ಉಡುಪಿ: ಉಡುಪಿ ಜಿಲ್ಲೆಯಲ್ಲಿ 3 ಮಂದಿಗೆ ಸೋಂಕು ದೃಢಪಟ್ಟಿದೆ. ಉಡುಪಿ ತಾಲೂಕು-3, ಕುಂದಾಪುರ-0, ಕಾರ್ಕಳ-0 ಮಂದಿ ಸೋಂಕಿಗೆ ಒಳಗಾಗಿದ್ದಾರೆ. 101 ಮಂದಿ ಗುಣಮುಖರಾಗಿದ್ದು ಇಲ್ಲಿಯವರೆಗೆ 67619 ಮಂದಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಜಿಲ್ಲೆಯಲ್ಲಿ 749 ಸಕ್ರಿಯ ಪ್ರಕರಣಗಳಿವೆ.
ಸೋಂಕಿನಿಂದ ಯಾವುದೇ ಸಾವು ಸಂಭವಿಸಿಲ್ಲ. ಇಲ್ಲಿಯವರೆಗೆ 409 ಮಂದಿ ಕೊರೊನಾ ಸೋಂಕಿನಿಂದ ಮೃತಪಟ್ಟಿದ್ದಾರೆ. ಜುಲಾಯಿ 23 ರಂದು 3393 ಮಂದಿಯನ್ನು ಕೋವಿಡ್ ಪರೀಕ್ಷೆಗೆ ಒಳಪಡಿಸಲಾಗಿದೆ. ಇಲ್ಲಿಯವರೆಗೆ ಒಟ್ಟು 758706 ಮಂದಿಯನ್ನು ಪರೀಕ್ಷಿಸಲಾಗಿದೆ.