ಉಡುಪಿ: ಉಡುಪಿ ಜಿಲ್ಲೆಯಲ್ಲಿ 100 ಮಂದಿಗೆ ಸೋಂಕು ದೃಢಪಟ್ಟಿದೆ. ಉಡುಪಿ ತಾಲೂಕು-38, ಕುಂದಾಪುರ-28, ಕಾರ್ಕಳ-33, ಹೊರ ಜಿಲ್ಲೆಯ ಓರ್ವರು ಸೋಂಕಿಗೆ ಒಳಗಾಗಿದ್ದಾರೆ. 98 ಮಂದಿ ಗುಣಮುಖರಾಗಿದ್ದು ಇಲ್ಲಿಯವರೆಗೆ 67717 ಮಂದಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಜಿಲ್ಲೆಯಲ್ಲಿ 751 ಸಕ್ರಿಯ ಪ್ರಕರಣಗಳಿವೆ.
ಸೋಂಕಿನಿಂದ ಯಾವುದೇ ಸಾವು ಸಂಭವಿಸಿಲ್ಲ. ಇಲ್ಲಿಯವರೆಗೆ 409 ಮಂದಿ ಕೊರೊನಾ ಸೋಂಕಿನಿಂದ ಮೃತಪಟ್ಟಿದ್ದಾರೆ. ಜುಲಾಯಿ 24 ರಂದು 3649 ಮಂದಿಯನ್ನು ಕೋವಿಡ್ ಪರೀಕ್ಷೆಗೆ ಒಳಪಡಿಸಲಾಗಿದೆ. ಇಲ್ಲಿಯವರೆಗೆ ಒಟ್ಟು 762355 ಮಂದಿಯನ್ನು ಪರೀಕ್ಷಿಸಲಾಗಿದೆ.