ಉಡುಪಿ ಜಿಲ್ಲೆಯಲ್ಲಿ 147 ಮಂದಿಗೆ ಸೋಂಕು ದೃಢಪಟ್ಟಿದೆ. ಉಡುಪಿ ತಾಲೂಕು-49, ಕುಂದಾಪುರ-60, ಕಾರ್ಕಳ-38 ಮಂದಿ ಸೋಂಕಿಗೆ ಒಳಗಾಗಿದ್ದಾರೆ. 157 ಮಂದಿ ಗುಣಮುಖರಾಗಿದ್ದು ಇಲ್ಲಿಯವರೆಗೆ 65980 ಮಂದಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಜಿಲ್ಲೆಯಲ್ಲಿ 891 ಸಕ್ರಿಯ ಪ್ರಕರಣಗಳಿವೆ.
ಜಿಲ್ಲೆಯಲ್ಲಿ ಇಬ್ಬರು ಸೋಂಕಿಗೆ ಬಲಿಯಾಗಿದ್ದಾರೆ, ಇಲ್ಲಿಯವರೆಗೆ 400 ಮಂದಿ ಕೊರೊನಾ ಸೋಂಕಿನಿಂದ ಮೃತಪಟ್ಟಿದ್ದಾರೆ. ಜುಲೈ 7 ರಂದು 3164 ಮಂದಿಯನ್ನು ಕೋವಿಡ್ ಪರೀಕ್ಷೆಗೆ ಒಳಪಡಿಸಲಾಗಿದೆ. ಇಲ್ಲಿಯವರೆಗೆ ಒಟ್ಟು 702869 ಮಂದಿಯನ್ನು ಪರೀಕ್ಷಿಸಲಾಗಿದೆ.