ಮಣಿಪಾಲ: 75ನೇ ಸ್ವಾತಂತ್ರ್ಯೋತ್ಸವದ ಅಂಗವಾಗಿ ಪಾಪ್ಯುಲರ್ ಫ್ರಂಟ್ ಕರ್ನಾಟಕ ರಾಜ್ಯಾದ್ಯಂತ ರಕ್ತದಾನ ಶಿಬಿರ ಅಭಿಯಾನವನ್ನು ಹಮ್ಮಿಕೊಂಡಿದೆ. ಇದರ ಭಾಗವಾಗಿ ಜಿಲ್ಲೆಯಲ್ಲಿ ಒಟ್ಟು ನಾಲ್ಕು ಕಡೆಗಳಲ್ಲಿ ರಕ್ತದಾನ ಶಿಬಿರವನ್ನು ಆಯೋಜಿಸಿ ಸುಮಾರು 200 ಕ್ಕಿಂತಲೂ ಹೆಚ್ಚು ಯೂನಿಟ್ ರಕ್ತ ಸಂಗ್ರಹಿಸಲಾಯಿತು.
ಅಭಿಯಾನದ ಅಂಗವಾಗಿ ಪಾಪ್ಯುಲರ್ ಫ್ರಂಟ್ ಬ್ಲಡ್ ಡೋನರ್ಸ್ ಫಾರಂ ಉಡುಪಿ ವತಿಯಿಂದ ಕೆಎಂಸಿ ಆಸ್ಪತ್ರೆ ಮಣಿಪಾಲ ಇದರ ಸಹಯೋಗದೊಂದಿಗೆ ಸಾರ್ವಜನಿಕ ರಕ್ತದಾನ ಶಿಬಿರವು ಮಣಿಪಾಲದ ಕೆಎಂಸಿ ಆಸ್ಪತ್ರೆಯ ರಕ್ತನಿಧಿಯಲ್ಲಿ ನಡೆಯಿತು.
ಶಿಬಿರದ ಸಭಾ ಕಾರ್ಯಕ್ರಮ ಪಾಪ್ಯುಲರ್ ಫ್ರಂಟ್ ಬ್ಲಡ್ ಡೋನರ್ಸ್ ಫಾರಂ ಉಡುಪಿ ಇದರ ಗೌರವಾಧ್ಯಕ್ಷ ಶೇಕ್ ಖಾಲಿದ್ ಅಧ್ಯಕ್ಷತೆಯಲ್ಲಿ ನಡೆಯಿತು. ಮುಖ್ಯ ಅತಿಥಿಯಾಗಿ ಕೆಎಂಸಿ ಆಸ್ಪತ್ರೆ ರಕ್ತನಿಧಿ ವಿಭಾಗದ ಮುಖ್ಯಸ್ಥರಾಗಿರುವ ಡಾ. ಶಮಿ ಶಾಸ್ತ್ರಿ ರಕ್ತದಾನದ ಮಹತ್ವದ ಬಗ್ಗೆ ಮಾತನಾಡಿದರು. ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ ಉಡುಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಫಯಾಜ್ ಅಹ್ಮದ್, ಆಕ್ಸೆಸ್ ಇಂಡಿಯಾ ತರಬೇತುದಾರ ಹಾಗೂ ಹೆಲ್ತ್ ಕೋಚ್ ಆಗಿರುವ ರಿಜ್ವಾನ್ ಅಬ್ದುಲ್ ರೆಹಮಾನ್ ಮಾತನಾಡಿದರು.
ಡಾ. ಮೀನಾ ಕುಮಾರಿ, ಡಾ. ರಾಜೇಂದ್ರನ್, ಪಾಪ್ಯುಲರ್ ಫ್ರಂಟ್ ಬ್ಲಡ್ ಡೋನರ್ಸ್ ಫಾರಂ ಉಡುಪಿ ಅಧ್ಯಕ್ಷ ಸಲ್ಮಾನ್ ಹಾಗೂ ಕಾರ್ಯದರ್ಶಿ ಮಹಮ್ಮದ್ ಮುಸ್ತಫಾ ಉಪಸ್ಥಿತರಿದ್ದರು. ಮಹಮ್ಮದ್ ಮುಸ್ತಫಾ ವಂದಿಸಿದರು. ಮಹಮ್ಮದ್ ಶಫೀಕ್ ನಿರೂಪಿಸಿದರು.