ಕಡೆಕಾರ್: ಹಡಿಲು ಭೂಮಿ ಕೃಷಿ ಆಂದೋಲನದಡಿ ಕೇದಾರೋತ್ಥಾನ ಟ್ರಸ್ಟ್ ಮೂಲಕ ಕಡೆಕಾರ್ ಗ್ರಾಮ ಪಂಚಾಯತ್ ವ್ಯಾಪ್ತಿಯ ಕುತ್ಪಾಡಿ ಗ್ರಾಮದ ಬೊಬ್ಬರ್ಯಜಿಡ್ಡ ಭಾಗದಲ್ಲಿ ಕೃಷಿ ನಾಟಿ ಮಾಡಿದ ಗದ್ದೆಯಲ್ಲಿ ಸೋಮವಾರ ತೆಂಕನಿಡಿಯೂರು ಸರಕಾರಿ ಪ್ರಥಮ ದರ್ಜೆ ಕಾಲೇಜು ಮತ್ತು ಸ್ನಾತಕೋತ್ತರ ಅಧ್ಯಯನ ಕೇಂದ್ರ ಇಲ್ಲಿಯ ವಿದ್ಯಾರ್ಥಿಗಳು ಮತ್ತು ಪ್ರಾಧ್ಯಾಪಕರು ಚಿಗುರೊಡೆದ ಕಳೆಗಳನ್ನು ತೆಗೆಯುವ ಕಾರ್ಯದಲ್ಲಿ ಭಾಗವಹಿಸಿದರು.
ಒಟ್ಟು 16 ಪ್ರಾಧ್ಯಾಪಕರು ಹಾಗೂ 60 ವಿದ್ಯಾರ್ಥಿಗಳು ಕಳೆ ಕೀಳುವ ಕಾರ್ಯದಲ್ಲಿ ಭಾಗವಹಿಸಿದರು. ಸ್ಥಳಕ್ಕೆ ಭೇಟಿ ನೀಡಿದ ಶಾಸಕ ಕೆ. ರಘುಪತಿ ಭಟ್ ಮೆಚ್ಚುಗೆ ವ್ಯಕ್ತಪಡಿಸಿದರು.
ಈ ಸಂದರ್ಭದಲ್ಲಿ ತೆಂಕನಿಡಿಯೂರು ಕಾಲೇಜಿನ ಪ್ರಾಂಶುಪಾಲ ಡಾ. ಗಣನಾಥ್ ಶೆಟ್ಟಿ ಎಕ್ಕಾರ್, ಜಿ.ಪಂ. ಮಾಜಿ ಅಧ್ಯಕ್ಷ ದಿನಕರ ಬಾಬು, ಡಾ. ರಾಮಚಂದ್ರ ಪಾಟ್ಕರ್, ಡಾ. ದುಗ್ಗಪ್ಪ ಕಜೆಕಾರ್, ರಾಘವ ನಾಯ್ಕ್, ಮಂಜುನಾಥ್, ಉಮೇಶ್ ಪೈ, ರವಿರಾಜ್, ಉದಯ ಶೆಟ್ಟಿ, ಕೇದಾರೋತ್ಥಾನ ಟ್ರಸ್ಟ್ ನ ಪ್ರಧಾನ ಕಾರ್ಯದರ್ಶಿ ಮುರಳಿ ಕಡೆಕಾರ್, ಪ್ರದೀಪ್ ಚಂದ್ರ ಕುತ್ಪಾಡಿ, ಉಮೇಶ್ ಮುಂತಾದವರು ಉಪಸ್ಥಿತರಿದ್ದರು.