ಉಡುಪಿ: ಶ್ರೀಕೃಷ್ಣ ಮಠಕ್ಕೆ ಕರ್ನಾಟಕ ಸರಕಾರದ ಸಚಿವ ಸುನಿಲ್ ಕುಮಾರ್ ಕುಟುಂಬ ಸಮೇತ ಶುಕ್ರವಾರ ಭೇಟಿ ನೀಡಿ ದೇವರ ದರ್ಶನ ಪಡೆದು ಪರ್ಯಾಯ ಅದಮಾರು ಶ್ರೀ ಈಶಪ್ರಿಯ ತೀರ್ಥ ಶ್ರೀಪಾದರಿಂದ ಅನುಗ್ರಹ ಮಂತ್ರಾಕ್ಷತೆ ಪಡೆದರು.
ಶಾಸಕ ಕೆ. ರಘುಪತಿ ಭಟ್, ಬಿ.ಜೆ.ಪಿ. ಜಿಲ್ಲಾಧ್ಯಕ್ಷ ಸುರೇಶ ನಾಯಕ್ ಕುಯಿಲಾಡಿ, ಕರಾವಳಿ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಮಟ್ಟಾರ್ ರತ್ನಾಕರ ಹೆಗ್ಡೆ, ಬಿಜೆಪಿ ಮಂಗಳೂರು ಪ್ರಭಾರಿ ಕೆ. ಉದಯಕುಮಾರ್ ಶೆಟ್ಟಿ, ಮಠದ ವ್ಯವಸ್ಥಾಪಕ ಗೋವಿಂದರಾಜ್, ಪೆರ್ಣಂಕಿಲ ಶ್ರೀಶ ನಾಯಕ್, ಶ್ರೀಕೃಷ್ಣ ಸೇವಾ ಬಳಗದ ರಾಮಚಂದ್ರ ರಾವ್, ಪ್ರದೀಪ್ ರಾವ್ ಮುಂತಾದವರು ಉಪಸ್ಥಿತರಿದ್ದರು.