ಉಡುಪಿ: ಜಿಲ್ಲಾಡಳಿತ ಹಾಗೂ ಜಿಲ್ಲಾ ಪಂಚಾಯತ್, ಉಡುಪಿ ಜಿಲ್ಲೆ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಇಂಜಿನಿಯರಿಂಗ್ ಘಟಕ, ಬೆಂಗಳೂರು ಹಾಗೂ ಜಿಲ್ಲಾ ಆಸ್ಪತ್ರೆ ಉಡುಪಿ ಇದರ ಸಹಯೋಗದೊಂದಿಗೆ 250 ಹಾಸಿಗೆಗಳ ಉಡುಪಿ ಜಿಲ್ಲಾಸ್ಪತ್ರೆಯ ನೂತನ ಕಟ್ಟಡದ ಶಂಕುಸ್ಥಾಪನೆಯನ್ನು ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ನೆರವೇರಿಸಿದರು.
ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಡಾll ಕೆ. ಸುಧಾಕರ್, ಸಮಾಜ ಕಲ್ಯಾಣ, ಹಿಂದುಳಿದ ವರ್ಗಗಳ ಕಲ್ಯಾಣ ಸಚಿವ ಕೋಟ ಶ್ರೀನಿವಾಸ ಪೂಜಾರಿ, ಇಂಧನ, ಕನ್ನಡ ಮತ್ತು ಸಂಸ್ಕೃತಿ ಸಚಿವ ವಿ. ಸುನಿಲ್ ಕುಮಾರ್, ಶಾಸಕರುಗಳಾದ ಕೆ. ರಘುಪತಿ ಭಟ್, ಲಾಲಾಜಿ ಆರ್ ಮೆಂಡನ್, ಕರಾವಳಿ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಮಟ್ಟಾರು ರತ್ನಾಕರ ಹೆಗ್ಡೆ, ಜಿಲ್ಲಾಧಿಕಾರಿ ಜಿ. ಜಗದೀಶ್, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ. ನವೀನ್ ಭಟ್ ವೈ ಉಡುಪಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ರಾಘವೇಂದ್ರ ಕಿಣಿ, ಉಡುಪಿ ನಗರಸಭೆ ಅಧ್ಯಕ್ಷೆ ಸುಮಿತ್ರಾ ಆರ್ ನಾಯಕ್, ಉಪಾಧ್ಯಕ್ಷೆ ಲಕ್ಷ್ಮೀ ಮಂಜುನಾಥ ಕೊಳ, ನಗರಸಭಾ ಸದಸ್ಯೆ ರಶ್ಮಿ ಚಿತ್ತರಂಜನ್ ಭಟ್, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಆಯುಕ್ತರಾದ ತ್ರಿಲೋಕಚಂದ್ರ ಮುಂತಾದವರು ಉಪಸ್ಥಿತರಿದ್ದರು.