Saturday, November 23, 2024
Saturday, November 23, 2024

ಬಿತ್ತನೆ ಬೀಜ ಕೊರತೆಯಾಗದಂತೆ ಕ್ರಮ: ಸಚಿವ ಪಾಟೀಲ್

ಬಿತ್ತನೆ ಬೀಜ ಕೊರತೆಯಾಗದಂತೆ ಕ್ರಮ: ಸಚಿವ ಪಾಟೀಲ್

Date:

ಉಡುಪಿ ಜಿಲ್ಲೆಯಲ್ಲಿ ಭತ್ತದ ಬಿತ್ತನೆಗೆ ಪ್ರತಿ ವರ್ಷ ಎಂಓ4 ಬಿತ್ತನೆ ಬೀಜದ ಕೊರತೆಯಾಗುತ್ತಿದ್ದು, ಮುಂದಿನ ವರ್ಷದಿಂದ ಬಿತ್ತನೆ ಬೀಜದ ಕೊರತೆಯಾಗದಂತೆ ಕ್ರಮ ಕೈಗೊಳ್ಳಲಾಗುವುದು ಎಂದು ಕೃಷಿ ಸಚಿವ ಬಿ.ಸಿ ಪಾಟೀಲ್ ಹೇಳಿದರು. ಅವರು ಶನಿವಾರ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ನಡೆದ ಜಿಲ್ಲೆಯ ಕೃಷಿ ಇಲಾಖೆಯ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಉಡುಪಿಯಲ್ಲಿನ ಹಡಿಲು ಕೃಷಿ ಭೂಮಿಯಲ್ಲಿ ಬಿತ್ತನೆ ಮಾಡುವ ಕಾರ್ಯ ನಡೆಯುತ್ತಿದು, ಇದು ಇಡೀ ರಾಜ್ಯಕ್ಕೆ ಮಾದರಿ ಕಾರ್ಯಕ್ರಮವಾಗಿದೆ. ಜಿಲ್ಲೆಯ ಪ್ರತಿಯೊಬ್ಬ ರೈತರೂ ಸಹ ತಮ್ಮ ಹಡಿಲು ಭೂಮಿಯಲ್ಲಿ ಕೃಷಿ ಚಟುವಟಿಕೆ ಕೈಗೊಳ್ಳುವಂತೆ ಕೃಷಿ ಇಲಾಖೆಯ ಮೂಲಕ ಮನವೊಲಿಸಿ ಪ್ರೋತ್ಸಾಹಿಸಲಾಗುವುದು. ಜಿಲ್ಲೆಯಲ್ಲಿ ಕೊರೋನಾ ನಂತರ ಕೃಷಿ ಚಟುವಟಿಕೆ ನಡೆಸುವವರ ಸಂಖ್ಯೆ ಹೆಚ್ಚಾಗಿದ್ದು, ನಿರೀಕ್ಷಿತ ಪ್ರಮಾಣದಲ್ಲಿ ಬಿತ್ತನೆ ಬೀಜ ದೊರೆಯದೇ ಇರುವುದರಿಂದ ಹೆಚ್ಚಿನ ಪ್ರದೇಶದಲ್ಲಿ ಬಿತ್ತನೆ ಕಾರ್ಯ ನಡೆಯುತ್ತಿಲ್ಲ. ಆದ್ದರಿಂದ ಜಿಲ್ಲೆಗೆ ಅಗತ್ಯವಿರುವ ಎಂಓ4 ಬಿತ್ತನೆ ಬೀಜವನ್ನು ಹೆಚ್ಚಿನ ಸಂಖ್ಯೆಯಲ್ಲಿ ಸರಬರಾಜು ಮಾಡಲು ಕ್ರಮ ಕೈಗೊಳ್ಳಲಾಗುವುದು ಎಂದ ಸಚಿವ ಬಿ.ಸಿ.ಪಾಟೀಲ್ ಹಿಂಗಾರು ಹಂಗಾಮಿನಲ್ಲಿ ಸಾಧ್ಯವಾದಲ್ಲಿ ಇಲ್ಲಿಯೇ ಬಿತ್ತನೆ ಭತ್ತವನ್ನು ಬೆಳೆಯುವಂತೆ ತಿಳಿಸಿದರು.

