ಉಡುಪಿ: ಉಡುಪಿ ಜಿಲ್ಲೆಯಲ್ಲಿ 174 ಮಂದಿಗೆ ಸೋಂಕು ದೃಢಪಟ್ಟಿದೆ. ಉಡುಪಿ ತಾಲೂಕು-93, ಕುಂದಾಪುರ-42, ಕಾರ್ಕಳ-39 ಮಂದಿ ಸೋಂಕಿಗೆ ಒಳಗಾಗಿದ್ದಾರೆ. 66 ಮಂದಿ ಗುಣಮುಖರಾಗಿದ್ದು ಇಲ್ಲಿಯವರೆಗೆ 68058 ಮಂದಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಜಿಲ್ಲೆಯಲ್ಲಿ 1000 ಸಕ್ರಿಯ ಪ್ರಕರಣಗಳಿವೆ.
ಉಡುಪಿ ತಾಲೂಕಿನ 48 ವರ್ಷದ ವ್ಯಕ್ತಿ ಸೋಂಕಿನಿಂದ ಸಾವನ್ನಪ್ಪಿದ್ದಾರೆ. ಇಲ್ಲಿಯವರೆಗೆ 414 ಮಂದಿ ಕೊರೊನಾ ಸೋಂಕಿನಿಂದ ಮೃತಪಟ್ಟಿದ್ದಾರೆ. ಜುಲೈ 28 ರಂದು 3601 ಮಂದಿಯನ್ನು ಕೋವಿಡ್ ಪರೀಕ್ಷೆಗೆ ಒಳಪಡಿಸಲಾಗಿದೆ. ಇಲ್ಲಿಯವರೆಗೆ ಒಟ್ಟು 775608 ಮಂದಿಯನ್ನು ಪರೀಕ್ಷಿಸಲಾಗಿದೆ.