Thursday, September 26, 2024
Thursday, September 26, 2024

ಸಚಿವೆ ಶಶಿಕಲಾ ಜೊಲ್ಲೆ ರಾಜೀನಾಮೆಗೆ ಉಡುಪಿ ಜಿಲ್ಲಾ ಕಾಂಗ್ರೆಸ್ ಆಗ್ರಹ

ಸಚಿವೆ ಶಶಿಕಲಾ ಜೊಲ್ಲೆ ರಾಜೀನಾಮೆಗೆ ಉಡುಪಿ ಜಿಲ್ಲಾ ಕಾಂಗ್ರೆಸ್ ಆಗ್ರಹ

Date:

ಉಡುಪಿ: ಗ್ರಾಮೀಣ ಪರಿಸರದ ಬಡ ಮಕ್ಕಳು ಮತ್ತು ಗರ್ಭಿಣಿ ಮಹಿಳೆಯರಲ್ಲಿ ಪೌಷ್ಠಿಕತೆ ಹೆಚ್ಚಿಸುವ ಗುರಿಯೊಂದಿಗೆ ಅಂಗನವಾಡಿ ಕೇಂದ್ರಗಳಿಗೆ ಮಾತೃಪೂರ್ಣ ಯೋಜನೆಯಡಿಯಲ್ಲಿ ರಾಜ್ಯ ಸರಕಾರ ಕೊಡಮಾಡುತ್ತಿದ್ದ ಮೊಟ್ಟೆ ಸರಬರಾಜು ಟೆಂಡರ್ ಪ್ರಕ್ರಿಯೆಯಲ್ಲಿ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಸಚಿವೆ ಶಶಿಕಲಾ ಜೊಲ್ಲೆ ಹಸ್ತಕ್ಷೇಪ ನಡೆಸಲು ಒಪ್ಪಿಕೊಂಡು, ಮಾಸಿಕ ಕೋಟಿ ರೂ. ಲಂಚಕ್ಕೆ ಬೇಡಿಕೆ ಇಟ್ಟಿರುವುದು ಟಿವಿ ಮಾಧ್ಯಮವೊಂದರ ಕುಟುಕು ಕಾರ್ಯಾಚರಣೆಯಲ್ಲಿ ಬಹಿರಂಗ ಗೊಂಡಿದ್ದು, ಆ ನೆಲೆಯಲ್ಲಿ ಅವರು ಕೂಡಲೇ ಸಚಿವ ಸ್ಥಾನಕ್ಕೆ ರಾಜೀನಾಮೆ ಕೊಟ್ಟು ಸೂಕ್ತ ತನಿಕೆಗೆ ಅವಕಾಶ ಮಾಡಿಕೊಡಬೇಕು ಎಂದು ಉಡುಪಿ ಜಿಲ್ಲಾ ಕಾಂಗ್ರೆಸ್ ಆಗ್ರಹಿಸಿದೆ.

ರಕ್ಷಣಾ ಇಲಾಖೆಯ ಟೆಂಡರ್ ಪ್ರಕ್ರಿಯೆಯೊಂದರಲ್ಲಿ ಸಮತಾ ಪಕ್ಷದ ಜಯಾ ಜೆಟ್ಲಿ ಹಸ್ತಕ್ಷೇಪವನ್ನು ಗುರಿಯಾಗಿರಿಸಿ, 2001ರಲ್ಲಿ ಅಂದಿನ ಪ್ರಧಾನಿ ದಿ. ವಾಜಪೇಯಿ ಸರಕಾರದ ಆಡಳಿತಾವಧಿಯಲ್ಲಿ ನಡೆದ ತೆಹಲ್ಕಾ ಕುಟುಕು ಕಾರ್ಯಾಚರಣೆಯನ್ನೇ ಮಾನದಂಡವನ್ನಾಗಿರಿಸಿ, ಈ ಹಗರಣದ ಸೂಕ್ತ ತ‌ನಿಕೆ ಆಗಬೇಕು. ಬಡಮಕ್ಕಳ ಮತ್ತು ಮಹಿಳೆಯರ ಅನ್ನಕ್ಕೆ ಕನ್ನ ಹಾಕುವವರಿಗೆ ಸರಿಯಾದ ಶಿಕ್ಷೆ ಆಗಬೇಕು ಎಂದು ಕಾಂಗ್ರೆಸ್ ಒತ್ತಾಯಿಸಿದೆ.

