿ ಸುಮಾರು 10 ಕೋಟಿ ರೂ. ವೆಚ್ಚದಲ್ಲಿ ಪತ್ರಕರ್ತರ ಭವನ ನಿರ್ಮಾಣ ಮಾಡಲು ಉದ್ದೇಶಿಸಲಾಗಿದ್ದು, ಇದರ ಶಂಕುಸ್ಥಾಪನೆ ಶೀಘ್ರವೇ ನಡೆಸಲಾಗುವುದು ಎಂದರು.

ಈ ಸಂದರ್ಭದಲ್ಲಿ ಉಡುಪಿ ಜಿಲ್ಲಾ ಸಂಘ ಹಾಗೂ ಪ್ರತಕರ್ತರ ಬೇಡಿಕೆಗಳ ಮನವಿಯನ್ನು ರಾಜ್ಯಾಧ್ಯಕ್ಷರಿಗೆ ಸಲ್ಲಿಸಲಾಯಿತು. ನಮ್ಮ ಕುಂದಾಪ್ರ ಕನ್ನಡ ಗಲ್ಫ್ ಬಳಗ ವತಿಯಿಂದ ನೀಡಲಾದ ಫೇಸ್ ಶೀಲ್ಡ್‌ಗಳನ್ನು ಪತ್ರಕರ್ತರಿಗೆ ವಿತರಿಸಲಾಯಿತು. ಬಳಿಕ ರಾಜ್ಯಾಧ್ಯಕ್ಷರೊಂದಿಗೆ ಪತ್ರಕರ್ತರ ಸಮಸ್ಯೆ ಹಾಗೂ ಬೇಡಿಕೆಗಳ ಕುರಿತು ಚರ್ಚಿಸಲಾಯಿತು.

ಉಡುಪಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಅಲೆವೂರು ರಾಜೇಶ್ ಶೆಟ್ಟಿ ಪ್ರಾಸ್ತಾವಿಕವಾಗಿ ಮಾತನಾಡಿದರು. ಪ್ರಧಾನ ಕಾರ್ಯದರ್ಶಿ ನಝೀರ್ ಪೊಲ್ಯ ಸ್ವಾಗತಿಸಿದರು. ಕೋಶಾಧಿಕಾರಿ ಉಮೇಶ್ ಮಾರ್ಪಳ್ಳಿ ವಂದಿಸಿದರು. ಪತ್ರಕರ್ತರಾದ ರಾಕೇಶ್ ಕುಂಜೂರು ಹಾಗೂ ದೀಪಕ್ ಜೈನ್ ಕಾರ್ಯಕ್ರಮ ನಿರೂಪಿಸಿದರು.

ಮಲಬಾರ್ ಗೋಲ್ಡ್‌ನಿಂದ ಸನ್ಮಾನ: ಉಡುಪಿ ಜಿಲ್ಲೆಗೆ ಪ್ರಥಮ ಬಾರಿಗೆ ಆಗಮಿಸಿದ ಕರ್ನಾಟಕ ರಾಜ್ಯ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶಿವಾನಂದ ತಗಡೂರು ಅವರನ್ನು ಉಡುಪಿಯ ಮಲಬಾರ್ ಗೋಲ್ಡ್ ಆ್ಯಂಡ್ ಡೈಮಂಡ್ ವತಿಯಿಂದ ಇಂದು ಪ್ರೆಸ್‌ಕ್ಲಬ್‌ನಲ್ಲಿ ಸನ್ಮಾನಿಸಲಾಯಿತು. ಈ ಸಂದರ್ಭದಲ್ಲಿ ಮಲಬಾರ್ ಗೋಲ್ಡ್‌ನ ಜಿಆರ್‌ಎಂ ರಾಘವೇಂದ್ರ ನಾಯಕ್, ಚಾರಿಟಿ ಉಸ್ತುವಾರಿ ತಂಝೀಮ್ ಶಿರ್ವ ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಅಂತರ ಇಲಾಖಾ ಸಮನ್ವಯ ಸಮಿತಿ ಸಭೆ

ಉಡುಪಿ, ನ.21: ರಾಷ್ಟ್ರೀಯ ಆರೋಗ್ಯ ಕಾರ್ಯಕ್ರಮಗಳ ಅನುಷ್ಠಾನದ ಕುರಿತು ತಾಲೂಕು ಮಟ್ಟದ...

ಜಿಲ್ಲಾಮಟ್ಟದ ಸಿರಿಧಾನ್ಯ ಮತ್ತು ಮರೆತು ಹೋದ ಖಾದ್ಯಗಳ ಪಾಕ ಸ್ಪರ್ಧೆ

ಉಡುಪಿ, ನ.21: ಸಿರಿಧಾನ್ಯ ಮತ್ತು ಸಾವಯವ ಅಂತರಾಷ್ಟ್ರೀಯ ವಾಣಿಜ್ಯ ಮೇಳ-2025 ರ...

ನ.22: ಉಡುಪಿಯಲ್ಲಿ ನೇರ ಸಂದರ್ಶನ

ಉಡುಪಿ, ನ.21: ಕೈಗಾರಿಕಾ ತರಬೇತಿ ಮತ್ತು ಉದ್ಯೋಗ ಇಲಾಖೆಯ ವತಿಯಿಂದ ನವೆಂಬರ್...

ಅಂಚೆ ಮೂಲಕ ಕನ್ನಡ ಶಿಕ್ಷಣ ಯೋಜನೆ

ಉಡುಪಿ, ನ.21: ಕನ್ನಡ ಮತ್ತು ಸಂಸ್ಕೃತಿ ನಿರ್ದೇಶನಾಲಯ ಹಾಗೂ ಮೈಸೂರಿನ ಭಾರತೀಯ...
error: Content is protected !!