Sunday, September 22, 2024
Sunday, September 22, 2024

ರಾಜ್ಯ ಮಟ್ಟದ ಆಯ್ಕೆ ಸಮಿತಿಗೆ ಪುಸ್ತಕಗಳ ಆಹ್ವಾನ

ರಾಜ್ಯ ಮಟ್ಟದ ಆಯ್ಕೆ ಸಮಿತಿಗೆ ಪುಸ್ತಕಗಳ ಆಹ್ವಾನ

Date:

ಪ್ರಸಕ್ತ ಸಾಲಿನಲ್ಲಿ ಪ್ರಥಮ ಮುದ್ರಣವಾಗಿ ಪ್ರಕಟಗೊಂಡ ಕನ್ನಡ, ಆಂಗ್ಲ ಮತ್ತು ಭಾರತೀಯ ಇತರೆ ಭಾಷೆಯ ಪುಸ್ತಕಗಳನ್ನು ಬೆಂಗಳೂರಿನ ರಾಜ್ಯ ಕೇಂದ್ರ ಗ್ರಂಥಾಲಯದ ಗ್ರಂಥಸ್ವಾಮ್ಯ ವಿಭಾಗದಲ್ಲಿ ಜುಲೈ 30ರ ಒಳಗೆ ಕಾಫಿರೈಟ್ ಮಾಡಿಸಿರಬೇಕು. ಕಾಫಿರೈಟ್ ಮಾಡಿಸಿರುವ ಪುಸ್ತಕಗಳನ್ನು ರಾಜ್ಯ ಮಟ್ಟದ ಪುಸ್ತಕ ಆಯ್ಕೆ ಸಮಿತಿಗೆ ಆಯ್ಕೆಗಾಗಿ ಸಲ್ಲಿಸಲು ಪುಸ್ತಕಗಳನ್ನು ಆಹ್ವಾನಿಸಲಾಗಿದೆ.

ಲೇಖಕರು, ಲೇಖಕ ಪ್ರಕಾಶಕರು ಹಾಗೂ ಪ್ರಕಟಣಾ ಸಂಸ್ಥೆಗಳು ಪುಸ್ತಕವನ್ನು ಆಯ್ಕೆಗೆ ಸಲ್ಲಿಸುವಾಗ ಅನುಮತಿ ಪತ್ರದೊಂದಿಗೆ ಪುಸ್ತಕದ ಸಾಫ್ಟ್ ಕಾಫಿಯನ್ನು ಸಿ.ಡಿ. ರೂಪದಲ್ಲಿ (ನೋಂದಣಿ ಪತ್ರದ ಪ್ರತಿಯೊಂದಿಗೆ) ನಿರ್ದೇಶಕರು, ಸಾರ್ವಜನಿಕ ಗ್ರಂಥಾಲಯ ಇಲಾಖೆ, ವಿಶ್ವೇಶ್ವರಯ್ಯ ಮುಖ್ಯ ಗೋಪುರ, 4ನೇ ಮಹಡಿ, ಡಾ. ಅಂಬೇಡ್ಕರ್ ವೀಧಿ, ಬೆಂಗಳೂರು ಇಲ್ಲಿಗೆ ಸಲ್ಲಿಸಲು ಜುಲೈ 31 ಕೊನೆಯ ದಿನ.

ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ಇಲಾಖಾ ವೆಬ್‌ಸೈಟ್ http://www.dpl.karnataka.gov.in ಅಥವಾ ನಗರ ಹಾಗೂ ಜಿಲ್ಲಾ ಕೇಂದ್ರ ಗ್ರಂಥಾಲಯಗಳ ಮುಖ್ಯ ಗ್ರಂಥಾಲಯಾಧಿಕಾರಿಗಳ ಕಛೇರಿಗಳನ್ನು ಸಂಪರ್ಕಿಸುವಂತೆ ನಗರ ಕೇಂದ್ರ ಗ್ರಂಥಾಲಯದ ಮುಖ್ಯ ಗ್ರಂಥಾಲಯಾಧಿಕಾರಿ ಜಯಶ್ರೀ ಎಂ. ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ದಸರಾ ಪ್ರದರ್ಶನಕ್ಕೆ ಕಲಾಕೃತಿ ಆಹ್ವಾನ

ಬೆಂಗಳೂರು, ಸೆ.21: ನಾಡಹಬ್ಬ ಮೈಸೂರು ದಸರಾ ಮಹೋತ್ಸವ - 2024ರಲ್ಲಿ ಲಲಿತಕಲೆ...

ಮ್ಯಾಕ್ಸಿಕ್ಯಾಬ್ ನ ಜಿಪಿಎಸ್ ಹಾಗೂ ಪ್ಯಾನಿಕ್ ಬಟನ್ ಕಡ್ಡಾಯ ನಿಯಮ ಸಡಿಲಿಕೆಗೆ ಮನವಿ

ಬೆಂಗಳೂರು, ಸೆ.22: ಉಡುಪಿ ಜಿಲ್ಲಾ ಟ್ಯಾಕ್ಸಿ ಮೆನ್ ಮತ್ತು ಮ್ಯಾಕ್ಸಿಕ್ಯಾಬ್ ಅಸೋಸಿಯೇಷನ್...

ಕೃಷಿ ಕಾಯಕಕ್ಕೆ ಪ್ರೋತ್ಸಾಹ ಅಗತ್ಯ: ಭಾಸ್ಕರ್ ಸ್ವಾಮಿ

ಕೋಟ, ಸೆ.22: ಕೃಷಿ ಕಾಯಕಕ್ಕೆ ಪ್ರೋತ್ಸಾಹ ಅಗತ್ಯ. ಈ ನಿಟ್ಟಿನಲ್ಲಿ ಪಂಚವರ್ಣದ...

ಕಸಾಪ ಉಡುಪಿ ತಾಲೂಕು ಘಟಕದಿಂದ ಪುಸ್ತಕಗಳ ಕೊಡುಗೆ

ಉಡುಪಿ, ಸೆ.22: ಉಡುಪಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು, ಉಡುಪಿ ತಾಲೂಕು...
error: Content is protected !!