ಉಡುಪಿ: ಉಡುಪಿ ಜಿಲ್ಲೆಯಲ್ಲಿ ಸರ್ಕಾರಿ ವೈದ್ಯಕೀಯ ಕಾಲೇಜು ಸ್ಥಾಪನೆ ಮಾಡುವ ಬಗ್ಗೆ ವೈದ್ಯಕೀಯ ಪ್ರಕೋಷ್ಠ ಮತ್ತು ಜಯಂಟ್ಸ್ ಗ್ರೂಪ್ ಆಫ್ ಬ್ರಹ್ಮಾವರ ಇದರ ವತಿಯಿಂದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಮನವಿಯನ್ನು ಸಲ್ಲಿಸಲಾಯಿತು.
ವೈದ್ಯಕೀಯ ಪ್ರಕೋಷ್ಠದ ಸಂಚಾಲಕ ಡಾ. ರಾಮಚಂದ್ರ ಕಾಮತ್, ಡಾ. ವಿದ್ಯಾಧರ ಶೆಟ್ಟಿ, ಮಧುಸೂಧನ್ ಹೇರೂರು, ಜಯಂಟ್ಸ್ ಅಧ್ಯಕ್ಷ ಸುಂದರ ಪೂಜಾರಿ, ಶ್ರೀನಾಥ್, ಮಿಲ್ಟನ್ ಒಲಿವರ್, ರಾಘವೇಂದ್ರ ಪ್ರಭು ಕರ್ವಾಲು ಮುಂತಾದವರಿದ್ದರು.