ಸುವರ್ಣ ಎಂಟರ್ಪ್ರೈಸಸ್ ಬ್ರಹ್ಮಾವರ, ಜಯಂಟ್ಸ್ ಗ್ರೂಪ್ ಆಫ್ ಬ್ರಹ್ಮಾವರ ಮತ್ತು ಪ್ರಧಾನ ಮಂತ್ರಿ ಜನೌಷಧಿ ಕೇಂದ್ರ ಬ್ರಹ್ಮಾವರ ಇದರ ವತಿಯಿಂದ ಬೃಹತ್ ವನಮಹೋತ್ಸವ ಕಾರ್ಯಕ್ರಮ ನಡೆಯಿತು. ಈ ಸಂದರ್ಭದಲ್ಲಿ ಸಾರ್ವಜನಿಕರಿಗೆ ಸುಮಾರು ಮೂರು ಸಾವಿರ ಹಣ್ಣು ಮತ್ತು ಔಷಧೀಯ ಸಸ್ಯಗಳನ್ನು ವಿತರಿಸಲಾಯಿತು.
ವೈದ್ಯರ ದಿನಾಚರಣೆಯ ಅಂಗವಾಗಿ ಸಮುದಾಯ ಆರೋಗ್ಯ ಕೇಂದ್ರ ವೈದ್ಯರಾದ ಡಾ. ಅಜಿತ್ ಕುಮಾರ್ ಶೆಟ್ಟಿ, ಡಾ. ಮಹೇಶ್ ಐತಾಳ, ಡಾ. ಎರಿಕ್ ಫೆರ್ನಾಂಡೀಸ್, ಡಾ. ಮಹಾಬಲ ಕೆ.ಎಸ್ ರವರನ್ನು ಸನ್ಮಾನಿಸಲಾಯಿತು. ಬಿಜೆಪಿ ವೈದ್ಯಕೀಯ ಪ್ರಕೋಷ್ಠದ ಜಿಲ್ಲಾ ಸಹ ಸಂಚಾಲಕ ಡಾ. ರಾಮಚಂದ್ರ ಕಾಮತ್ ಹಾಗೂ ರಾಜ್ಯ ವೈದ್ಯಕೀಯ ಪ್ರಕೋಷ್ಠದ ಪದಾಧಿಕಾರಿ ಡಾ. ವಿಜಯೀoದ್ರ ವಸಂತ್ ಚಾಲನೆ ನೀಡಿ ಶುಭ ಹಾರೈಸಿದರು.
ಮಾಜಿ ಫೆಡರೇಶನ್ ಅಧ್ಯಕ್ಷ ಮಧುಸೂದನ್ ಹೇರೂರು ಪ್ರಸ್ತಾವನೆಗೈದರು. ಸುವರ್ಣ ಎಂಟರ್ಪ್ರೈಸ್ ಮುಖ್ಯಸ್ಥರಾದ ಸುನಿತಾ ಮಧುಸೂದನ್, ಜಯಂಟ್ಸ್ ಅಧ್ಯಕ್ಷ ಸುಂದರ ಪೂಜಾರಿ, ಮಿಲ್ಟನ್ ಒಲಿವೇರಾ, ದರ್ಶಕ್, ವಿವೇಕಾನಂದ ಕಾಮತ್, ಮುಂತಾದವರು ಉಪಸ್ಥಿತರಿದ್ದರು. ಸ್ವಚ್ಛ ಭಾರತ್ ಫ್ರೆಂಡ್ಸ್ ಸಂಯೋಜಕ ರಾಘವೇಂದ್ರ ಪ್ರಭು ಕರ್ವಾಲು ನಿರೂಪಿಸಿದರು.