ಮಲ್ಪೆ: ಸರಕಾರಿ ಪ್ರಥಮ ದರ್ಜೆ ಕಾಲೇಜು ಹಾಗೂ ಸ್ನಾತಕೋತ್ತರ ಅಧ್ಯಯನ ಕೇಂದ್ರ ತೆಂಕನಿಡಿಯೂರು, ಉಡುಪಿ ಇಲ್ಲಿ ೭೫ನೇ ಸ್ವಾತಂತ್ರ್ಯೋತ್ಸವ ಸಂಭ್ರಮದಿಂದ ಆಚರಿಸಲಾಯಿತು. ಕಾಲೇಜಿನ ಪ್ರಾಂಶುಪಾಲ ಡಾ. ಗಣನಾಥ ಶೆಟ್ಟಿ ಎಕ್ಕಾರು ಧ್ವಜಾರೋಹಣಗೈದರು. ಬಳಿಕ ಮಾತನಾಡಿದ ಅವರು, ಸಂವಿಧಾನದ ಆಶಯಗಳಾದ ಸಮಾನತೆ, ಸಹೋದರತೆ, ಸ್ವಾತಂತ್ರ್ಯ ಇವುಗಳನ್ನು ಅರ್ಥಮಾಡಿಕೊಂಡು ಅನುಸರಿಸಬೇಕು ಹಾಗೂ ನಾಗರಿಕರ ಕರ್ತವ್ಯಗಳನ್ನು ನಿಷ್ಠೆಯಿಂದ ಪಾಲಿಸಬೇಕು. ಮಾನವ ಸಂಪನ್ಮೂಲ ಅಭಿವೃದ್ಧಿಯ ಕಡೆಗೆ ಅಗತ್ಯವಾಗಿ ಗಮನ ನೀಡಬೇಕು. ಕೋವಿಡ್ ಸಂಕಷ್ಟದ ಸಮಯದಲ್ಲಿ ದೇಶದ ಹಿತಾಸಕ್ತಿಗಾಗಿ ಪ್ರತಿಯೊಬ್ಬರು ದುಡಿಯುವುದು ನಿಜವಾದ ದೇಶ ಸೇವೆ.
ಸ್ವಾತಂತ್ರ್ಯಕ್ಕಾಗಿ ತ್ಯಾಗ ಮಾಡಿದ ಮಹಾತ್ಮರನ್ನು ಈ ಸಂದರ್ಭದಲ್ಲಿ ಅವರು ಸ್ಮರಿಸಿದರು. ಸ್ವಾತಂತ್ರ್ಯ ಅಮೃತ ಮಹೋತ್ಸವದ ಅಂಗವಾಗಿ ಕಾಲೇಜಿನಲ್ಲಿ 75 ವಿಶಿಷ್ಟ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗುವುದು ಎಂದರು.
ಐ.ಕ್ಯೂ.ಎ.ಸಿ. ಸಂಚಾಲಕ ಡಾ. ಸುರೇಶ್ ರೈ ಕೆ., ಸ್ನಾತಕೋತ್ತರ ವಿಭಾಗದ ವಿದ್ಯಾರ್ಥಿ ಕ್ಷೇಮಪಾಲನಾ ಸಮಿತಿಯ ಅಧ್ಯಕ್ಷ ಪ್ರಧ್ಯುಮ್ನ, ರೋವರ್ಸ್ ರೇಂಜರ್ಸ್ ವಿದ್ಯಾರ್ಥಿಗಳು ಕಾಲೇಜಿನ ಬೋಧಕ/ಬೋಧಕೇತರ ವರ್ಗದವರು ಉಪಸ್ಥಿತರಿದ್ದರು.
ವಿದ್ಯಾರ್ಥಿ ಕ್ಷೇಮಪಾಲನಾ ಸಮಿತಿಯ ಸಂಚಾಲಕ ಪ್ರೊ. ರಾಧಾಕೃಷ್ಣ ಸ್ವಾಗತಿಸಿ ಕಾರ್ಯಕ್ರಮ ನಿರೂಪಿಸಿದರು. ಡಾ. ದುಗ್ಗಪ್ಪ ಕಜೆಕಾರ್ ವಂದಿಸಿದರು. ಕಾಲೇಜಿನ ದೈಹಿಕ ಶಿಕ್ಷಣ ನಿರ್ದೇಶಕ ಡಾ. ರಾಮಚಂದ್ರ ಪಾಟ್ಕರ್ ಕಾರ್ಯಕ್ರಮ ಸಂಘಟಿಸಿದರು.