ದಾವಣಗೆರೆಯಲ್ಲಿ ಆಯೋಜಿಸಿದ್ದ ರಾಜ್ಯ ಬಿಜೆಪಿಯ ವಿವಿಧ ಪ್ರಕೋಷ್ಠಗಳ ಸಂಚಾಲಕರು ಹಾಗೂ ಸಹ ಸಂಚಾಲಕರ ವಿಶೇಷ ಸಭೆಯಲ್ಲಿ ಪ್ರಕೋಷ್ಠಗಳ ವತಿಯಿಂದ ರಾಜ್ಯ ಬಿಜೆಪಿ ಮೀನುಗಾರರ ಪ್ರಕೋಷ್ಠದ ಸಂಚಾಲಕರಾಗಿ ಇದೀಗ ಬಿಜೆಪಿ ಹಿಂದುಳಿದ ವರ್ಗಗಳ ಮೋರ್ಚಾದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿಯಾಗಿ ನೇಮಕಗೊಂಡ ಯಶ್ಪಾಲ್ ಸುವರ್ಣ ರವರನ್ನು ಸನ್ಮಾನಿಸಿ ಅಭಿನಂದಿಸಲಾಯಿತು.
ಈ ಸಂದರ್ಭದಲ್ಲಿ ದಾವಣಗೆರೆ ಉತ್ತರ ವಿಧಾನಸಭಾ ಕ್ಷೇತ್ರದ ಶಾಸಕ ರವೀಂದ್ರನಾಥ್, ಮಾಯಕೊಂಡ ಶಾಸಕ ಎನ್ ಲಿಂಗಣ್ಣ, ಬಿಜೆಪಿ ಪ್ರಕೋಷ್ಠಗಳ ರಾಜ್ಯ ಸಂಯೋಜಕ ಭಾನುಪ್ರಕಾಶ್, ಸಹ ಸಂಚಾಲಕ ಡಾ ಎ ಎಚ್ ಶಿವಯೋಗಿ ಸ್ವಾಮಿ, ಮುಂತಾದವರು ಉಪಸ್ಥಿತರಿದ್ದರು.