ಉಡುಪಿ ಜಿಲ್ಲೆಯಲ್ಲಿ 28 ಮಂದಿಗೆ ಸೋಂಕು ದೃಢಪಟ್ಟಿದೆ. ಉಡುಪಿ ತಾಲೂಕು-10, ಕುಂದಾಪುರ-10, ಕಾರ್ಕಳ-8, ಮಂದಿ ಸೋಂಕಿಗೆ ಒಳಗಾಗಿದ್ದಾರೆ. 130 ಮಂದಿ ಗುಣಮುಖರಾಗಿದ್ದು ಇಲ್ಲಿಯವರೆಗೆ 65587 ಮಂದಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಜಿಲ್ಲೆಯಲ್ಲಿ 821 ಸಕ್ರಿಯ ಪ್ರಕರಣಗಳಿವೆ.
ಉಡುಪಿ ತಾಲೂಕಿನ 69 ವರ್ಷದ ವ್ಯಕ್ತಿ ಮತ್ತು ಕುಂದಾಪುರ ತಾಲೂಕಿನ 64 ವರ್ಷದ ವ್ಯಕ್ತಿ ಸಾವನ್ನಪ್ಪಿದ್ದಾರೆ. ಇಲ್ಲಿಯವರೆಗೆ 397 ಮಂದಿ ಕೊರೊನಾ ಸೋಂಕಿನಿಂದ ಮೃತಪಟ್ಟಿದ್ದಾರೆ. ಜುಲೈ 3 ರಂದು 2769 ಮಂದಿಯನ್ನು ಕೋವಿಡ್ ಪರೀಕ್ಷೆಗೆ ಒಳಪಡಿಸಲಾಗಿದೆ. ಇಲ್ಲಿಯವರೆಗೆ ಒಟ್ಟು 693237 ಮಂದಿಯನ್ನು ಪರೀಕ್ಷಿಸಲಾಗಿದೆ.