ಉಡುಪಿ ಜಿಲ್ಲೆಯಲ್ಲಿ ದಿನಾಂಕ 21/06/2021 ರಂದು ಕೋವಿಡ್-19 ಲಸಿಕಾಕರಣದ ಮಹಾಮೇಳ ಜರುಗಲಿದೆ. ಮಹಾಮೇಳದಲ್ಲಿ ರಾಜ್ಯ ಸರಕಾರ ಗುರುತಿಸಿರುವ ಅನುಬಂಧ-1 ರಲ್ಲಿರುವ ಕೊರೋನ ಮುಂಚೂಣಿ ಕಾರ್ಯಕರ್ತರು/ದುರ್ಬಲ ಗುಂಪಿನ ಫಲಾನುಭವಿಗಳಿಗೆ/ಆದ್ಯತಾ ಗುಂಪಿನವರಿಗೆ ಮತ್ತು ಆರೋಗ್ಯ ಕಾರ್ಯಕರ್ತರುಗಳಿಗೆ/ಕೇಂದ್ರ ಸರಕಾರ ಗುರುತಿಸಿರುವ ಮುಂಚೂಣಿ ಕಾರ್ಯಕರ್ತರುಗಳಿಗೆ ಹಾಗೂ 45 ವರ್ಷ ಮೇಲ್ಪಟ್ಟ ಸಾರ್ವಜನಿಕರಿಗೆ ಪ್ರಥಮ ಡೋಸ್ ಮತ್ತು 2ನೇ ಡೋಸ್ ಲಸಿಕೆಯನ್ನು ನೀಡಲಾಗುವುದು. ಒಟ್ಟು 21,000 ಕೋವಿಡ್-19 ಲಸಿಕೆಯನ್ನು ನೀಡುವ ಗುರಿಯನ್ನು ಹೊಂದಲಾಗಿದೆ.
ಜಿಲ್ಲಾ ಮಟ್ಟದ ಕೋವಿಡ್-19 ಲಸಿಕಾಕರಣದ ಮಹಾ ಮೇಳದ ಉದ್ಘಾಟನೆಯು ಸರಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆ, ಹನುಮಂತನಗರ ದಲ್ಲಿ ಬೆಳಿಗ್ಗೆ 10.30 ಕ್ಕೆ ಜರುಗಲಿದೆ. ದಿನಾಂಕ 21/06/2021 ರಂದು ಉಡುಪಿ ನಗರ ಪ್ರದೇಶದ ಈ ಕೆಳಗಿನ ಆಸ್ಪತ್ರೆಗಳಲ್ಲಿ ಕೋವಿಡ್-19 ಲಸಿಕಾ ಮಹಾಮೇಳ ಜರುಗಲಿದೆ.
ಲಸಿಕಾಕರಣದ ಸ್ಥಳ:
ಜಿಲ್ಲಾ ಆಸ್ಪತ್ರೆ ಅಜ್ಜರಕಾಡು ಉಡುಪಿ (ಸೇಂಟ್ ಸಿಸಿಲಿ ಶಾಲೆ) (ಸಮಯ: ಬೆಳಿಗ್ಗೆ 9.30 ರಿಂದ 4.30 ರ ವರೆಗೆ)- ಕೋವಿಶೀಲ್ಡ್ -(150 ಡೋಸ್ ಲಭ್ಯ) ಕೋವ್ಯಾಕ್ಸಿನ್ -(100 ಡೋಸ್ ಲಭ್ಯ)
ದೊಡ್ಡಣಗುಡ್ಡೆ ಜನತಾ ವ್ಯಾಯಾಮ ಶಾಲೆ (ಸಮಯ: ಬೆಳಿಗ್ಗೆ 10.00 ರಿಂದ 4.30 ರ ವರೆಗೆ)- ಕೋವಿಶೀಲ್ಡ್ -(550 ಡೋಸ್ ಲಭ್ಯ)
ನಗರ ಪ್ರಾಥಮಿಕ ಆರೋಗ್ಯ ಕೇಂದ್ರ ಮಣಿಪಾಲ (ಮಾಧವ ಕೃಪಾ ಶಾಲೆ, ಮಣಿಪಾಲ) (ಸಮಯ: ಬೆಳಿಗ್ಗೆ 9.30 ರಿಂದ 4.30 ರ ವರೆಗೆ)- ಕೋವಿಶೀಲ್ಡ್ – (300 ಡೋಸ್ ಲಭ್ಯ) ಕೋವ್ಯಾಕ್ಸಿನ್ -(450 ಡೋಸ್ ಲಭ್ಯ)
ನಗರ ಪ್ರಾಥಮಿಕ ಆರೋಗ್ಯ ಕೇಂದ್ರ ಉಡುಪಿ (ಸರಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆ, ಹನುಮಂತನಗರದಲ್ಲಿ) (ಸಮಯ: ಬೆಳಿಗ್ಗೆ 9.30 ರಿಂದ 4.30 ರ ವರೆಗೆ)- ಕೋವಿಶೀಲ್ಡ್ – (300 ಡೋಸ್ ಲಭ್ಯ)
