Sunday, September 29, 2024
Sunday, September 29, 2024

ದೇಶ ಸದೃಢಗೊಳ್ಳಲು ಕಾಂಗ್ರೆಸ್ ಕಾರಣ: ಮಾಜಿ ಸಚಿವ ಸೊರಕೆ

ದೇಶ ಸದೃಢಗೊಳ್ಳಲು ಕಾಂಗ್ರೆಸ್ ಕಾರಣ: ಮಾಜಿ ಸಚಿವ ಸೊರಕೆ

Date:

ಉಡುಪಿ: ಕಾಂಗ್ರೆಸ್ ಪಕ್ಷದ ದೇಶಭಕ್ತಿಯನ್ನು ಪ್ರಶ್ನಿಸುವ ಯಾವ ನೈತಿಕತೆಯೂ ಬಿಜೆಪಿಗೆ ಉಳಿದಿಲ್ಲ. ದೇಶಭಕ್ತಿ ಹಾಗೂ ರಾಷ್ಟ್ರಾಭಿಮಾನದಿಂದಲೇ ಕಾಂಗ್ರೆಸ್ ಬ್ರಿಟಿಷರ ವಿರುದ್ಧ ಹೋರಾಡಿ ಸ್ವಾತಂತ್ರ್ಯವನ್ನು ಗಳಿಸುವಲ್ಲಿ ಪ್ರಮುಖ ಪಾತ್ರ ವಹಿಸಿತ್ತು. ದೇಶ ಇಂದು ಸದೃಡಗೊಂಡಿದ್ದರೆ ಅದಕ್ಕೆ ಮೂಲ ಕಾರಣ ಕಾಂಗ್ರೆಸ್. ದೇಶ ಇಂದು ಸ್ವಾತಂತ್ರ್ಯದ ಅಮೃತ ಮಹೋತ್ಸವ ಆಚರಿಸುವ ಸಂದರ್ಭದಲ್ಲಿ ಹಲವಾರು ಸಂಕಷ್ಟಗಳನ್ನು ಎದುರಿಸುತ್ತಿದೆ. ಸರಕಾರದ ಕೋವಿಡ್ ನಿರ್ವಹಣೆಯಲ್ಲಿಯ ವೈಫಲ್ಯ, ರೈತರ ಸಮಸ್ಯೆ, ನಿರುದ್ಯೋಗ ಸಮಸ್ಯೆ ಹಾಗೂ ಬೆಲೆ ಏರಿಕೆಗಳಿಂದ ದೇಶ ತತ್ತರಿಸಿದೆ ಎಂದು ಮಾಜಿ ಸಚಿವ ವಿನಯ ಕುಮಾರ್ ಸೊರಕೆಯವರು ಹೇಳಿದರು.

ಅವರು ಉಡುಪಿ ಜಿಲ್ಲಾ ಕಾಂಗ್ರೆಸ್, ಜಿಲ್ಲಾ ಸೇವಾದಳ ಹಾಗೂ ಉಡುಪಿ ಬ್ಲಾಕ್ ಕಾಂಗ್ರೆಸ್ ವತಿಯಿಂದ ಸರ್ವಿಸ್ ಬಸ್ ನಿಲ್ದಾಣದ ಕ್ಲಾಕ್ ಟವರ್ ಗಾಂಧಿ ಚೌಕ ಬಳಿ ಆಯೋಜಿಸಿದ್ದ ಸ್ವಾತಂತ್ರ್ಯೋತ್ಸವ ಸಂದರ್ಭದಲ್ಲಿ ಗಾಂಧಿ ಪ್ರತಿಮೆಗೆ ಮಾಲಾರ್ಪಣೆ ಮಾಡಿ ಧ್ವಜಾರೋಹಣಗೈದು ಮಾತನಾಡುತ್ತಿದ್ದರು.

ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾದ ಅಶೋಕ್ ಕುಮಾರ್ ಕೊಡವೂರು ಮಾತನಾಡಿ, ಪ್ರಸ್ತುತ ದೇಶವನ್ನು ಕಾಡುತ್ತಿರುವ, ಬಡತನ ಜಾತಿವಾದ ಮತ್ತು ಕೋಮುವಾದಗಳಿಂದ ಮುಕ್ತವಾದ ಪರಿಶುದ್ಧ ನವ ಭಾರತವನ್ನು ನಿರ್ಮಿಸಲು ನಾವೆಲ್ಲಾ ಒಗ್ಗೂಡೋಣ ಎಂದರು.

