24 ಗಂಟೆಗಳಲ್ಲಿ ದೇಶಾದ್ಯಂತ 39,796 ಹೊಸ ಪಾಸಿಟಿವ್ ಪ್ರಕರಣಗಳು ಪತ್ತೆಯಾಗುವ ಮೂಲಕ ಒಟ್ಟು ಸೋಂಕಿತರ ಸಂಖ್ಯೆ 3,05,85,229 ಕ್ಕೆ ಏರಿದೆ ಎಂದು ಕೇಂದ್ರ ಸರ್ಕಾರದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಇಂದು ತಿಳಿಸಿದೆ.
ಇದೇ ವೇಳೆ 42,352 ಮಂದಿ ಕಳೆದ 24 ತಾಸಿನಲ್ಲಿ ಗುಣಮುಖರಾಗಿದ್ದಾರೆ. ದೇಶದಲ್ಲಿ ಒಟ್ಟು 4,82,071 ಸಕ್ರಿಯ ಪ್ರಕರಣಗಳಿವೆ. ಇಲ್ಲಿಯವರೆಗೆ 2,97,00,430 ಮಂದಿ ಗುಣಮುಖರಾಗಿದ್ದಾರೆ. ಕಳೆದ 24 ಗಂಟೆಗಳಲ್ಲಿ 723 ಮಂದಿ ಸಾವನ್ನಪ್ಪಿದ್ದಾರೆ. ಇಲ್ಲಿಯವರೆಗೆ ಒಟ್ಟು 4,02,728 ಮಂದಿ ಕೊರೊನಾಗೆ ಬಲಿಯಾಗಿದ್ದಾರೆ. ಇಲ್ಲಿಯವರೆಗೆ 35,28,92,046 ಡೋಸ್ ಲಸಿಕೆ ನೀಡಲಾಗಿದೆ.
ಜುಲೈ 4 ರಂದು 15,22,504 ಮಾದರಿಗಳನ್ನು ಸಂಗ್ರಹಿಸಿ ಕೋವಿಡ್ ಪರೀಕ್ಷೆಗೆ ಕಳುಹಿಸಲಾಗಿದೆ. ಇಲ್ಲಿಯವರೆಗೆ 41,97,77,457 ಮಾದರಿಗಳನ್ನು ಪರೀಕ್ಷಿಸಲಾಗಿದೆ ಎಂದು ಇಂಡಿಯನ್ ಕೌನ್ಸಿಲ್ ಆಫ್ ಮೆಡಿಕಲ್ ರಿಸರ್ಚ್ ಮಾಹಿತಿ ನೀಡಿದೆ.