Friday, September 27, 2024
Friday, September 27, 2024

ಉಡುಪಿ: ಅಪ್ರಾಪ್ತ ಬಾಲಕನ ರಕ್ಷಣೆ

ಉಡುಪಿ: ಅಪ್ರಾಪ್ತ ಬಾಲಕನ ರಕ್ಷಣೆ

Date:

ಉಡುಪಿ: ಅಸಹಾಯಕ ಸ್ಥಿತಿಯಲ್ಲಿ ದಿನ ಕಳೆಯುತ್ತಿದ್ದ ಕೊಡಗು ಜಿಲ್ಲೆಯ ಅಪ್ರಾಪ್ತ ವಯಸ್ಸಿನ ಬಾಲಕನನ್ನು ಮಕ್ಕಳ ರಕ್ಷಣಾ ಘಟಕ ಹಾಗೂ ಉಡುಪಿ ಜಿಲ್ಲಾ ನಾಗರಿಕ ಸಮಿತಿಯ ಕಾರ್ಯಕರ್ತರು ರಕ್ಷಿಸಿರುವ ಘಟನೆಯು ಉಡುಪಿಯಲ್ಲಿ ನಡೆದಿದೆ. ಕಾರ್ಯಚರಣೆಯಲ್ಲಿ ಮಕ್ಕಳ ರಕ್ಷಣಾ ಘಟಕದ ಪರಿವೀಕ್ಷಣಾಧಿಕಾರಿ ಪ್ರಭಾಕರ್ ಆಚಾರ್, ನಾಗರಿಕ ಸಮಿತಿಯ ಕಾರ್ಯಕರ್ತರಾದ ನಿತ್ಯಾನಂದ ಒಳಕಾಡು, ತಾರಾನಾಥ್ ಮೇಸ್ತ ಶಿರೂರು, ಕೆ. ಬಾಲಗಂಗಾಧರ ರಾವ್ ಅವರು ಪಾಲ್ಗೊಂಡಿದ್ದರು.

ಬಾಲಕನು ಅತ್ತೂರು ಹಾರಂಗಿ ಇಲ್ಲಿಯ ಜ್ಞಾನಗಂಗಾ ರೆಸಿಡೆನ್ಸಿಯಲ್ ವಿದ್ಯಾ ಸಂಸ್ಥೆಯ 10 ನೇ ತರಗತಿ ವಿದ್ಯಾರ್ಥಿ ಎಂದು ತಿಳಿದುಬಂದಿದೆ. ಮನನೊಂದಿರುವ ಬಾಲಕನು ಬಟ್ಟೆ, ಬರೆ, ಪಠ್ಯಪುಸ್ತಕ, ಶಾಲೆಯ ದಾಖಲೆ ಪತ್ರಗಳೊಂದಿಗೆ ಮನೆ ಬಿಟ್ಟು ಬಂದಿದ್ದು, ಉಡುಪಿ ನಗರದಲ್ಲಿ ಉದ್ಯೋಗ ಅರಸುತ್ತಿರುವಾಗ, ನಾಗರಿಕ ಸಮಿತಿಯ ಕಾರ್ಯಕರ್ತರಿಗೆ, ಬಾಲಕ ಅಸಹಾಯಕ ಸ್ಥಿತಿಯಲ್ಲಿರುವ ವಿಷಯವು ತಿಳಿದುಬಂದಿದೆ.

ಮಕ್ಕಳ ರಕ್ಷಣಾ ಘಟಕದ ಪರಿವೀಕ್ಷಣಾಧಿಕಾರಿ ಪ್ರಭಾಕರ್ ಆಚಾರ್ ಅವರು ಮನೊಂದಿರುವ ಬಾಲಕನಿಗೆ ಸಾಂತ್ವನ ಹೇಳಿ ಆಪ್ತಸಮಾಲೋಚನೆ ನಡೆಸಿದ್ದಾರೆ. ನಂತರ ಮಕ್ಕಳ ಕಲ್ಯಾಣ ಸಮಿತಿ ಅಧ್ಯಕ್ಷರ ಮಾರ್ಗದರ್ಶನದಂತೆ, ಬಾಲಕನಿಗೆ ಶಂಕರಪುರದ ವಿಶ್ವಾಸದ ಮನೆ ಪುರ್ನವಸತಿ ಕೇಂದ್ರದಲ್ಲಿ ತಾತ್ಕಾಲಿಕ ನೆಲೆ ಕಲ್ಪಿಸಲಾಗಿದೆ.

ಘಟನೆಯ ಕುರಿತು ಪರಿವೀಕ್ಷಣಾಧಿಕಾರಿ ಅವರು ನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿದ್ದಾರೆ. ಬಾಲಕನ ಸಂಬಂಧಿಕರು ತುರ್ತಾಗಿ ಉಡುಪಿ ಮಕ್ಕಳ ರಕ್ಷಣಾ ಘಟಕ ಅಥವ ಉಡುಪಿ ನಗರ ಪೊಲೀಸ್ ಠಾಣೆಯ ನಾಗರಿಕ ಸಹಾಯ ಕೇಂದ್ರವನ್ನು ಸಂಪರ್ಕಿಸಲು ಸೂಚಿಸಲಾಗಿದೆ.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಜಿಲ್ಲಾಮಟ್ಟದ ಟೆನ್ನಿಕಾಯ್ಟ್: ಸರಸ್ವತಿ ವಿದ್ಯಾಲಯ ಪ್ರಥಮ

ಗಂಗೊಳ್ಳಿ, ಸೆ.26: ಶಾಲಾ ಶಿಕ್ಷಣ ಇಲಾಖೆ ಪದವಿಪೂರ್ವ ಮತ್ತು ಸರಸ್ವತಿ ವಿದ್ಯಾಲಯ...

ವಿಶ್ವ ಪ್ರವಾಸೋದ್ಯಮ ದಿನಾಚರಣೆ ಅಂಗವಾಗಿ ಬೀಚ್ ಸ್ವಚ್ಛತಾ ಕಾರ್ಯಕ್ರಮ

ಉಡುಪಿ, ಸೆ.26: ಗ್ರಾಮೀಣ ಮತ್ತು ನಗರ ಪ್ರದೇಶಗಳಲ್ಲಿನ ಸಾರ್ವಜನಿಕರಲ್ಲಿ ನೈರ್ಮಲ್ಯ, ಶುಚಿತ್ವ...

ಹೊಸ ಕೈಗಾರಿಕಾ ಪ್ರದೇಶ ನಿರ್ಮಾಣಕ್ಕೆ ಭೂಸ್ವಾಧೀನ ಪ್ರಕ್ರಿಯೆಯನ್ನು ಶೀಘ್ರವಾಗಿ ಪೂರ್ಣಗೊಳಿಸಿ: ಜಿಲ್ಲಾಧಿಕಾರಿ

ಉಡುಪಿ, ಸೆ.26: ಜಿಲ್ಲೆಯಲ್ಲಿ ಹೊಸ ಕೈಗಾರಿಕಾ ಪ್ರದೇಶದ ನಿರ್ಮಾಣಕ್ಕೆ ಅಗತ್ಯವಿರುವ ಭೂಮಿ...
error: Content is protected !!