ಮಾಜಿ ಮುಖ್ಯಮಂತ್ರಿ ಸಿದ್ಧರಾಮಯ್ಯನವರ ಆಡಳಿತದ ಅವಧಿಯಲ್ಲಿ ಜಾರಿಗೆ ಬಂದಿದ್ದ ಈ ಜನಪರ ಯೋಜನೆಯಡಿಯಲ್ಲಿ ಅಂಗನವಾಡಿಗಳ ಮೂಲಕ ಹಾಲಿನೊಂದಿಗೆ ಮೊಟ್ಟೆಯನ್ನು ನೀಡಲಾಗುತ್ತಿತ್ತು. ಅಂದು ವಿರೋಧ ಪಕ್ಷವಾಗಿದ್ದ ಬಿಜೆಪಿ ಧರ್ಮದ ನೆಲೆಗಟ್ಟಿನಲ್ಲಿ ಇದನ್ನು ವಿರೋಧಿಸಿತ್ತು. ಇಂದು ಅದೇ ಪಕ್ಷದ ಸಚಿವೆಯೊಬ್ಬರು ಮೊಟ್ಟೆಯ ವಿಚಾರದಲ್ಲಿ ಭ್ರಷ್ಠಾಚಾರ ನಡೆಸಿದ್ದಾರೆ ಎಂಬ ವಿಚಾರವು ಮಾಧ್ಯಮದಲ್ಲಿ ಬಂದಿರುವುದು ಸರಕಾರದ ಜನಪರ ಚಿಂತನೆಯ ಆಡಳಿತಾತ್ಮಕ ವೈಫಲ್ಯಕ್ಕೆ ಸಾಕ್ಷಿಯಾಗಿದೆ ಎಂದು ಜಿಲ್ಲಾ ಕಾಂಗ್ರೆಸ್ ವಕ್ತಾರ ಬಿಪಿನಚಂದ್ರ ಪಾಲ್ ನಕ್ರೆ ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

2023-24ರಲ್ಲಿ ಅಂದಾಜು 3,322 ಲಕ್ಷ ಮೆಟ್ರಿಕ್ ಟನ್ ಆಹಾರ ಧಾನ್ಯ ಉತ್ಪಾದನೆ

ನವದೆಹಲಿ, ಸೆ.25: 2023-24ರ ಅವಧಿಯಲ್ಲಿ ದೇಶದ ಒಟ್ಟು ಆಹಾರ ಧಾನ್ಯ ಉತ್ಪಾದನೆಯು...

ಮುಡಾ ಪ್ರಕರಣ: ಸಿಎಂ ಸಿದ್ದರಾಮಯ್ಯ ವಿರುದ್ಧ ತನಿಖೆಗೆ ವಿಶೇಷ ನ್ಯಾಯಾಲಯ ಆದೇಶ

ಬೆಂಗಳೂರು, ಸೆ.25: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ ಮುಡಾ ನಿವೇಶನ ಹಂಚಿಕೆ ಪ್ರಕರಣಕ್ಕೆ...

ಜಮ್ಮು ಕಾಶ್ಮೀರ ವಿಧಾನಸಭೆ ಚುನಾವಣೆ- 2ನೇ ಹಂತದ ಮತದಾನ ಮುಕ್ತಾಯ

ನವದೆಹಲಿ, ಸೆ.25: ಜಮ್ಮು ಮತ್ತು ಕಾಶ್ಮೀರದ, ಆರು ಜಿಲ್ಲೆಗಳ 26 ವಿಧಾನಸಭಾ...

ವಾರದಲ್ಲಿ ನಾಲ್ಕು ದಿನಗಳ ಕಾಲ ಪೌಷ್ಠಿಕ ಆಹಾರವಾಗಿ ಮೊಟ್ಟೆ ವಿತರಣೆ

ಉಡುಪಿ, ಸೆ.25: ಕೇಂದ್ರ ಪುರಸ್ಕೃತ ಮಧ್ಯಾಹ್ನ ಬಿಸಿಯೂಟ ಯೋಜನೆಯಲ್ಲಿ ಕರ್ನಾಟಕ ರಾಜ್ಯ...
error: Content is protected !!