ಉಡುಪಿ: ಜಿಲ್ಲೆಯಲ್ಲಿ ಜುಲಾಯಿ 20 ರಂದು ಉಡುಪಿ ನಗರ ಪ್ರದೇಶದ ಕೊರೋನ ಮುಂಚೂಣಿ ಕಾರ್ಯಕರ್ತರು, ದುರ್ಬಲ ಗುಂಪಿನ ಫಲಾನುಭವಿಗಳು, ಆದ್ಯತಾ ಗುಂಪಿನವರು, ಆರೋಗ್ಯ ಕಾರ್ಯಕರ್ತರು, ಕೇಂದ್ರ ಸರಕಾರ ಗುರುತಿಸಿರುವ ಮುಂಚೂಣಿ ಕಾರ್ಯಕರ್ತರುಗಳಿಗೆ, 45 ವರ್ಷ ಮೇಲ್ಪಟ್ಟ ಸಾರ್ವಜನಿಕರಿಗೆ, ಗರ್ಭಿಣಿಯರಿಗೆ, ಹಾಲುಣಿಸುವ ತಾಯಂದಿರಿಗೆ, ವಿಕಲಚೇತನರಿಗೆ ಮತ್ತು ಅವರ ಆರೈಕೆದಾರರಿಗೆ ಹಾಗೂ ಎಸ್.ಎ.ಎಮ್., ಎಮ್.ಎ.ಎಮ್., ಮಕ್ಕಳ ಆರೈಕೆದಾರರಿಗೆ ಕೋವಿಡ್-19 ಪ್ರಥಮ ಮತ್ತು 2 ನೇ ಡೋಸ್ ಲಸಿಕೆ ಲಭ್ಯವಿರುತ್ತದೆ.
ನಗರದ ಅಜ್ಜರಕಾಡು ಕಿರಿಯ ಮಹಿಳಾ ಆರೋಗ್ಯ ಸಹಾಯಕಿಯರ ತರಬೇತಿ ಕೇಂದ್ರದಲ್ಲಿ ಕೋವಿಶೀಲ್ಡ್ 100 ಡೋಸ್ ಹಾಗೂ ನಗರದ ಸರಕಾರಿ ತಾಯಿ ಮತ್ತು ಮಕ್ಕಳ ಆಸ್ಪತ್ರೆಯಲ್ಲಿ ಜುಲಾಯಿ 25 ರ ಒಳಗೆ ವಿದೇಶ ಪ್ರಯಾಣ ಮಾಡುವವರಲ್ಲಿ ಕೋವಿಶೀಲ್ಡ್ ಮೊದಲ ಡೋಸ್ ಲಸಿಕೆ ಪಡೆದು 28 ದಿನಗಳು ಮೀರಿದವರಿಗೆ 2ನೇ ಡೋಸ್ ಕೋವಿಶೀಲ್ಡ್ 100 ಡೋಸ್ ಲಸಿಕೆ ಲಭ್ಯವಿರುತ್ತದೆ.
ಗ್ರಾಮೀಣ ಪ್ರದೇಶದಲ್ಲಿ ರಾಜ್ಯ ಸರಕಾರ ಗುರುತಿಸಿರುವ ಅನುಬಂಧ-1 ರಲ್ಲಿರುವ ಕೊರೋನ ಮುಂಚೂಣಿ ಕಾರ್ಯಕರ್ತರು, ದುರ್ಬಲ ಗುಂಪಿನ ಫಲಾನುಭವಿಗಳು, ಆರೋಗ್ಯ ಕಾರ್ಯಕರ್ತರು, ಕೇಂದ್ರ ಸರಕಾರ ಗುರುತಿಸಿರುವ ಮುಂಚೂಣಿ ಕಾರ್ಯಕರ್ತರು, 45 ವರ್ಷ ಮೇಲ್ಪಟ್ಟ ಸಾರ್ವಜನಿಕರು, ಗರ್ಭಿಣಿಯರು, ಹಾಲುಣಿಸುವ ತಾಯಂದಿರು, ವಿಕಲಚೇತನರು ಮತ್ತು ಅವರ ಆರೈಕೆದಾರರು ಹಾಗೂ ಎಸ್.ಎ.ಎಮ್., ಎಮ್.ಎ.ಎಮ್., ಮಕ್ಕಳ ಆರೈಕೆದಾರರು ಕೋವಿಡ್-19 ಪ್ರಥಮ ಮತ್ತು 2 ನೇ ಡೋಸ್ ಲಸಿಕೆ ಪಡೆಯಲು ಹತ್ತಿರದ ಸರಕಾರಿ ಆಸ್ಪತ್ರೆ/ಆಶಾ ಕಾರ್ಯಕರ್ತೆಯರನ್ನು ಸಂಪರ್ಕಿಸಿ ಲಸಿಕೆ ಲಭ್ಯತೆಯನ್ನು ಖಚಿತಪಡಿಸಿಕೊಂಡು ಲಸಿಕಾ ಕೇಂದ್ರಕ್ಕೆ ಬಂದು ಲಸಿಕೆ ಪಡೆಯುವಂತೆ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ. ನಾಗಭೂಷಣ ಉಡುಪ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.