ಪ್ರಾಥಮಿಕ ಆರೋಗ್ಯ ಕೇಂದ್ರ ಕುಕ್ಕೆಹಳ್ಳಿ ಸಹಯೋಗದಲ್ಲಿ ಕೋವಿಡ್-19 ಲಸಿಕಾ ಶಿಬಿರವು ಜಿಲ್ಲಾ ಬಿಜೆಪಿ ಯುವ ಮೋರ್ಚಾ ಉಪಾಧ್ಯಕ್ಷರಾದ ವಿಜೇತ್ ಕುಮಾರ್ ರವರ ನೇತೃತ್ವದಲ್ಲಿ ಗುರುವಾರ ಬೆಳ್ಳರ್ಪಾಡಿ ಶಾಲೆಯಲ್ಲಿ ನಡೆಯಿತು. 102 ಮಂದಿಗೆ ಕೊವಿಶೀಲ್ಡ್ ಲಸಿಕೆ ನೀಡಲಾಯಿತು. ಕುಕ್ಕೆಹಳ್ಳಿ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಅರ್ಚನಾ ಹೆಗ್ಡೆ, ಸಿಬ್ಬಂದಿಗಳಾದ ನವೀನ್ ಪ್ರಭು, ಕಲಾವತಿ, ಮಾಲತಿ, ಆಶಾ ಕಾರ್ಯಕರ್ತೆ ಜಯಲಕ್ಷ್ಮೀ, ಅಂಗನವಾಡಿ ಕಾರ್ಯಕರ್ತೆ ಸವಿತಾ ಸಹಕರಿಸಿದರು.
ಕಾಪು ಮಂಡಲ ಪ್ರಧಾನ ಕಾರ್ಯದರ್ಶಿ ಅನಿಲ್ ಶೆಟ್ಟಿ, ಬೆಳ್ಳರ್ಪಾಡಿ ಹಾಲು ಉತ್ಪಾದಕರ ಸಹಕಾರ ಸಂಘದ ಅಧ್ಯಕ್ಷರಾದ ಶಿವರಾಮ ಶೆಟ್ಟಿ, ಪಂಚಾಯತ್ ಸದಸ್ಯರಾದ ಸತೀಶ್ ಶೆಟ್ಟಿ, ಹರೀಶ್ ನಾಯಕ್, ರೋಹಿತ್ ಶೆಟ್ಟಿ, ನಿತಿನ್ ಶೆಟ್ಟಿ ಉಪಸ್ಥಿತರಿದ್ದರು.