24 ಗಂಟೆಗಳಲ್ಲಿ ದೇಶಾದ್ಯಂತ 44,111 ಹೊಸ ಪಾಸಿಟಿವ್ ಪ್ರಕರಣಗಳು ಪತ್ತೆಯಾಗುವ ಮೂಲಕ ಒಟ್ಟು ಸೋಂಕಿತರ ಸಂಖ್ಯೆ 3,05,02,362 ಕ್ಕೆ ಏರಿದೆ ಎಂದು ಕೇಂದ್ರ ಸರ್ಕಾರದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಇಂದು ತಿಳಿಸಿದೆ.
ಇದೇ ವೇಳೆ 57,477 ಮಂದಿ ಕಳೆದ 24 ತಾಸಿನಲ್ಲಿ ಗುಣಮುಖರಾಗಿದ್ದಾರೆ. ದೇಶದಲ್ಲಿ ಒಟ್ಟು 4,95,533 ಸಕ್ರಿಯ ಪ್ರಕರಣಗಳಿವೆ. ಇಲ್ಲಿಯವರೆಗೆ 2,96,05,779 ಮಂದಿ ಗುಣಮುಖರಾಗಿದ್ದಾರೆ. ಕಳೆದ 24 ಗಂಟೆಗಳಲ್ಲಿ 738 ಮಂದಿ ಸಾವನ್ನಪ್ಪಿದ್ದಾರೆ. ಇಲ್ಲಿಯವರೆಗೆ ಒಟ್ಟು 4,01,050 ಮಂದಿ ಕೊರೊನಾಗೆ ಬಲಿಯಾಗಿದ್ದಾರೆ. ಇಲ್ಲಿಯವರೆಗೆ 34,46,11,291 ಡೋಸ್ ಲಸಿಕೆ ನೀಡಲಾಗಿದೆ.