ಬ್ರಹ್ಮಾವರ: ಸಮಾಜವನ್ನು ಸರಿದಾರಿಗೆ ಕರೆದೊಯ್ಯುವ ಉದ್ದೇಶವನ್ನಿಟ್ಟುಕೊಂಡು ಅಕ್ಷರ ಕೃಷಿಯನ್ನು ನಡೆಸುವ ಪತ್ರಕರ್ತರು, ಭೂಮಿಯನ್ನು ಹಸಿರಾಗಿಸುವ ಮಹತ್ಕಾರ್ಯದಲ್ಲಿ ಕ್ರಿಯಾಶೀಲರಾಗಿ ಭಾಗವಹಿಸಿ ಗ್ರಾಮಸ್ಥರ ಮೆಚ್ಚುಗೆಗೆ ಪಾತ್ರರಾದರು.
ಶಾಸಕ ಕೆ. ರಘುಪತಿ ಭಟ್ ನೇತೃತ್ವದ ಕೇದಾರೋತ್ಥಾನ ಟ್ರಸ್ಟ್ ಹಡಿಲು ಭೂಮಿ ಕೃಷಿ ಅಂದೋಲನದಡಿ ಹಾರಾಡಿ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ 10 ಎಕರೆ ಹಡಿಲು ಭೂಮಿಯನ್ನು ಸಾವಯವ ಕೃಷಿ ಮಾಡಲಾಗುತ್ತಿದ್ದು, ಹಾರಾಡಿ ಗ್ರಾಮದ ಹೊನ್ನಾಳ ಕಂಬಳಗದ್ದೆ ಮನೆ ಬಳಿಯ ಹಡಿಲು ಭೂಮಿ ಕೃಷಿ ನಾಟಿಯಲ್ಲಿ ಪತ್ರಕರ್ತರು ಪಾಲ್ಗೊಂಡರು.
ಶಾಸಕ ಕೆ. ರಘುಪತಿ ಭಟ್, ಪುಣೆ ಬಂಟರ ಸಂಘ ಅಧ್ಯಕ್ಷ ಸಂತೋಷ್ ಶೆಟ್ಟಿ, ಜಿ.ಎಂ ಎಜುಕೇಶನ್ ಟ್ರಸ್ಟ್ ಅಧ್ಯಕ್ಷ ಹಾಗೂ ವ್ಯವಸ್ಥಾಪಕ ಟ್ರಸ್ಟಿ ಪ್ರಕಾಶ್ ಚಂದ್ರ ಶೆಟ್ಟಿ, ಉಡುಪಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ರಾಜೇಶ್ ಶೆಟ್ಟಿ ಅಲೆವೂರು, ಕೃಷಿಕ ಮತ್ತು ವಿಜಯ ಕರ್ನಾಟಕ ಪತ್ರಿಕಾ ವರದಿಗಾರ ಅಜಿತ್ ಆರಾಡಿ, ಹಿರಿಯ ಪತ್ರಕರ್ತರಾದ ಆಸ್ಟ್ರೋ ಮೋಹನ್, ಜನಾರ್ದನ್ ಕೊಡವೂರು ಭೂಮಿಗೆ ಹಾಲನ್ನು ಅರ್ಪಿಸಿ ನೇಜಿ ನೀಡುವ ಮೂಲಕ ಯಂತ್ರ ನಾಟಿ ಕಾರ್ಯಕ್ಕೆ ಚಾಲನೆ ನೀಡಿ ನೇಜಿ ನೆಟ್ಟರು.
ಉಡುಪಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಕಾರ್ಯದರ್ಶಿ ನಝೀರ್ ಪೊಲ್ಯ ನೇತೃತ್ವದಲ್ಲಿ ಸುಮಾರು 30ಕ್ಕೂ ಅಧಿಕ ಮಂದಿ ಪತ್ರಕರ್ತರು ನೇಜಿ ನೆಟ್ಟರು.
ಹಾರಾಡಿ ಗ್ರಾಮ ಪಂಚಾಯತ್ ಅಧ್ಯಕ್ಷ ಪ್ರಭಾಕರ್ ಶೆಟ್ಟಿ, ಉಪಾಧ್ಯಕ್ಷೆ ಜಯಂತಿ ಪೂಜಾರಿ, ಮೋಹನ್ ಉಡುಪ ಹಂದಾಡಿ, ಶಶಿಧರ ಮಾಸ್ತಿಬೈಲು, ಉಮೇಶ್ ಮಾರ್ಪಳ್ಳಿ, ದೀಪಕ್ ಜೈನ್, ಮೈಕಲ್ ರೊಡ್ರಿಗಸ್, ಅಂಕಿತ್, ನವ್ಯಾಜ್ಯೋತಿ, ತೃಪ್ತಿ ಕುಮ್ರಗೋಡು, ಹರ್ಷಿಣಿ, ಹರೀಶ್ ಪಾಲೆಚಾರ್, ಎ. ಬಾಲಕೃಷ್ಣ ಶೆಟ್ಟಿ, ಅಬು ಸಾಹೇಬ್, ಕೇದಾರೋತ್ಥಾನ ಟ್ರಸ್ಟ್ ನ ಪ್ರಧಾನ ಕಾರ್ಯದರ್ಶಿ ಮುರಳಿ ಕಡೆಕಾರ್, ಕೋಶಾಧಿಕಾರಿ ರಾಘವೇಂದ್ರ ಕಿಣಿ, ಸದಸ್ಯರಾದ ಬಿರ್ತಿ ರಾಜೇಶ್ ಶೆಟ್ಟಿ, ಪ್ರತಾಪ್ ಹೆಗ್ಡೆ ಮಾರಾಳಿ, ಕೃಷಿ ಮತ್ತು ತೋಟಗಾರಿಕೆ ವಿಶ್ವವಿದ್ಯಾಲಯ ಶಿವಮೊಗ್ಗ ಮತ್ತು ವಲಯ ಕೃಷಿ ಮತ್ತು ತೋಟಗಾರಿಕೆ ಸಂಶೋಧನಾ ಕೇಂದ್ರ ಬ್ರಹ್ಮಾವರದ ಹಿರಿಯ ಕ್ಷೇತ್ರ ಅಧಿಕಾರಿ ಡಾ. ಶಂಕರ್ ಮುಂತಾದವರು ಉಪಸ್ಥಿತರಿದ್ದರು.