ಉಡುಪಿ: ಉಡುಪಿ ಜಿಲ್ಲೆಯಲ್ಲಿ 109 ಮಂದಿಗೆ ಸೋಂಕು ದೃಢಪಟ್ಟಿದೆ. ಉಡುಪಿ ತಾಲೂಕು-45, ಕುಂದಾಪುರ-20, ಕಾರ್ಕಳ-44 ಮಂದಿ ಸೋಂಕಿಗೆ ಒಳಗಾಗಿದ್ದಾರೆ. 86 ಮಂದಿ ಗುಣಮುಖರಾಗಿದ್ದು ಇಲ್ಲಿಯವರೆಗೆ 67992 ಮಂದಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಜಿಲ್ಲೆಯಲ್ಲಿ 893 ಸಕ್ರಿಯ ಪ್ರಕರಣಗಳಿವೆ.
ಕಾರ್ಕಳ ತಾಲೂಕಿನ 34 ವರ್ಷದ ವ್ಯಕ್ತಿ ಮತ್ತು ಉಡುಪಿ ತಾಲೂಕಿನ 76ರ ಪ್ರಾಯದ ಓರ್ವರು ಸೋಂಕಿನಿಂದ ಸಾವನ್ನಪ್ಪಿದ್ದಾರೆ. ಇಲ್ಲಿಯವರೆಗೆ 413 ಮಂದಿ ಕೊರೊನಾ ಸೋಂಕಿನಿಂದ ಮೃತಪಟ್ಟಿದ್ದಾರೆ. ಜುಲೈ 27 ರಂದು 4816 ಮಂದಿಯನ್ನು ಕೋವಿಡ್ ಪರೀಕ್ಷೆಗೆ ಒಳಪಡಿಸಲಾಗಿದೆ. ಇಲ್ಲಿಯವರೆಗೆ ಒಟ್ಟು 772007 ಮಂದಿಯನ್ನು ಪರೀಕ್ಷಿಸಲಾಗಿದೆ.