ಉಡುಪಿ: ಜಿಲ್ಲೆಯ ಎಲ್ಲಾ ಪಡಿತರ ಚೀಟಿದಾರರು ಈವರೆಗೆ ಇ-ಕೆವೈಸಿ ಆಗದೇ ಇರುವ ಪಡಿತರ ಚೀಟಿಯಲ್ಲಿನ ಸದಸ್ಯರು ತಮ್ಮ ವ್ಯಾಪ್ತಿಯ ನ್ಯಾಯಬೆಲೆ ಅಂಗಡಿಗಳಲ್ಲಿ ತಂತ್ರಾಂಶದಲ್ಲಿ ಬಯೋ ದೃಡೀಕರಣ ನೀಡಿ ಇ-ಕೆವೈಸಿ ಮಾಡಲು ಅವಕಾಶವನ್ನು ಆಗಸ್ಟ್ 10 ಒಳಗೆ ಕಲ್ಪಿಸಲಾಗಿದೆ.
ಈವರೆಗೆ ಇ-ಕೆವೈಸಿ ಆಗದೇ ಇರುವ ಪಡಿತರ ಚೀಟಿ ಸದಸ್ಯರು ತಮ್ಮ ವ್ಯಾಪ್ತಿಯ ನ್ಯಾಯಬೆಲೆ ಅಂಗಡಿಗಳಿಗೆ ಭೇಟಿ ನೀಡಿ ತಮ್ಮ ಬೆರಳಚ್ಚು ನೊಂದಾಯಿಸಿಕೊಳ್ಳಬಹುದು. ಇ-ಕೆವೈಸಿ ನೊಂದಾವಣೆ ಮಾಡಿಕೊಳ್ಳದೇ ಇರುವ ಪಡಿತರ ಚೀಟಿದಾರರ ಆಹಾರ ಧಾನ್ಯ ಹಂಚಿಕೆಯನ್ನು ಸ್ಥಗಿತಗೊಳಿಸಲು ಕ್ರಮ ವಹಿಸಲಾಗುವುದು.
ನೊಂದಾವಣೆ ಮಾಡಿಸಿದ ನಂತರ ಪಡಿತರ ವಿತರಿಸಲು ಕ್ರಮ ವಹಿಸಲಾಗುವುದೆಂದು ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕ ವ್ಯವಹಾರಗಳ ಇಲಾಖೆಯ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.