ಉಡುಪಿ ಜಿಲ್ಲೆಯಲ್ಲಿ 106 ಮಂದಿಗೆ ಸೋಂಕು ದೃಢಪಟ್ಟಿದೆ. ಉಡುಪಿ ತಾಲೂಕು-33, ಕುಂದಾಪುರ-48, ಕಾರ್ಕಳ-23, ಹೊರ ಜಿಲ್ಲೆಯ ಇಬ್ಬರು ಸೋಂಕಿಗೆ ಒಳಗಾಗಿದ್ದಾರೆ. 90 ಮಂದಿ ಗುಣಮುಖರಾಗಿದ್ದು ಇಲ್ಲಿಯವರೆಗೆ 65677 ಮಂದಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಜಿಲ್ಲೆಯಲ್ಲಿ 837 ಸಕ್ರಿಯ ಪ್ರಕರಣಗಳಿವೆ.
ಸೋಂಕಿನಿಂದ ಯಾವುದೇ ಸಾವು ಸಂಭವಿಸಿಲ್ಲ. ಇಲ್ಲಿಯವರೆಗೆ 397 ಮಂದಿ ಕೊರೊನಾ ಸೋಂಕಿನಿಂದ ಮೃತಪಟ್ಟಿದ್ದಾರೆ. ಜುಲೈ 4 ರಂದು 2420 ಮಂದಿಯನ್ನು ಕೋವಿಡ್ ಪರೀಕ್ಷೆಗೆ ಒಳಪಡಿಸಲಾಗಿದೆ. ಇಲ್ಲಿಯವರೆಗೆ ಒಟ್ಟು 695657 ಮಂದಿಯನ್ನು ಪರೀಕ್ಷಿಸಲಾಗಿದೆ.