ದಿನೇಶ್ ಪುತ್ರನ್, ಬಿ. ನರಸಿಂಹ ಮೂರ್ತಿ, ಭಾಸ್ಕರ್ ರಾವ್ ಕಿದಿಯೂರು, ಪ್ರಖ್ಯಾತ್ ಶೆಟ್ಟಿ, ಶಬ್ಬೀರ್ ಅಹ್ಮದ್, ಹರೀಶ್ ಕಿಣಿ, ಕಿಶನ್ ಹೆಗ್ಡೆ ಕೊಳ್ಕೆಬೈಲ್, ಉದ್ಯಾವರ ನಾಗೇಶ್ ಕುಮಾರ್, ಕಿಶೋರ್ ಎರ್ಮಾಳ್, ಹಬೀಬ್ ಅಲಿ, ಕೀರ್ತಿ ಶೆಟ್ಟಿ, ಸದಾಶಿವ ಕಟ್ಟೆಗುಡ್ಡೆ, ಯತೀಶ್ ಕರ್ಕೆರಾ, ಬಾಲಕೃಷ್ಣ ಪೂಜಾರಿ, ಪ್ರಶಾಂತ್ ಜತ್ತನ್ನ, ಲೂಯಿಸ್ ಲೋಬೊ, ಸುರೈಯಾ ಅಂಜುಮ್, ಶಾಂತಾರಾಮ್ ಸಾಲ್ವಾಂಕರ್, ಕೃಷ್ಣಮೂರ್ತಿ ಆಚಾರ್ಯ, ಉಪೇಂದ್ರ ಗಾಣಿಗ, ಶರತ್ ನಾಯ್ಕ್, ರಾಜೇಶ್, ಪ್ರಕಾಶ್ ಕೊಡವೂರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ವಿಶ್ವಸಂಸ್ಥೆಯ ಸಾಮಾನ್ಯ ಸಭೆಯಲ್ಲಿ ಪಾಕ್ ಗೆ ಭಾರತ ತಿರುಗೇಟು

ಯು.ಬಿ.ಎನ್.ಡಿ., ಸೆ.29: ವಿಶ್ವಸಂಸ್ಥೆಯ ಸಾಮಾನ್ಯ ಸಭೆಯಲ್ಲಿ ಪಾಕ್ ಪ್ರಧಾನಿ ಶೆಹಬಾಜ್ ಷರೀಫ್...

ಬಾಸ್ಕೆಟ್ ಬಾಲ್: ಕಾರ್ಕಳ ಜ್ಞಾನಸುಧಾ ವಿದ್ಯಾರ್ಥಿಗಳು ರಾಜ್ಯಮಟ್ಟಕ್ಕೆ

ಗಣಿತನಗರ, ಸೆ.28: ಶಾಲಾ ಶಿಕ್ಷಣ ಇಲಾಖೆ(ಪ.ಪೂ.ಕಾಲೇಜು) ಹಾಗೂ ಗಣಿತನಗರದ ಕಾರ್ಕಳ ಜ್ಞಾನಸುಧಾ...

ಗುರುಪ್ರಸಾದ್ ಎ. ರವರಿಗೆ ಬೀಳ್ಕೊಡುಗೆ

ಮಣಿಪಾಲ, ಸೆ.28: ಸುಮಾರು 34 ವರ್ಷಗಳಿಂದ, ಮಣಿಪಾಲ ತಾಂತ್ರಿಕ ವಿದ್ಯಾಲಯದ ಇಲೆಕ್ಟ್ರಿಕಲ್...

ಪಂಡಿತ್ ದೀನ ದಯಾಳ್ ಉಪಾಧ್ಯಾಯ ಜನ್ಮದಿನಾಚರಣೆ

ಕಾಪು, ಸೆ.28: ಕಾಪು ಮಂಡಲ ಬಿಜೆಪಿ ಕಚೇರಿಯಲ್ಲಿ ಪಂಡಿತ್ ದೀನ ದಯಾಳ್...
error: Content is protected !!