ಉಡುಪಿ: ಕರ್ನಾಟಕ ಸರ್ಕಾರದ ಸಂಪುಟ ದರ್ಜೆ ಸಚಿವ ಕೋಟ ಶ್ರೀನಿವಾಸ ಪೂಜಾರಿ ಅವರು ಆಗಸ್ಟ್ 7 ರಂದು ಜಿಲ್ಲೆಯಲ್ಲಿ ಪ್ರವಾಸ ಕೈಗೊಳ್ಳಲಿದ್ದಾರೆ. ಅಂದು ಬೆಳಗ್ಗೆ 7 ರಿಂದ 9 ರ ವರೆಗೆ ಕೋಟದ ತಮ್ಮ ಗೃಹ ಕಛೇರಿಯಲ್ಲಿ ಸಾರ್ವಜನಿಕರ ಭೇಟಿ ಹಾಗೂ ಅಹವಾಲುಗಳನ್ನು ಸ್ವೀಕರಿಸಲಿದ್ದಾರೆ. ನಂತರ ಮಂಗಳೂರಿಗೆ ಪ್ರಯಾಣ ಬೆಳೆಸಲಿದ್ದಾರೆ.
ಸಚಿವ ವಿ.ಸುನೀಲ್ ಕುಮಾರ್ ಸಾರ್ವಜನಿಕ ಅಹವಾಲು ಸ್ವೀಕಾರ: ಆಗಸ್ಟ್ 7ರ ಶನಿವಾರ ಬೆಳಿಗ್ಗೆ 10.00 ಗಂಟೆಗೆ ಸಚಿವ ವಿ. ಸುನೀಲ್ ಕುಮಾರ್ ರವರು ಉಡುಪಿ ಬಿಜೆಪಿ ಜಿಲ್ಲಾ ಕಛೇರಿಯಲ್ಲಿ ಸಾರ್ವಜನಿಕ ಅಹವಾಲು ಸ್ವೀಕರಿಸಲಿದ್ದಾರೆ.