24 ಗಂಟೆಗಳಲ್ಲಿ ದೇಶಾದ್ಯಂತ 50,848 ಹೊಸ ಪಾಸಿಟಿವ್ ಪ್ರಕರಣಗಳು ಪತ್ತೆಯಾಗುವ ಮೂಲಕ ಒಟ್ಟು ಸೋಂಕಿತರ ಸಂಖ್ಯೆ 3,00,28,709 ಕ್ಕೆ ಏರಿದೆ ಎಂದು ಕೇಂದ್ರ ಸರ್ಕಾರದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಇಂದು ತಿಳಿಸಿದೆ.
ಇದೇ ವೇಳೆ 68,817 ಮಂದಿ ಕಳೆದ 24 ತಾಸಿನಲ್ಲಿ ಗುಣಮುಖರಾಗಿದ್ದಾರೆ. ದೇಶದಲ್ಲಿ ಒಟ್ಟು 6,43,194 ಸಕ್ರಿಯ ಪ್ರಕರಣಗಳಿವೆ. ಇಲ್ಲಿಯವರೆಗೆ 2,89,94,855 ಗುಣಮುಖರಾಗಿದ್ದಾರೆ. ಕಳೆದ 24 ಗಂಟೆಗಳಲ್ಲಿ 1358 ಮಂದಿ ಸಾವನ್ನಪ್ಪಿದ್ದಾರೆ, ಇಲ್ಲಿಯವರೆಗೆ ಒಟ್ಟು 3,90,660 ಮಂದಿ ಕೊರೊನಾಗೆ ಬಲಿಯಾಗಿದ್ದಾರೆ. ಚೇತರಿಕೆ ಪ್ರಮಾಣವು ಶೇ 96.56 ಲ್ಲೆ ಏರಿದೆ. ದೈನಂದಿನ ಪಾಸಿಟಿವಿಟಿ ಪ್ರಮಾಣ ಶೇ 2.67
ಡೆಲ್ಟಾ ಪ್ಲಸ್ ಹಾವಳಿ ಆರಂಭ: ಕರೋನ ವೈರಸ್ ಇದರ ಡೆಲ್ಟಾ ಪ್ಲಸ್ ರೂಪಾಂತರದ 40 ಪ್ರಕರಣಗಳು ವರದಿಯಾಗಿದ್ದು, ಹೆಚ್ಚಿನ ಪ್ರಕರಣಗಳು ಮಹಾರಾಷ್ಟ್ರ, ಮಧ್ಯಪ್ರದೇಶ, ಕೇರಳ ಮತ್ತು ತಮಿಳುನಾಡು ರಾಜ್ಯಗಳಲ್ಲಿ ಕಂಡುಬಂದಿದೆ ಎಂದು ಕೇಂದ್ರ ಆರೋಗ್ಯ ಇಲಾಖೆ ಮಾಹಿತಿ ನೀಡಿದೆ.