ಹಡಿಲು ಭೂಮಿ ಕೃಷಿ ಅಂದೋಲನದಡಿ ಕೇದಾರೋತ್ಥಾನ ಟ್ರಸ್ಟ್ ಮೂಲಕ ಅಂಬಲಪಾಡಿ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಸುಮಾರು 35 ಎಕರೆ ಹಡಿಲು ಭೂಮಿಯನ್ನು ಸಾವಯವ ಕೃಷಿ ಮಾಡಲಾಗುತ್ತಿದ್ದು, ಅಂಬಲಪಾಡಿ ಕುಂಜಗುಡ್ಡೆಯಲ್ಲಿ 15 ಎಕರೆ ಹಡಿಲು ಭೂಮಿ ಕೃಷಿ ಕಾರ್ಯಕ್ಕೆ ಗುರುವಾರ ಚಾಲನೆ ನೀಡಲಾಯಿತು.
ಯಕ್ಷಗಾನ ಕಲಾರಂಗ ಉಡುಪಿ ಅಧ್ಯಕ್ಷ ಎಂ. ಗಂಗಾಧರ್ ರಾವ್ ಹಾಗೂ ಎ.ಸಿ.ಸಿ.ಇ.ಎ ಉಡುಪಿ ಅಧ್ಯಕ್ಷ ಗೋಪಾಲ್ ಭಟ್ ಇವರು ಭೂಮಿಗೆ ಹಾಲನ್ನು ಅರ್ಪಿಸಿ ಚಾಲನೆ ನೀಡಿದರು.
ಈ ಸಂದರ್ಭದಲ್ಲಿ ಸ್ಥಳೀಯ ನಗರಸಭಾ ಸದಸ್ಯ ಹರೀಶ್ ಶೆಟ್ಟಿ, ಅಂಬಲಪಾಡಿ ಗ್ರಾಮ ಪಂಚಾಯತ್ ಉಪಾಧ್ಯಕ್ಷ ಸೋಮನಾಥ್ ಬಿ.ಕೆ, ಚಾರ್ಟೆಡ್ ಅಕೌಂಟೆಂಟ್ ಗಣೇಶ್, ಉಡುಪಿ ಜಿಲ್ಲಾ ಇಂಜಿನಿಯರ್ಸ್ ಅಸೋಸಿಯೆಶನ್ ಕಾರ್ಯದರ್ಶಿ ಅಮಿತ್ ಅರವಿಂದ್, ಕೋಶಾಧಿಕಾರಿ ಲಕ್ಷ್ಮೀನಾರಾಯಣ ಉಪಾಧ್ಯ, ಸ್ಥಳೀಯ ಹಿರಿಯ ಕೃಷಿಕ ಸಂಜೀವ ಶೆಟ್ಟಿ ಕುಂಜಗುಡ್ಡೆ, ಕೇದಾರೋತ್ಥಾನ ಟ್ರಸ್ಟ್ ನ ಪ್ರಧಾನ ಕಾರ್ಯದರ್ಶಿಗಳಾದ ಮುರಳಿ ಕಡೆಕಾರ್, ಕೋಶಾಧಿಕಾರಿಗಳಾದ ಕೆ. ರಾಘವೇಂದ್ರ ಕಿಣಿ, ಸದಸ್ಯರಾದ ದಿನಕರ್ ಬಾಬು, ಕೃಷಿ ಮತ್ತು ತೋಟಗಾರಿಕೆ ವಿಶ್ವವಿದ್ಯಾಲಯ ಶಿವಮೊಗ್ಗ ಮತ್ತು ವಲಯ ಕೃಷಿ ಮತ್ತು ತೋಟಗಾರಿಕೆ ಸಂಶೋಧನಾ ಕೇಂದ್ರ ಬ್ರಹ್ಮಾವರದ ಹಿರಿಯ ಕ್ಷೇತ್ರ ಅಧಿಕಾರಿಗಳಾದ ಶಂಕರ್, ಗ್ರಾಮೋತ್ಥಾನ ಸಮಿತಿ ಅಂಬಲಪಾಡಿ ಇದರ ಗೌರವ ಸಂಚಾಲಕ ಯೋಗೀಶ್ ಶೆಟ್ಟಿ, ಪ್ರಧಾನ ಸಂಚಾಲಕ ಶಿವಕುಮಾರ್ ಅಂಬಲಪಾಡಿ, ಸಹ ಸಂಚಾಲಕರಾದ ರಾಜೇಶ್ ಸುವರ್ಣ, ಮಹೇಂದ್ರ ಕೋಟ್ಯಾನ್, ಹರೀಶ್ ಆಚಾರ್ಯ, ವಿನೋದ್ ಪೂಜಾರಿ, ಅಣ್ಣು ಪದ್ಮನಾಭ ಪೂಜಾರಿ, ಶ್ರೀಧರ ಪೂಜಾರಿ, ಗ್ರಾಮ ಪಂಚಾಯತ್ ಸದಸ್ಯರಾದ ಭಾರತಿ ಭಾಸ್ಕರ್, ಕುಸುಮ, ಸುಜಾತ ಮುಂತಾದವರು ಉಪಸ್ಥಿತರಿದ್ದರು.