ಪ್ರಧಾನಮಂತ್ರಿಗಳ ಆತ್ಮನಿರ್ಭರ ಯೋಜನೆಯಲ್ಲಿ ರೈತರು ಕೃಷಿಗೆ ಸಂಬಂಧಿಸಿದ ಹಲವು ಚಟುವಟಿಕೆಗಳನ್ನು ಕೈಗೊಳ್ಳಲು ಅವಕಾಶವಿದ್ದು, ರೈತರು ಇದರ ಸದುಪಯೋಗ ಪಡೆದುಕೊಳ್ಳುವಂತೆ ತಿಳಿಸಿದ ಸಚಿವ ಬಿ.ಸಿ ಪಾಟೀಲ್, ಜಿಲ್ಲೆಯಲ್ಲಿ ಹವಾಮಾನ ಬೆಳೆ ಆಧಾರಿತ ವಿಮೆ ಯೋಜನೆಯಲ್ಲಿ ಬಾಕಿ ಇರುವ ರೈತರ ವಿಮಾ ಮೊತ್ತವನ್ನು ಶೀಘ್ರದಲ್ಲಿ ಮಂಜೂರು ಮಾಡುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಜಿಲ್ಲೆಯಲ್ಲಿ ಕೃಷಿ ಕಾರ್ಮಿಕರ ಸಮಸ್ಯೆ ಇರುವುದರಿಂದ ಯಾಂತ್ರೀಕರಣ ಕೃಷಿಗೆ ಆದ್ಯತೆ ನೀಡಿ. ಸಕಾಲದಲ್ಲಿ ಕಡಿಮೆ ವೆಚ್ಚದಲ್ಲಿ ಯಂತ್ರೋಪಕರಣಗಳ ಸೇವೆಯನ್ನು ರೈತರಿಗೆ ದೊರಕಿಸುವಲ್ಲಿ ಸೇವಾ ಕೇಂದ್ರಗಳು ಕಾರ್ಯನಿರ್ವಹಿಸಬೆಕು ಎಂದು ಸಚಿವರು ಸೂಚನೆ ನೀಡಿದರು.

ಜಿಲ್ಲೆಯಲ್ಲಿ ಕೃಷಿ ಚಟುವಟಿಕೆಗಳಿಗೆ ಕಾಡುಪ್ರಾಣಿಗಳ ಹಾವಳಿ ತಪ್ಪಿಸುವಂತೆ, ಹಣ್ಣು ಮತ್ತು ತರಕಾರಿ ಬೆಳೆಗಳ ಶೇಖರಣೆಗಾಗಿ ಕೋಲ್ಡ್ ಸ್ಟೋರೇಜ್ ನಿರ್ಮಾಣ, ಭತ್ತದ ಬೆಳಗೆ ಪ್ರೋತ್ಸಾಹ ಧನ ನೀಡುವುದು ಮತ್ತು ಬ್ರಹ್ಮಾವರ ಸಕ್ಕರೆ ಕಾರ್ಖಾನೆ ಆರಂಭ ಸೇರಿದಂತೆ ಮತ್ತಿತತರ ಬೇಡಿಕೆಗಳ ಕುರಿತು ಭಾರತೀಯ ಕಿಸಾನ್ ಸಂಘದ ಪದಾಧಿಕಾರಿಗಳು ಸಚಿವರಿಗೆ ಮನವಿ ಸಲ್ಲಿಸಿದರು.
ರೈತರೊಂದಿಗೆ ಒಂದು ದಿನ ಬೆರೆತು ಅವರ ಸಮಸ್ಯೆಗಳನ್ನು ಆಲಿಸುವ, ರೈತರೊಂದಿಗೆ ಒಂದು ದಿನ ಕಾರ್ಯಕ್ರಮವನ್ನು ಕೊರೋನಾ ಕಾರಣದಿಂದ ಸ್ಥಗಿತಗೊಳಿಸಿದ್ದು, ಶೀಘ್ರದಲ್ಲಿ ಕಾರ್ಯಕ್ರಮವನ್ನು ಪುನಾರಾರಂಭಿಸುವದರ ಮೂಲಕ ರೈತರ ಸಮಸ್ಯೆಗಳನ್ನು ಅರಿತು, ಸ್ಥಳದಲ್ಲಿಯೇ ಅವುಗಳನ್ನು ಬಗೆಹರಿಸಲು ಪ್ರಯತ್ನಿಸಲಾಗುವುದು ಎಂದು ಸಚಿವ ಬಿ.ಸಿ.ಪಾಟೀಲ್ ಹೇಳಿದರು.