ನಗರ ಪ್ರಾಥಮಿಕ ಆರೋಗ್ಯ ಕೇಂದ್ರ, ಉಡುಪಿ (ಖಾಸಗಿ ಪ್ರಾಥಮಿಕ ಶಾಲೆ ಆದಿಉಡುಪಿಯಲ್ಲಿ) (ಸಮಯ: ಬೆಳಿಗ್ಗೆ 9.30 ರಿಂದ 4.30 ರ ವರೆಗೆ)- ಕೋವ್ಯಾಕ್ಸಿನ್ -(200 ಡೋಸ್ ಲಭ್ಯ)
ಎಫ್.ಪಿ.ಎ.ಐ ಕುಕ್ಕಿಕಟ್ಟೆಯಲ್ಲಿ (ಇಂದಿರಾನಗರ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆ, ಇಂದಿರಾನಗರ) (ಸಮಯ: ಬೆಳಿಗ್ಗೆ 9.30 ರಿಂದ 4.30 ರ ವರೆಗೆ)- ಕೋವಿಶೀಲ್ಡ್ – (150 ಡೋಸ್ ಲಭ್ಯ) ಕೋವ್ಯಾಕ್ಸಿನ್ (30 ಡೋಸ್ ಲಭ್ಯ)
ಸರಕಾರಿ ತಾಯಿ ಮತ್ತು ಮಕ್ಕಳ (ಬಿ.ಆರ್.ಎಸ್) ಆಸ್ಪತ್ರೆ, ಉಡುಪಿ (ಸಮಯ: ಬೆಳಿಗ್ಗೆ 9.30 ರಿಂದ 4.30 ರ ವರೆಗೆ)- ಕೋವಿಶೀಲ್ಡ್- (350 ಡೋಸ್ ಲಭ್ಯ) ದಿನಾಂಕ 25/06/2021 ರ ಒಳಗೆ ವಿದೇಶ ಪ್ರಯಾಣ ಮಾಡುವವರಲ್ಲಿ ಕೋವಿಶೀಲ್ಡ್ ಮೊದಲ ಡೋಸ್ ಲಸಿಕೆ ಪಡೆದು 28 ದಿನಗಳು ಮೀರಿದವರಿಗೆ 2ನೇ ಡೋಸ್ ಕೋವಿಶೀಲ್ಡ್ ಲಸಿಕೆ (100 ಡೋಸ್ ಲಭ್ಯ)
ಗ್ರಾಮೀಣ ಪ್ರದೇಶದಲ್ಲಿ ರಾಜ್ಯ ಸರಕಾರ ಗುರುತಿಸಿರುವ ಅನುಬಂಧ-1 ರಲ್ಲಿರುವ ಕೊರೋನ ಮುಂಚೂಣಿ ಕಾರ್ಯಕರ್ತರು/ದುರ್ಬಲ ಗುಂಪಿನ ಫಲಾನುಭವಿಗಳು/ಆದ್ಯತಾಗುಂಪಿನವರು ಮತ್ತು ಆರೋಗ್ಯ ಕಾರ್ಯಕರ್ತರು/ಕೇಂದ್ರ ಸರಕಾರ ಗುರುತಿಸಿರುವ ಮುಂಚೂಣಿ ಕಾರ್ಯಕರ್ತರು ಹಾಗೂ 45 ವರ್ಷ ಮೇಲ್ಪಟ್ಟ ಸಾರ್ವಜನಿಕರು ಕೋವಿಡ್-19 ಪ್ರಥಮ ಡೋಸ್ ಮತ್ತು 2ನೇ ಡೋಸ್ ಲಸಿಕೆಯನ್ನು ಪಡೆಯಲು ಹತ್ತಿರದ ಸರಕಾರಿ ಆಸ್ಪತ್ರೆ/ಆಶಾ ಕಾರ್ಯಕರ್ತೆಯರನ್ನು ಸಂಪರ್ಕಿಸಿ ಲಸಿಕ ಶಿಬಿರದ ಸ್ಥಳವನ್ನು ಖಚಿತಪಡಿಸಿಕೊಂಡು ದಿನಾಂಕ 21.06.2021 ರಂದು ಲಸಿಕಾ ಕೇಂದ್ರಕ್ಕೆ ಬಂದು ಲಸಿಕೆ ಪಡೆಯುವುದು.
ಜಿಲ್ಲೆಯಲ್ಲಿ 18 ರಿಂದ 44 ವರ್ಷ ವಯೋಮಿತಿಯ ಸಾರ್ವಜನಿಕರಿಗೆ ಯಾವುದೇ ಕೋವಿಡ್-19 ಲಸಿಕೆ ಲಭ್ಯವಿರುವುದಿಲ್ಲ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ. ನಾಗಭೂಷಣ ಉಡುಪ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.