ಉಡುಪಿ: ಉಡುಪಿ ಜಿಲ್ಲೆಯಲ್ಲಿ 156 ಮಂದಿಗೆ ಸೋಂಕು ದೃಢಪಟ್ಟಿದೆ. ಉಡುಪಿ ತಾಲೂಕು-73, ಕುಂದಾಪುರ-36, ಕಾರ್ಕಳ-40, ಹೊರ ಜಿಲ್ಲೆಯ 7 ಮಂದಿ ಸೋಂಕಿಗೆ ಒಳಗಾಗಿದ್ದಾರೆ. 109 ಮಂದಿ ಗುಣಮುಖರಾಗಿದ್ದು ಇಲ್ಲಿಯವರೆಗೆ 68167 ಮಂದಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಜಿಲ್ಲೆಯಲ್ಲಿ 1046 ಸಕ್ರಿಯ ಪ್ರಕರಣಗಳಿವೆ.
ಕುಂದಾಪುರ ತಾಲೂಕಿನ 24 ವರ್ಷದ ವ್ಯಕ್ತಿ ಸೋಂಕಿನಿಂದ ಸಾವನ್ನಪ್ಪಿದ್ದಾರೆ. ಇಲ್ಲಿಯವರೆಗೆ 415 ಮಂದಿ ಕೊರೊನಾ ಸೋಂಕಿನಿಂದ ಮೃತಪಟ್ಟಿದ್ದಾರೆ. ಜುಲೈ 29 ರಂದು 3270 ಮಂದಿಯನ್ನು ಕೋವಿಡ್ ಪರೀಕ್ಷೆಗೆ ಒಳಪಡಿಸಲಾಗಿದೆ. ಇಲ್ಲಿಯವರೆಗೆ ಒಟ್ಟು 778878 ಮಂದಿಯನ್ನು ಪರೀಕ್ಷಿಸಲಾಗಿದೆ.