ಕಾವೂರು: ಕರ್ನಾಟಕ ಸರಕಾರದ ನೂತನ ಸಚಿವರಾಗಿ ಆಯ್ಕೆಯಾಗಿರುವ ವಿ. ಸುನೀಲ್ ಕುಮಾರ್ ಅವರನ್ನು ಕಾವೂರು ಜಂಕ್ಷನ್ ನಲ್ಲಿ ಶಾಸಕ ಡಾ. ವೈ. ಭರತ್ ಶೆಟ್ಟಿಯವರ ನೇತೃತ್ವದಲ್ಲಿ ಬಿಜೆಪಿ ಮಂಗಳೂರು ಉತ್ತರ ಮಂಡಲ ವತಿಯಿಂದ ಅದ್ದೂರಿಯಾಗಿ ಸ್ವಾಗತಿಸಲಾಯಿತು.
ಶಾಸಕರಾದ ಹರೀಶ್ ಪೂಂಜಾ, ಮಂಡಲ ಅಧ್ಯಕ್ಷರಾದ ತಿಲಕ್ ರಾಜ್ ಕೃಷ್ಣಾಪುರ ಮುಂತಾದವರು ಉಪಸ್ಥಿತರಿದ್ದರು.