ಉಡುಪಿ ಜಿಲ್ಲೆಯಲ್ಲಿ 92 ಮಂದಿಗೆ ಸೋಂಕು ದೃಢಪಟ್ಟಿದೆ. ಉಡುಪಿ ತಾಲೂಕು-32, ಕುಂದಾಪುರ-25, ಕಾರ್ಕಳ-32 ಮತ್ತು ಹೊರ ಜಿಲ್ಲೆಯ ಮೂವರು ಸೋಂಕಿಗೆ ಒಳಗಾಗಿದ್ದಾರೆ. 93 ಮಂದಿ ಗುಣಮುಖರಾಗಿದ್ದು ಇಲ್ಲಿಯವರೆಗೆ 66305 ಮಂದಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಜಿಲ್ಲೆಯಲ್ಲಿ 901 ಸಕ್ರಿಯ ಪ್ರಕರಣಗಳಿವೆ.
ಜಿಲ್ಲೆಯಲ್ಲಿ ಯಾವುದೇ ಸಾವು ಸಂಭವಿಸಿಲ್ಲ, ಇಲ್ಲಿಯವರೆಗೆ 401 ಮಂದಿ ಕೊರೊನಾ ಸೋಂಕಿನಿಂದ ಮೃತಪಟ್ಟಿದ್ದಾರೆ. ಜುಲೈ 10 ರಂದು 3772 ಮಂದಿಯನ್ನು ಕೋವಿಡ್ ಪರೀಕ್ಷೆಗೆ ಒಳಪಡಿಸಲಾಗಿದೆ. ಇಲ್ಲಿಯವರೆಗೆ ಒಟ್ಟು 713185 ಮಂದಿಯನ್ನು ಪರೀಕ್ಷಿಸಲಾಗಿದೆ.