Saturday, September 21, 2024
Saturday, September 21, 2024

ಕೃಷಿ ಸಚಿವರ ಉಡುಪಿ ಜಿಲ್ಲಾ ಪ್ರವಾಸ

ಕೃಷಿ ಸಚಿವರ ಉಡುಪಿ ಜಿಲ್ಲಾ ಪ್ರವಾಸ

Date:

ರಾಜ್ಯದ ಕೃಷಿ ಸಚಿವ ಬಿ.ಸಿ.ಪಾಟೀಲ್ ಅವರು ಜೂನ್ 25 ಮತ್ತು 26 ರಂದು ಉಡುಪಿ ಜಿಲ್ಲೆಯಲ್ಲಿ ಪ್ರವಾಸ ಕೈಗೊಳ್ಳಲಿದ್ದಾರೆ. ಜೂನ್ 25 ರಂದು ಸಂಜೆ 6 ಕ್ಕೆ ಜಿಲ್ಲೆಗೆ ಆಗಮಿಸಿ, ಅತಿಥಿ ಗೃಹದಲ್ಲಿ ವಾಸ್ತವ್ಯ ಮಾಡಲಿದ್ದಾರೆ. ಜೂನ್ 26 ರಂದು ಬೆಳಗ್ಗೆ 9 ಗಂಟೆಗೆ ಕಡೆಕಾರು ಗ್ರಾಮದಲ್ಲಿ ಗ್ರಾಮ ಪಂಚಾಯಿತಿಯಿಂದ ಆಯೋಜಿಸಲಾದ ಕೃಷಿ ನಾಟಿ ಕಾರ್ಯಕ್ರಮಕ್ಕೆ ಚಾಲನೆ ನೀಡಲಿದ್ದಾರೆ. ನಂತರ ಕ್ಷೇತ್ರದಾದ್ಯಂತ ಕೇದಾರೋತ್ಥಾನ ಟ್ರಸ್ಟ್ ಮುಖಾಂತರ ಹಮ್ಮಿಕೊಂಡಿರುವ 1500 ಎಕರೆ ಹಡಿಲು ಭೂಮಿ ಕೃಷಿ ಆಂದೋಲನದಡಿ ಕೈಗೊಂಡಿರುವ ಕೃಷಿ ಚಟುವಟಿಕೆಗಳ ವೀಕ್ಷಣೆ ಮಾಡಲಿದ್ದಾರೆ. ಮಧ್ಯಾಹ್ನ 12 ಗಂಟೆಗೆ ನಗರದ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಮುಂಗಾರು ಪ್ರಾರಂಭವಾಗಿರುವ ಹಿನ್ನೆಲೆಯಲ್ಲಿ ರೈತರಿಗೆ ಅನುಕೂಲವಾಗುವಂತೆ ಜಿಲ್ಲೆಯಲ್ಲಿ ರಸಗೊಬ್ಬರ ಮತ್ತು ಬಿತ್ತನೆ ಬೀಜಗಳ ಲಭ್ಯತೆ ಹಾಗೂ ಪೂರ್ವ ಸಿದ್ಧತೆ ಕುರಿತು, ಜಿಲ್ಲೆಯ ಜನಪ್ರತಿನಿಧಿಗಳು, ಜಿಲ್ಲಾಧಿಕಾರಿಗಳು ಹಾಗೂ ಕೃಷಿ ಇಲಾಖೆಯ ಸಂಬಂಧಪಟ್ಟ ಅಧಿಕಾರಗಳೊಂದಿಗೆ ಸಭೆ ನಡೆಸಿ ನಂತರ ಮಂಗಳೂರಿಗೆ ತೆರಳಲಿರುವರು.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ವಿಶ್ವಕರ್ಮ ಯೋಜನೆಯ ಲಾಭ ಪಡೆದು ಕುಶಲಕರ್ಮಿಗಳು ಉದ್ಯಮಿಗಳಾಗಬಹುದು: ಪ್ರಧಾನಿ ನರೇಂದ್ರ ಮೋದಿ

ವಾರ್ಧಾ, ಸೆ.21: ಪ್ರಧಾನಮಂತ್ರಿ ವಿಶ್ವಕರ್ಮ ಯೋಜನೆಯ ಲಾಭ ಪಡೆಯುವ ಮೂಲಕ ಕುಶಲಕರ್ಮಿಗಳು...

ಭ್ರಷ್ಟಾಚಾರ ಪ್ರಕರಣ: ಲಾಲು ಪ್ರಸಾದ್ ಯಾದವ್ಗೆ ಸಿಬಿಐ ಬಿಸಿ

ನವದೆಹಲಿ, ಸೆ.21: ರಾಷ್ಟ್ರೀಯ ಜನತಾ ದಳ (ಆರ್‌ಜೆಡಿ) ನಾಯಕ ಮತ್ತು ಮಾಜಿ...

ಪಿ.ಎಂಶ್ರೀ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಕುಕ್ಕೆಹಳ್ಳಿ: ಡಿಜಿಟಲ್ ಗ್ರಂಥಾಲಯ, ಹ್ಯಾಪಿ ಇಂಗ್ಲೀಷ್ ಕ್ಲಾಸ್ ಉದ್ಘಾಟನೆ; ದಾನಿಗಳಿಗೆ ಸನ್ಮಾನ

ಉಡುಪಿ, ಸೆ.20: ಪಿ.ಎಂ.ಶ್ರೀ ಯೋಜನೆಯಡಿಯಲ್ಲಿ ಮಂಜೂರಾದ ಡಿಜಿಟಲ್ ಗ್ರಂಥಾಲಯ ಹಾಗೂ ಪಿ.ಎಂ.ಶ್ರೀ....

ಸನಾತನ ಧರ್ಮವನ್ನು ಅಪವಿತ್ರಗೊಳಿಸುವುದನ್ನು ಕೊನೆಗೊಳಿಸಲು ನಾವೆಲ್ಲರೂ ಒಗ್ಗೂಡಬೇಕು: ಪವನ್ ಕಲ್ಯಾಣ್

ತಿರುಪತಿ, ಸೆ.20: ತಿರುಪತಿ ಬಾಲಾಜಿ ಪ್ರಸಾದದಲ್ಲಿ ಬೆರೆತಿರುವ ಪ್ರಾಣಿಗಳ ಕೊಬ್ಬನ್ನು (ಮೀನಿನ...
error: Content is protected !!