ಉಡುಪಿ: ಉಡುಪಿ ಜಿಲ್ಲೆಯಲ್ಲಿ 115 ಮಂದಿಗೆ ಸೋಂಕು ದೃಢಪಟ್ಟಿದೆ. ಉಡುಪಿ ತಾಲೂಕು-58, ಕುಂದಾಪುರ-16, ಕಾರ್ಕಳ-39, ಹೊರ ಜಿಲ್ಲೆಯ ಇಬ್ಬರು ಸೋಂಕಿಗೆ ಒಳಗಾಗಿದ್ದಾರೆ. 99 ಮಂದಿ ಗುಣಮುಖರಾಗಿದ್ದು ಇಲ್ಲಿಯವರೆಗೆ 69766 ಮಂದಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಜಿಲ್ಲೆಯಲ್ಲಿ 1274 ಸಕ್ರಿಯ ಪ್ರಕರಣಗಳಿವೆ.
ಓರ್ವರು ಸೋಂಕಿನಿಂದ ಸಾವನ್ನಪ್ಪಿದ್ದಾರೆ. ಇಲ್ಲಿಯವರೆಗೆ 432 ಮಂದಿ ಕೊರೊನಾ ಸೋಂಕಿನಿಂದ ಮೃತಪಟ್ಟಿದ್ದಾರೆ. ಆಗಸ್ಟ್ 12 ರಂದು 6909 ಮಂದಿಯನ್ನು ಕೋವಿಡ್ ಪರೀಕ್ಷೆಗೆ ಒಳಪಡಿಸಲಾಗಿದೆ. ಇಲ್ಲಿಯವರೆಗೆ ಒಟ್ಟು 842560 ಮಂದಿಯನ್ನು ಪರೀಕ್ಷಿಸಲಾಗಿದೆ.