ಉಡುಪಿ: ಉಡುಪಿ ಜಿಲ್ಲೆಯಲ್ಲಿ 81 ಮಂದಿಗೆ ಸೋಂಕು ದೃಢಪಟ್ಟಿದೆ. ಉಡುಪಿ ತಾಲೂಕು-47, ಕುಂದಾಪುರ-11, ಕಾರ್ಕಳ-22, ಹೊರ ಜಿಲ್ಲೆಯ ಓರ್ವರು ಸೋಂಕಿಗೆ ಒಳಗಾಗಿದ್ದಾರೆ. 193 ಮಂದಿ ಗುಣಮುಖರಾಗಿದ್ದು ಇಲ್ಲಿಯವರೆಗೆ 69228 ಮಂದಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಜಿಲ್ಲೆಯಲ್ಲಿ 1289 ಸಕ್ರಿಯ ಪ್ರಕರಣಗಳಿವೆ.
ಇಬ್ಬರು ಸೋಂಕಿನಿಂದ ಸಾವನ್ನಪ್ಪಿದ್ದಾರೆ. ಇಲ್ಲಿಯವರೆಗೆ 428 ಮಂದಿ ಕೊರೊನಾ ಸೋಂಕಿನಿಂದ ಮೃತಪಟ್ಟಿದ್ದಾರೆ. ಆಗಸ್ಟ್ 8 ರಂದು 3925 ಮಂದಿಯನ್ನು ಕೋವಿಡ್ ಪರೀಕ್ಷೆಗೆ ಒಳಪಡಿಸಲಾಗಿದೆ. ಇಲ್ಲಿಯವರೆಗೆ ಒಟ್ಟು 819468 ಮಂದಿಯನ್ನು ಪರೀಕ್ಷಿಸಲಾಗಿದೆ.
ದಿನಾಂಕ 10/08/2021 ರಂದು ಉಡುಪಿ ಜಿಲ್ಲೆಯಲ್ಲಿ ಯಾವುದೇ ಕೋವಿಡ್-19 ಲಸಿಕಾ ಶಿಬಿರ ಇರುವುದಿಲ್ಲ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ. ನಾಗಭೂಷಣ ಉಡುಪ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.