ಸಭೆಯಲ್ಲಿ ಶಾಸಕ ಕೆ. ರಘುಪತಿ ಭಟ್, ಲಾಲಾಜಿ ಆರ್ ಮೆಂಡನ್, ಹಾಲಾಡಿ ಶ್ರೀನಿವಾಸ ಶೆಟ್ಟಿ, ಕರಾವಳಿ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಮಟ್ಟಾರು ರತ್ನಾಕರ ಹೆಗ್ಡೆ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ. ನವೀನ್ ಭಟ್, ಅಪರ ಜಿಲ್ಲಾಧಿಕಾರಿ ಸದಾಶಿವ ಪ್ರಭು, ಕೃಷಿ ಇಲಾಖೆಯ ಜಂಟಿ ನಿರ್ದೇಶಕ ಕೆಂಪೇಗೌಡ ಹಾಗೂ ಜಿಲ್ಲೆಯ ವಿವಿಧ ಕೃಷಿಕ ಸಂಘಟನೆಗಳ ಪ್ರತಿನಿಧಿಗಳು ಮತ್ತು ಕೃಷಿ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಇತಿಹಾಸದ ಅವಲೋಕನ ಬದುಕಿನ ಪುನರ್ ವಿಮರ್ಶೆಗೆ ಸಹಾಯಕ: ಶಬಾನ್ ಅಂಜುಮ್

ಕೋಟ, ನ.22: ಇತಿಹಾಸದ ಪಿತಾಮಹ ಹೆರೋಡಟಸ್ ಸಂಸ್ಕೃತಿಗಳ ತಿಳಿಯಲು ಒಂದು ಉತ್ತಮ...

ಆನಂದತೀರ್ಥ: ವಾರ್ಷಿಕ ಕ್ರೀಡಾಕೂಟ

ಕಟಪಾಡಿ, ನ.22: ಪೇಜಾವರ ಮಠದ ಆಡಳಿತಕ್ಕೊಳಪಟ್ಟ ಪಾಜಕ ಆನಂದತೀರ್ಥ ಪ.ಪೂ ಕಾಲೇಜು...

ಸಾಂಸ್ಕೃತಿಕ ಸ್ಪರ್ಧೆ: ಮಣಿಪಾಲ ಜ್ಞಾನಸುಧಾದ ವಿದ್ಯಾರ್ಥಿಗಳ ಅಮೋಘ ಸಾಧನೆ

ಉಡುಪಿ, ನ.22: ಕರ್ನಾಟಕ ರಾಜ್ಯ ವಿದ್ಯಾರ್ಥಿ ಕ್ಷೇಮಾಭಿವೃದ್ಧಿ ಮತ್ತು ಶಾಲಾ ಶಿಕ್ಷಣ...

ಅರುಣ್ಯಾ 2024: ಭಂಡಾರಕಾರ್ಸ್ ಪಿಯು ಕಾಲೇಜು ತಂಡ ಚಾಂಪಿಯನ್

ಬಸ್ರೂರು, ನ.22: ಶ್ರೀ ಶಾರದಾ ಕಾಲೇಜು ಬಸ್ರೂರು ಇಲ್ಲಿ ಉಡುಪಿ ಜಿಲ್ಲಾಮಟ್ಟದ...
error: Content is protected !!