ಸರಕಾರಿ ಪ್ರಥಮ ದರ್ಜೆ ಕಾಲೇಜು ಮತ್ತು ಸ್ನಾತಕೋತ್ತರ ಅಧ್ಯಯನ ಕೇಂದ್ರ ತೆಂಕನಿಡಿಯೂರು ಇದರ ವಿದ್ಯಾರ್ಥಿಗಳಿಗೆ ಮತ್ತು ಬೋಧಕ ಬೋಧಕೇತರ ಸಿಬ್ಬಂದಿಗಳಿಗೆ ಉಡುಪಿ ಜಿಲ್ಲಾಡಳಿತ, ಆರೋಗ್ಯ ಇಲಾಖೆ ಮತ್ತು ಕೆಮ್ಮಣ್ಣು ಪ್ರಾಥಮಿಕ ಆರೋಗ್ಯ ಕೇಂದ್ರದ ಸಹಕಾರದಲ್ಲಿ ಸೋಮವಾರ ಕೋವಿಡ್ ಲಸಿಕಾ ಅಭಿಯಾನ ನಡೆಯಿತು.
ಶಾಸಕ ಕೆ. ರಘುಪತಿ ಭಟ್ ಅಭಿಯಾನಕ್ಕೆ ಚಾಲನೆ ನೀಡಿದರು. ಪ್ರಾಂಶುಪಾಲ ಬಾಲಕೃಷ್ಣ ಎಸ್. ಹೆಗ್ಡೆ, ಕೆಮ್ಮಣ್ಣು ಪ್ರಾಥಮಿಕ ಆರೋದ್ಯ ಕೇಂದ್ರದ ವೈದ್ಯಾಧಿಕಾರಿ ಡಾ. ಪ್ರೀಮಾ, ಕಾಲೇಜಿನ ಬೋಧಕ ಬೋಧಕೇತರರು, ವಿದ್ಯಾರ್ಥಿಗಳು ಉಪಸ್ಥಿತರಿದ್ದರು.
ಸುಮಾರು 700 ಡೋಸ್ ಲಸಿಕೆಯನ್ನು ನೀಡಲಾಯಿತು.