ತೆಂಕನಿಡಿಯೂರು: ಹಡಿಲು ಭೂಮಿ ಕೃಷಿ ಅಂದೋಲನದಡಿ ಕೇದಾರೋತ್ಥಾನ ಟ್ರಸ್ಟ್ ಮೂಲಕ ಹಡಿಲು ಭೂಮಿ ಕೃಷಿ ಮಾಡಲಾಗಿದ್ದು, ನಾಟಿ ಮಾಡಿದ ಗದ್ದೆಗಳಲ್ಲಿ ಪೈರಿನ ನಡುವೆ ಬೆಳೆದ ಕಳೆಗಳನ್ನು ತೆಗೆಯುವ ಅಭಿಯಾನ ತೆಂಕನಿಡಿಯೂರು ಗ್ರಾಮದಲ್ಲಿ ಭಾನುವಾರ ನಡೆಯಿತು.
ತೆಂಕನಿಡಿಯೂರು ಕಾಲೇಜಿನ 100 ವಿದ್ಯಾರ್ಥಿಗಳು, ತೆಂಕನಿಡಿಯೂರು ಸ್ಪೋರ್ಟ್ಸ್ ಕ್ಲಬ್ ಸದಸ್ಯರು ಹಾಗೂ ಸ್ಥಳೀಯರು ಭಾಗವಹಿಸಿದರು. ಶಾಸಕ ಕೆ. ರಘುಪತಿ ಭಟ್ ಸ್ಥಳಕ್ಕೆ ಭೇಟಿ ನೀಡಿ ವಿದ್ಯಾರ್ಥಿಗಳ ಕಾರ್ಯಕ್ಕೆ ಮೆಚ್ಚುಗೆ ವ್ಯಕ್ತಪಡಿಸಿದರು.
ತೆಂಕನಿಡಿಯೂರು ಗ್ರಾಮ ಪಂಚಾಯತ್ ಅಧ್ಯಕ್ಷೆ ಗಾಯತ್ರಿ, ಉಪಾಧ್ಯಕ್ಷ ಅರುಣ್ ಜತ್ತನ್, ತಾಲೂಕು ಪಂಚಾಯತ್ ಮಾಜಿ ಉಪಾಧ್ಯಕ್ಷ ಶರತ್ ಕುಮಾರ್ ಬೈಲಕೆರೆ, ತೆಂಕನಿಡಿಯೂರು ಕಾಲೇಜಿನ ಪ್ರಾಂಶುಪಾಲ ಡಾ. ಗಣನಾಥ ಶೆಟ್ಟಿ ಎಕ್ಕಾರ್, ದೈಹಿಕ ಶಿಕ್ಷಣ ಬೋಧಕರಾದ ಡಾ. ರಾಮಚಂದ್ರ ಪಾಟ್ಕರ್, ಕೇದಾರೋತ್ಥಾನ ಟ್ರಸ್ಟ್ ನ ಪ್ರಧಾನ ಕಾರ್ಯದರ್ಶಿ ಮುರಳಿ ಕಡೆಕಾರ್, ಕೋಶಾಧಿಕಾರಿ ಕೆ. ರಾಘವೇಂದ್ರ ಕಿಣಿ ಮುಂತಾದವರು ಉಪಸ್ಥಿತರಿದ್ದರು.
If news would be with more photos,it would be better.