ಜಿಲ್ಲೆಯ ಕಾಪು ತಾಲೂಕಿನ ಅಲೆವೂರು ಗ್ರಾಮ ಪಂಚಾಯತಿ ವ್ಯಾಪ್ತಿಯ ಪ್ರಗತಿನಗರದಲ್ಲಿ ನೆಲೆಸಿದ್ದ 135 ಜನ ಕಟ್ಟಡ ಕಾರ್ಮಿಕರಿಗೆ, ಕಟ್ಟಡ ಮತ್ತು ಇತರೆ ನಿರ್ಮಾಣ ಮಂಡಳಿಯಿಂದ ಒದಗಿಸಲಾಗಿದ್ದ ಸುರಕ್ಷತಾ ಕಿಟ್‌ಗಳನ್ನು ಹಿರಿಯ ಸಿವಿಲ್ ನ್ಯಾಯಾಧೀಶೆ ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಶರ್ಮಿಳಾ ಅವರು ವಿತರಿಸಿದರು.
ಈ ಸಂದರ್ಭದಲ್ಲಿ ಜಿಲ್ಲಾ ಕಾರ್ಮಿಕ ಅಧಿಕಾರಿ ಕುಮಾರ್ ಬಿ.ಆರ್., ಕಾರ್ಮಿಕ ನಿರೀಕ್ಷಕ ಪ್ರವೀಣ್ ಕುಮಾರ್, ಅಲೆವೂರು ಗ್ರಾಮ ಪಂಚಾಯತಿ ಉಪಾಧ್ಯಕ್ಷ ಸುಧಾಕರ್ ಪೂಜಾರಿ, ಸದಸ್ಯರಾದ ಲಲಿತಾ ನಾಯ್ಕ್, ಜೈಲೇಶ್ ಶೆಟ್ಟಿ, ದುಂಡಪ್ಪ ಬಿದಿರಿ, ರಾಜ್ಯ ವಲಸೆ ಕಟ್ಟಡ ಕಾರ್ಮಿಕರ ಸಂಘದ ಅಧ್ಯಕ್ಷ ಸಂಗಪ್ಪ ಹಾಗೂ ಕಾರ್ಮಿಕ ಇಲಾಖೆಯ ಸಿಬ್ಬಂದಿಗಳು ಉಪಸ್ಥಿತರಿದ್ದರು.