ಹಡಿಲು ಭೂಮಿ ಕೃಷಿ ಯೋಜನೆಯಡಿ ಕೇದಾರೋತ್ಥಾನ ಟ್ರಸ್ಟ್ ಮೂಲಕ ಚಾಂತಾರು ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಸುಮಾರು 31 ಎಕರೆ ಹಡಿಲು ಭೂಮಿಯಲ್ಲಿ ಸಾವಯವ ಕೃಷಿ ಮಾಡಲಾಗುತ್ತಿದ್ದು, ಚಾಂತಾರು ಅಗ್ರಹಾರದಲ್ಲಿ 8 ಎಕರೆ ಹಡಿಲು ಭೂಮಿ ಕೃಷಿ ಕಾರ್ಯಕ್ಕೆ ಶನಿವಾರ ಚಾಲನೆ ನೀಡಲಾಯಿತು.
ದೀಪ್ತಿ ಎಂಟರ್ಪ್ರೈಸಸ್ ಮುಖ್ಯಸ್ಥರಾದ ಗಣೇಶ್ ನಾಯಕ್ ಕಲ್ಮರ್ಗಿ ಹಾಗೂ ಬ್ರಹ್ಮಾವರ ವ್ಯವಸಾಯ ಸೇವಾ ಸಹಕಾರಿ ಸಂಘದ ಅಧ್ಯಕ್ಷರಾದ ಇರ್ಮಾಡಿ ತಿಮ್ಮಪ್ಪ ಹೆಗ್ಡೆ ಇವರೊಂದಿಗೆ ಶಾಸಕರಾದ ಕೆ. ರಘುಪತಿ ಭಟ್ ರವರು ಭೂಮಿಗೆ ಹಾಲನ್ನು ಅರ್ಪಿಸಿ ಚಾಲನೆ ನೀಡಿದರು.
ಈ ಸಂದರ್ಭದಲ್ಲಿ ಚಾಂತಾರು ಗ್ರಾಮ ಪಂಚಾಯತ್ ಅಧ್ಯಕ್ಷರಾದ ಮೀರಾ ಸದಾನಂದ ಪೂಜಾರಿ, ಉಪಾಧ್ಯಕ್ಷರಾದ ಲಕ್ಷ್ಮೀ, ಗ್ರಾಮಾಂತರ ಬಿಜೆಪಿ ಅಧ್ಯಕ್ಷರಾದ ವೀಣಾ ನಾಯ್ಕ್, ಗ್ರಾಮಾಂತರ ಬಿಜೆಪಿ ಪ್ರಧಾನ ಕಾರ್ಯದರ್ಶಿಗಳಾದ ಅಶೋಕ್ ಹೇರೂರು, ವಿಶ್ವನಾಥ ಭಟ್, ರಾಯಪ್ಪ ರೈ, ಕೇದಾರೋತ್ಥಾನ ಟ್ರಸ್ಟ್ ನ ಪ್ರಧಾನ ಕಾರ್ಯದರ್ಶಿಗಳಾದ ಮುರಳಿ ಕಡೆಕಾರ್, ಕೋಶಾಧಿಕಾರಿಗಳಾದ ಕೆ. ರಾಘವೇಂದ್ರ ಕಿಣಿ, ಸದಸ್ಯರಾದ ಪ್ರತಾಪ್ ಹೆಗ್ಡೆ ಮಾರಾಳಿ, ಕೃಷಿ ಮತ್ತು ತೋಟಗಾರಿಕೆ ವಿಶ್ವವಿದ್ಯಾಲಯ ಶಿವಮೊಗ್ಗ ಮತ್ತು ವಲಯ ಕೃಷಿ ಮತ್ತು ತೋಟಗಾರಿಕೆ ಸಂಶೋಧನಾ ಕೇಂದ್ರ ಬ್ರಹ್ಮಾವರದ ಹಿರಿಯ ಕ್ಷೇತ್ರ ಅಧಿಕಾರಿಗಳಾದ ಶಂಕರ್, ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳಾದ ಸತೀಶ್, ಮುಂತಾದವರು ಉಪಸ್ಥಿತರಿದ್ದರು.